ಭಾರತ ಮತ್ತು ನ್ಯೂಜಿಲ್ಯಾಂಡ್ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಇಂದು ಆರಂಭವಾಗಿದೆ. ಇಂದಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಆರಂಭವಾಗಲಿದೆ. ಈಗಾಗಲೇ ಟಿ20 ದ್ವಿಪಕ್ಷೀಯ ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಭಾರತ ಮತ್ತು ನ್ಯೂಜಿಲೆಂಡ್‌ಗೆ (IND v NZ) ತಂಡಗಳಿಗೆ ಈ ಪಂದ್ಯವು ಅತ್ಯಂತ ಮಹತ್ವದ್ದಾಗಿದೆ. ಈಗಾಗಲೇ ಟಾಸ್ ಗೆದ್ದಿರುವ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ. ಈ ಪಂದ್ಯವನ್ನು ಗೆದ್ದ ತಂಡ ಸರಣಿ ಜಯ ದಾಖಲಿಸಲಿದೆ. ಇಂದಿನ ಪಂದ್ಯದಲ್ಲಿ ಚಹಾಲ್ ಬದಲಿಗೆ ಮಲಿಕ್ ಕಣಕ್ಕಿಳಿಯಲಿದ್ದಾರೆ.
ಭಾರತ- ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.
#TeamIndia have won the toss and elect to bat first in the series decider match.
A look at our Playing XI for the game.
Live - https://t.co/1uCKYafzzD #INDvNZ @mastercardindia pic.twitter.com/BbOibgv0kG
— BCCI (@BCCI) February 1, 2023
ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಅಂತಿಮ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ T20 ಅಂತರಾಷ್ಟ್ರೀಯ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು, ಜೊತೆಗೆ DD ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ಆನಂದಿಸಬಹುದು. ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ನೀವು Disney + Hotstar ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.
ಹೇಗಿದೆ ಮೋದಿ ಸ್ಟೇಡಿಯಂನಲ್ಲಿ ಭಾರತದ ದಾಖಲೆ:
ಭಾರತ ಇದುವರೆಗೆ ಅಹಮದಾಬಾದ್‌ನಲ್ಲಿ 6 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ಪೈಕಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. 2021ರಲ್ಲಿ, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಈ ಮೈದಾನದಲ್ಲಿ ಟಿ20 ಪಂದ್ಯವನ್ನು ಆಡಲಾಗಿತ್ತು. ಮೊದಲು ಬ್ಯಾಟ್ ಮಾಡಿದ ತಂಡವು 3 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಚೇಸಿಂಗ್ ತಂಡವು ಅಷ್ಟೇ ಸಂಖ್ಯೆಯ ಪಂದ್ಯಗಳನ್ನು ಗೆದ್ದಿದೆ.
ಈ ಮೊದಲು ಭಾರತ ತಂಡವು ಅಹಮದಾಬಾದ್‌ನಲ್ಲಿ 224 ರನ್ಗಳ ಬೃಹತ್ ಮೊತ್ತ ದಾಖಲಸಿತ್ತು. ಈ ಮೈದಾನದಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಸ್ಕೋರ್ 2 ವಿಕೆಟ್‌ಗೆ 224 ರನ್ ಆಗಿತ್ತು. ಇಲ್ಲಿ ಕನಿಷ್ಠ ಸ್ಕೋರ್ ಎಂದರೆ ಇಂಗ್ಲೆಂಡ್ ತಂಡ 7 ವಿಕೆಟ್‌ಗೆ 124 ಕ್ಕೆ ಆಲ್ಔಟ್ ಆಗಿತ್ತು. ಇಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 17.5 ಓವರ್‌ಗಳಲ್ಲಿ 3 ವಿಕೆಟ್‌ಗೆ 166 ರನ್ ಗಳಿಸಿದ್ದು ಗರಿಷ್ಠ ರನ್ ಚೇಸ್ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ