ಭಾರತ ಮತ್ತು ನ್ಯೂಜಿಲ್ಯಾಂಡ್ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ನಾಳೆ ನಡೆಯಲಿದೆ. ಈ ಟಿ20 ದ್ವಿಪಕ್ಷೀಯ ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ. ಅಂತಹ ಪರಿಸ್ಥಿತಿಯಲ್ಲಿ, ಇದು ಭಾರತ ಮತ್ತು ನ್ಯೂಜಿಲೆಂಡ್‌ಗೆ (IND v NZ) ಅತ್ಯಂತ ಮಹತ್ವದ್ದಾಗಿದೆ. ಭಾರತ ತಂಡ (Team India) ಗೆಲುವು ಸಾಧಿಸಿದರೆ ಸರಣಿ ವಶಪಡಿಸಿಕೊಳ್ಳಲಿದೆ. ನಾಳಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿದೆ. ರಾಂಚಿಯಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಕಿವೀಸ್ ತಂಡ ಆತಿಥೇಯ ಭಾರತವನ್ನು 21 ರನ್‌ಗಳಿಂದ ಸೋಲಿಸಿದರೆ, ಲಕ್ನೋ ಟಿ20ಯಲ್ಲಿ ಭಾರತ ಪ್ರತಿದಾಳಿ ನಡೆಸಿ 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದಿಕೊಂಡಿತು. ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಕಡಿಮೆ ಸ್ಕೋರಿಂಗ್ ಪಂದ್ಯದಲ್ಲಿ ಭಾರತ 100 ರನ್ ಗಳಿಸಲು 119 ಎಸೆತಗಳನ್ನು ಎದುರಿಸಬೇಕಾಯಿತು. ಹಾಗಿದ್ದರೆ ನಾಳಿನ ಪಂದ್ಯದ ಕುರಿತ ಸಂಪೂರ್ಣ ವಿವರ ಇಲ್ಲಿದೆ.
ಭಾರತ ಮತ್ತು ನ್ಯೂಜಿಲ್ಯಾಂಡ್ ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ನೇ T20 ಅಂತಾರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಫೆಬ್ರವರಿ 1 ನಾಳೆ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ T20 ಅಂತಾರಾಷ್ಟ್ರೀಯ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.
Hello Ahmedabad 👋
We are here for the third & final T20I of the #INDvNZ series 👏 👏#TeamIndia pic.twitter.com/gQ1jPEnPvK
— BCCI (@BCCI) January 30, 2023
ಇದನ್ನೂ ಓದಿ: IPL 2023: ಚೆನ್ನೈ-ಮುಂಬೈ ತಂಡಗಳನ್ನು ಹಿಂದಿಕ್ಕಿದ RCB, ಈ ಸಾಧನೆ ಮಾಡಿದ ಐಪಿಎಲ್ನ ಮೊದಲ ತಂಡ ನಮ್ಮ ಬೆಂಗಳೂರು!
ಭಾರತ-ನ್ಯೂಜಿಲೆಂಡ್ 3ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?
ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ T20 ಅಂತರಾಷ್ಟ್ರೀಯ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು, ಜೊತೆಗೆ DD ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ಆನಂದಿಸಬಹುದು.
3ನೇ T20 ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬಹುದು?
ಅಹಮದಾಬಾದ್‌ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲೆಂಡ್ ಮೂರನೇ T20 ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ನೀವು Disney + Hotstar ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ನ್ಯೂಸ್18 ಕನ್ನಡದಲ್ಲಿ ಪಂದ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ನೀವು ಓದಬಹುದು.
ಭಾರತ - ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ