ಇಂದು ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವೆ ಮೊದಲ ಟಿ20 ಪಂದ್ಯ ಇಂದು ಜಾರ್ಖಂಡ್ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (JSCA International Stadium Complex) ಮೈದಾನದಲ್ಲಿ ನಡೆಯುತ್ತಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕಿವೀಸ್ ವಿರುದ್ಧದ ಟಿ20 ಮಸರಣಿಗೆ ಮತ್ತೊಮ್ಮೆ ಹಾರ್ದಿಕ್ ಪಾಂಡ್ಯಗೆ (Hardik Pandya) ನಾಯಕರಾಗಿದ್ದಾರೆ. ಈಗಾಗಲೇ ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಮೂಲಕ ನ್ಯೂಜಿಲ್ಯಾಂಡ್ ತಂಡವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ.
ಪಿಚ್ ವರದಿ:
ಇನ್ನು, ಜಾರ್ಖಂಡ್‌ನ ಮೈದಾನ ಹೆಚ್ಚು ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿದೆ. ಹೀಗಾಗಿ ಬೌಲರ್‌ಗಳು ಸಾಕಷ್ಟು ಮೇಲುಗೈ ಸಾಧಿಸುತ್ತಾರೆ. ಈ ಮೈದಾನದಲ್ಲಿ ಮೊದಲ ಇನಿಂಗ್ಸ್‌ನ ಒಟ್ಟು ಮೊತ್ತ 160 ರನ್‌ಗಳ ಆಸುಪಾಸಿನಲ್ಲಿದೆ. ಎರಡನೇ ಇನ್ನಿಂಗ್ಸ್‌ನ ಸರಾಸರಿ ಕೇವಲ 110ರ ಆಸುಪಾಸಿನಲ್ಲಿ ರನ್ ಗಳಿಸಬಹುದಾಗಿದೆ. ರಾಂಚಿಯ ಪಿಚ್‌ನಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳು 3 ಬಾರಿ ನಡೆದಿವೆ. ಒಟ್ಟು 3 ಪಂದ್ಯಗಳಲ್ಲಿ 2ನೇ ಬ್ಯಾಟಿಂಗ್ ಮಾಡಿದ ತಂಡ 2 ಬಾರಿ ಗೆದ್ದಿದೆ. ಡ್ಯೂ ಫ್ಯಾಕ್ಟರ್ ಸಹ ಇಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ.
Captain @hardikpandya7 wins the toss and elects to bowl first in the 1st T20 against New Zealand.
A look at our Playing XI for the game 👇👇
Live - https://t.co/9Nlw3mU634 #INDvNZ @mastercardindia pic.twitter.com/fNd9v9FTZz
— BCCI (@BCCI) January 27, 2023
ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಈವರಗೆ 22 ಪಂದ್ಯಗಳಲ್ಲಿ ಮುಖಾಮುಖಿ ಆಗಲಿದೆ. ಇದರಲ್ಲಿ ಭಾರತ 12ರಲ್ಲಿ ಗೆದ್ದರೆ, ನ್ಯೂಜಿಲ್ಯಾಂಡ್ 9 ಪಂದ್ಯಗಳನ್ನು ಗೆದ್ದಿದೆ. ಅದಲ್ಲದೇ ಭಾರತದಲ್ಲಿ ಉಭಯ ತಂಡಗಳು ಈವರೆಗೆ 8 ಪಂದ್ಯವನ್ನಾಡಿದ್ದು, ಭಾರತ 5 ಮತ್ತು ಕಿವೀಸ್ 3 ಪಂದ್ಯವನ್ನು ಗೆದ್ದಿದೆ.
ಇದನ್ನೂ ಓದಿ: Rohit Sharma: ಮ್ಯಾಚ್ ವಿನ್ ಬಳಿಕ ಇವ್ರಿಗೆ ಟ್ರೋಫಿ ಕೊಟ್ಟ ರೋಹಿತ್ ಶರ್ಮಾ! ಕೋಟಿ ಭಾರತೀಯರ ಹೃದಯ ಗೆದ್ದ ಹಿಟ್ ಮ್ಯಾನ್
ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ:
ಇನ್ನು, ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್ ಪಡೆ 3-0 ಅಂತರದಿಂದ ಗೆಲ್ಲುವ ಮೂಲಕ ಕಿವೀಸ್ ತಂಡವನ್ನು ತವರಿನಲ್ಲಿ ಕ್ಲೀನ್ ಸ್ವೀಪ್ ಮಾಡಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನಕ್ಕೇರಿದೆ. ಇದೀಗ ಟೀಂ ಇಂಡಿಯಾ ಟಿ20 ಸರಣಿಯಲ್ಲೂ ಇದೇ ಆಟವನ್ನು ಪ್ರದರ್ಶಿಸುವ ಮೂಲಕ ಮತ್ತೊಮ್ಮೆ ಸರಣಿಯನ್ನು ಗೆಲ್ಲುವ ಉತ್ಸಾಹದಲ್ಲಿದೆ ಅಲ್ಲದೇ ಈಗಾಗಲೇ ಭಾರತ ತಂಡ ಟಿ20 ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದೆ.
ಹಿರಿಯ ಆಟಗಾರರಿಗೆ ವಿಶ್ರಾಂತಿ:
ಕಿವೀಸ್ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ಮದುವೆಯ ಕಾರಣದಿಂದ ರಜೆಯನ್ನು ತೆಗೆದುಕೊಂಡಿದ್ದಾರೆ. ಇದಲ್ಲದೇ ನ್ಯೂಜಿಲ್ಯಾಂಡ್ ತಂಡದಲ್ಲಿಯೂ ಹಿರಿಯ ಕ್ರಿಕೆಟಿಗರಾದ ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್ಗೆ ವಿಶ್ರಾಂತಿ ನೀಡಲಾಗಿದೆ.
ಭಾರತ- ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ವಾಷಿಂಗ್ಟನ್ ಸುಂದರ್, ದೀಪಕ್ ಹೂಡಾ, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ (ವಾಕ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ಸಿ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ