ನ್ಯೂಜಿಲೆಂಡ್ ವಿರುದ್ಧದ (IND vs NZ) 3 ಪಂದ್ಯಗಳ ODI ಸರಣಿಯ ಮೊದಲು ಭಾರತೀಯ ಕ್ರಿಕೆಟ್ ತಂಡವು ದೊಡ್ಡ ಹಿನ್ನಡೆ ಅನುಭವಿಸಿದೆ. ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ (Shreyas Iyer) ಗಾಯದ ಸಮಸ್ಯೆಯಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಶ್ರೇಯಸ್ ಏಕದಿನ ಸರಣಿಯಿಂದ ಹೊರಗುಳಿದಿರುವ ಬಗ್ಗೆ ಬಿಸಿಸಿಐ (BCCI) ಟ್ವಿಟರ್ ಮೂಲಕ ಅಧಿಕೃತ ಮಾಹಿತಿ ನೀಡಿದೆ. ಶ್ರೇಯಸ್ ಬದಲಿಗೆ ಆರ್ಸಿಬಿ ಯುವ ಆಟಗಾರ ರಜತ್ ಪಾಟಿದಾರ್ (Rajat Patidar) ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಗಾಯದಿಂದಾಗಿ ಅಯ್ಯರ್ ಔಟ್:
ಶ್ರೇಯಸ್ ಅಯ್ಯರ್ ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಗಾಯದಿಂದ ಚೇತರಿಸಿಕೊಳ್ಳಲು ಭಾರತೀಯ ಬ್ಯಾಟ್ಸ್ಮನ್ ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್ಸಿಎ) ಹೋಗಬೇಕಾಗುತ್ತದೆ. ಹೀಗಾಗಿ ಬಿಸಿಸಿಐ ಶ್ರೇಯಸ್ ಅಯ್ಯರ್ ಬದಲಿಗೆ ಯುವ ಆಟಗಾರ ರಜತ್ ಪಾಟಿದಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯು ಜನವರಿ 18 ರಂದು ಅಂದರೆ ನಾಳೆ ಆರಂಭವಾಗಲಿದೆ. ಸರಣಿಯ ಮೊದಲ ಏಕದಿನ ಪಂದ್ಯ ಬುಧವಾರ ಹೈದರಾಬಾದ್ನಲ್ಲಿ ನಡೆಯಲಿದೆ.
UPDATE - Team India batter Shreyas Iyer has been ruled out of the upcoming 3-match ODI series against New Zealand due to a back injury.
Rajat Patidar has been named as his replacement.
More details here - https://t.co/87CTKpdFZ3 #INDvNZ pic.twitter.com/JPZ9dzNiB6
— BCCI (@BCCI) January 17, 2023
ಬಲಗೈ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ಗೆ ಕಳೆದ ವರ್ಷ ಉತ್ತಮವಾಗಿತ್ತು. ಅವರು 2022 ರಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಶ್ರೇಯಸ್ 17 ಏಕದಿನ ಪಂದ್ಯಗಳಲ್ಲಿ 724 ರನ್ ಗಳಿಸಿದ್ದರು. ಆದಾಗ್ಯೂ, 2023ರ ಆರಂಭವು ಶ್ರೇಯಸ್ಗೆ ಉತ್ತಮವಾಗಿರಲಿಲ್ಲ. ಶ್ರೀಲಂಕಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಅವರು ಅಷ್ಟಾಗಿ ಬ್ಯಾಟಿಂಗ್ನಲ್ಲಿ ಅಬ್ಬರಿಸಿರಲಿಲ್ಲ. ಕೊನೆಯ 3 ಪಂದ್ಯಗಳಲ್ಲಿ ಅವರ ಸ್ಕೋರ್ಗಳು 28, 28 ಮತ್ತು 38 ಆಗಿತ್ತು.
ಭಾರತ vs ನ್ಯೂಜಿಲೆಂಡ್ ODI ಸರಣಿ ವೇಳಾಪಟ್ಟಿ:
ಸರಣಿಯ ಮೊದಲ ಏಕದಿನ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ ಜನವರಿ 21 ರಂದು ರಾಯ್ಪುರದಲ್ಲಿ ನಡೆಯಲಿದ್ದು, ಸರಣಿಯ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಜನವರಿ 24 ರಂದು ಇಂದೋರ್ನಲ್ಲಿ ನಡೆಯಲಿದೆ. ಎಲ್ಲಾ ಮೂರು ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 1:30 ರಿಂದ ನಡೆಯಲಿವೆ.
ನ್ಯೂಜಿಲೆಂಡ್ ವಿರುದ್ಧದ ಭಾರತ ODI ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ