ಭಾರತ ತಂಡ ಭಾನುವಾರ ನ್ಯೂಜಿಲೆಂಡ್ (IND vs NZ) ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮೈದಾನಕ್ಕಿಳಿಯಲಿದೆ. ಪ್ರವಾಸಿ ತಂಡ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ 1-0 ಮುನ್ನಡೆ ಸಾಧಿಸಿದೆ. ಭಾರತ (Team India) ಎರಡನೇ ಪಂದ್ಯವನ್ನು ಗೆದ್ದರೆ, ಸರಣಿಯನ್ನು ಉಳಿಯಬಹುದು. ಇಲ್ಲದಿದ್ದರೆ ಟ್ರೋಫಿ ನ್ಯೂಜಿಲೆಂಡ್ (New Zealand) ತಂಡದ ಪಾಲಾಗುತ್ತದೆ. ಹೀಗಾಗಿ ನಾಳೆ ನಡೆಯಲಿರುವ ಭಾರತ ಮತ್ತು ಕಿವೀಸ್ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಭಾರತ ತಂಡ ಪಂದ್ಯವನ್ನು ಗೆಲ್ಲಲೇಬೇಕಾದ ಅನಿರ್ವಾಯತೆಯಲ್ಲಿದೆ.
ಪಂದ್ಯದ ಸಂಪೂರ್ಣ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ T20 ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಜನವರಿ 29 ರಂದು ಭಾನುವಾರ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ T20 ಪಂದ್ಯ ಯಾವಾಗ ಆರಂಭವಾಗುತ್ತದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. 6:30ಕ್ಕೆ ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಟಾಸ್ ನಡೆಯಲಿದೆ.
ಇದನ್ನೂ ಓದಿ: IND vs NZ T20: ಈ 5 ಕಾರಣಗಳಿಂದ ಸೋತ ಟೀ ಇಂಡಿಯಾ, ಆ ಬೌಲರ್ ಲಾಸ್ಟ್ ಓವರ್ ಮಾಡದಿದ್ರೆ ಭಾರತ ಗೆಲ್ತಿತ್ತಂತೆ!
ಪಂದ್ಯದ ನೇರ ಪ್ರಸಾರ ಯಾವ ಟಿವಿ ಚಾನೆಲ್‌ನಲ್ಲಿ?
ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಎರಡನೇ ಟಿ 20 ಪಂದ್ಯದ ನೇರ ಪ್ರಸಾರವನ್ನು ವಿವಿಧ ಭಾಷೆಗಳಲ್ಲಿ ನೋಡಬಹುದು. ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ಪಂದ್ಯ ಪ್ರಸಾರವಾಗಲಿದೆ.
ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ನೋಡಬಹುದು?
ಭಾರತ-ನ್ಯೂಜಿಲೆಂಡ್ 2ನೇ ಟಿ20 ಪಂದ್ಯದ ಲೈವ್-ಸ್ಟ್ರೀಮಿಂಗ್ ಅನ್ನು ಭಾರತದಲ್ಲಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಪಂದ್ಯಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ, ನೀವು News18 Kannada ವೆಬ್ಸೈಟ್ ಅನುಸರಿಸಬಹುದು.
ಇಬ್ಬರು ಆಟಗಾರರ ಕಳಪೆ ಫಾರ್ಮ್:
ಶುಬ್ಮನ್ ಗಿಲ್ ಮತ್ತು ಅರ್ಷದೀಪ್ ಸಿಂಗ್ ಪಾಂಡ್ಯರ ಸಂಕಷ್ಟವನ್ನು ಹೆಚ್ಚಿಸುತ್ತಿರುವ ಇಬ್ಬರು ಆಟಗಾರರು ಎಂಬ ಮಾತುಗಳು ಕೇಳಿಬರುತ್ತಿವೆ. ಶುಭ್‌ಮನ್ ಏಕದಿನ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, ಇದುವರೆಗೆ ಟಿ20ಯಲ್ಲಿ ಆರಂಭಿಕರಾಗಿ ತಮ್ಮ ಛಾಪು ಮೂಡಿಸಲು ವಿಫಲರಾಗಿದ್ದಾರೆ. ರಾಂಚಿ ಟಿ20ಯಲ್ಲೂ 6 ಎಸೆತಗಳಲ್ಲಿ 7 ರನ್ ಗಳಿಸಿ ಔಟಾದರು.
ಭಾರತ vs ನ್ಯೂಜಿಲ್ಯಾಂಡ್ ತಂಡ:
ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ