ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ತಮ್ಮ ಅದ್ಭುತ ಕ್ಯಾಚ್ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ನ್ಯೂಜಿಲೆಂಡ್ ವಿರುದ್ಧದ ಎರಡನೇ ODI ನಲ್ಲಿ (IND vs NZ) ಹಾರ್ದಿಕ್ ಪಾಂಡ್ಯ (Hardik Pandya) ಅವರು ಉತ್ತಮ ಕ್ಯಾಚ್ ಮೂಲಕ ಎಲ್ಲರ ಗಮನ ಸೆಳೆದರು. ಈ ಕ್ಯಾಚ್ ಪಂದ್ಯದ ದಿಕ್ಕನ್ನೇ ಬದಲಿಸಿತು. 3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆ ಸಾಧಿಸಿದೆ. ರಾಯ್ಪುರದಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ ಒಂದು ಬಾರಿ 15 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. 34.3 ಓವರ್ಗಳಿಗೆ 10 ವಿಕೆಟ್ ನಷ್ಟಕ್ಕೆ 108 ರನ್ಗಳಿಸುವ ಮೂಲಕ ಭಾರತಕ್ಕೆ 109 ರನ್ಗಳ ಅಲ್ಪಮೊತ್ತದ ಟಾರ್ಗೆಟ್ ನೀಡಿದೆ.
ಅದ್ಭುತ ಕ್ಯಾಚ್ ಹಿಡಿದ ಹಾರ್ದಿಕ್:
ಹಾರ್ದಿಕ್ ಪಾಂಡ್ಯ ನ್ಯೂಜಿಲೆಂಡ್ ಇನಿಂಗ್ಸ್ ನ 10ನೇ ಓವರ್ ಬೌಲ್ ಮಾಡಿದರು. ಡೆವೊನ್ ಕಾನ್ವೆ ನಾಲ್ಕನೇ ಎಸೆತದಲ್ಲಿ ನೇರ ಶಾಟ್ ಹೊಡೆದರು. ಈ ಚೆಂಡು ಗಾಳಿಯಲ್ಲಿ ನೆಲದ ಮಟ್ಟದಲ್ಲಿ ಇರುವಾಗ ಪಾಂಡ್ಯ ಒಂದು ಕೈಯಿಂದ ಡೈವಿಂಗ್ ಮಾಡಿ ಅತ್ಯುತ್ತಮ ಕ್ಯಾಚ್ ಹಿಡಿದರು. ಕಾನ್ವೇ 16 ಎಸೆತಗಳಲ್ಲಿ 7 ರನ್ ಗಳಿಸಿ ಔಟಾದರು. ಇದು ಕಿವೀಸ್ ತಂಡದ ನಾಲ್ಕನೇ ವಿಕೆಟ್ ಆಗಿತ್ತು. ಮೊದಲ ಏಕದಿನ ಪಂದ್ಯದಲ್ಲೂ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗದೆ 10 ರನ್ ಗಳಿಸಿ ಔಟಾಗಿದ್ದರು. ಭಾರತಕ್ಕೆ ಬರುವ ಮೊದಲು, ಪಾಕಿಸ್ತಾನದಲ್ಲಿ ಕಿವೀಸ್ ತಂಡ ಗೆಲ್ಲುವಲ್ಲಿ ಕಾನ್ವೆ ಪ್ರಮುಖ ಪಾತ್ರ ವಹಿಸಿದ್ದರು. ಶತಕ ಹಾಗೂ ಅರ್ಧಶತಕದ ನೆರವಿನಿಂದ 153 ರನ್ ಗಳಿಸಿ ಸರಣಿ ಶ್ರೇಷ್ಠ ಎನಿಸಿಕೊಂಡಿದ್ದರು.
𝗪𝗛𝗔𝗧. 𝗔. 𝗖𝗔𝗧𝗖𝗛! 😎
Talk about a stunning grab! 🙌 🙌@hardikpandya7 took a BEAUT of a catch on his own bowling 🔽 #TeamIndia | #INDvNZ | @mastercardindia pic.twitter.com/saJB6FcurA
— BCCI (@BCCI) January 21, 2023
ಡೆವೊನ್ ಕಾನ್ವೆ, 31, ಈ ಪಂದ್ಯದ ತನಕ 16 ODIಗಳ 15 ಇನ್ನಿಂಗ್ಸ್ಗಳಲ್ಲಿ 42 ರ ಸರಾಸರಿಯಲ್ಲಿ 588 ರನ್ ಗಳಿಸಿದ್ದಾರೆ. 2 ಶತಕ ಹಾಗೂ 3 ಅರ್ಧ ಶತಕ ಬಾರಿಸಿದ್ದಾರೆ. 126 ರನ್ ಅವರ ಅತ್ಯುತ್ತಮ ಸ್ಕೋರ್ ಆಗಿದೆ. ಮತ್ತು ಸ್ಟ್ರೈಕ್ ರೇಟ್ 80 ಆಗಿದೆ. ಟೆಸ್ಟ್ ಹಾಗೂ ಟಿ20ಯಲ್ಲೂ ಶತಕ ಬಾರಿಸಿದ್ದಾರೆ. ನ್ಯೂಜಿಲೆಂಡ್ ಪಾಲಿಗೆ ಈ ಪಂದ್ಯ ಮಹತ್ವದ್ದಾಗಿದೆ. ಅಲ್ಲದೇ ಪಾಂಡ್ಯ ಅವರು ಹಿಡಿದ ಈ ಅದ್ಭುತ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಾಯಿಸಿತು. ಇದಕ್ಕೂ ಮುನ್ನ ಹೈದರಾಬಾದ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 12 ರನ್ಗಳ ಜಯ ಸಾಧಿಸಿತ್ತು.
ಭಾರತೀಯರ ಸೂಪರ್ ಬೌಲಿಂಗ್:
ಟಾಸ್ ಗೆದ್ದು ರೋಹಿತ್ ಶರ್ಮಾ ತಪ್ಪು ನಿರ್ಧಾರ ತೆಗೆದುಕೊಂಡರು ಎಂದು ಅನೇಕ ವಿಶ್ಲೇಷಕರು ಹೇಳುತ್ತಿರುವ ನಡುವೆಯೇ ಭಾರತೀಯ ಬೌಲರ್ಗಳು ಭರ್ಜರಿ ಬೌಲಿಂಗ್ ಮಾಡಿದರು. ಭಾರತದ ಪರ ಮೊಹಮ್ಮದ್ ಶಮಿ 6 ಓವರ್ ಬಾಲ್ ಮಾಡಿ 18 ರನ್ಗೆ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಪಡೆದರು. ಜೊತೆಗೆ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು. ಈ ಮೂಲಕ ಭಾರತ ತಂಡದ ಬೌಲರ್ಗಳು ಇಂದು ನ್ಯೂಜಿಲ್ಯಾಂಡ್ ವಿರುದ್ಧ ಸಂಘಟಿತ ದಾಳಿ ನಡೆಸಿದರು.
ಭಾರತ-ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ