• Home
  • »
  • News
  • »
  • sports
  • »
  • IND vs SA 2nd T20: ನಾಳೆ ಭಾರತ-ಆಫ್ರಿಕಾ ಮ್ಯಾಚ್​; ಪಂದ್ಯ ಆರಂಭ, ಪಿಚ್​ ರಿಪೋರ್ಟ್ & ಪ್ಲೇಯಿಂಗ್​ 11

IND vs SA 2nd T20: ನಾಳೆ ಭಾರತ-ಆಫ್ರಿಕಾ ಮ್ಯಾಚ್​; ಪಂದ್ಯ ಆರಂಭ, ಪಿಚ್​ ರಿಪೋರ್ಟ್ & ಪ್ಲೇಯಿಂಗ್​ 11

IND vs SA

IND vs SA

IND vs SA 2nd T20: ನಾಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

  • Share this:

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು ನಾಳೆ ಗುವಾಹಟಿಯಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ರೋಹಿತ್ ಶರ್ಮಾ ಪಡೆ (Rohit Sharma) ನಾಳಿನ ಪಂದ್ಯ ಗೆದ್ದು, ಸರಣಿಯ ಕೈವಶ ಮಾಡಿಕೊಳ್ಳುವುದರ ಜೊತೆಗೆ ಐತಿಹಾಸಿಕ ಸಾಧನೆ ಮಾಡಲು ಸಿದ್ಧವಾಗಿದೆ. ಇದರ ಜೊತೆಗೆ ಟಿ20 ವಿಶ್ವಕಪ್‌ಗೂ (T20 World Cup) ಮೊದಲು ಭಾರತ ಆಡುತ್ತಿರುವ ಈ ಕೊನೆಯ ಸರಣಿಯನ್ನು ಗೆದ್ದು, ಮತ್ತಷ್ಟು ಆತ್ಮ ವಿಶ್ವಾಸದಲ್ಲಿ ಆಸ್ಟ್ರೇಲಿಯಾಗೆ ಹಾರಲು ರೋಹಿತ್ ಪಡೆ ಸಜ್ಜಾಗಿದೆ. ಹಾಗಿದ್ದರೆ ನಾಳೆ ನಡೆಯಲಿರುವ ಪಂದ್ಯದ ಸಂಪೂರ್ಣ ವಿವರ ಇಲ್ಲಿದೆ ನೋಡಿ.


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು  ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.ಪಿಚ್​ ವರದಿ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ತಿರುವನಂತಪುರದಲ್ಲಿ ನಡೆದ ಮೊದಲ ಟಿ 20 ಐನಲ್ಲಿ ಆರಾಮದಾಯಕ ಜಯ ಸಾಧಿಸಿದ ಭಾರತ, ಗುವಾಹಟಿಯಲ್ಲಿ ಮೈದಾನಕ್ಕಿಳಿದಾಗ ಸರಣಿಯನ್ನು ಉತ್ತಮಗೊಳಿಸುವ ಗುರಿಯನ್ನು ಹೊಂದಿದೆ. ಚಿಕ್ಕ ಭಾಗದಲ್ಲಿ ಬೌಂಡರಿಗಳನ್ನು ಹೊಂದಿದ್ದರೂ ದೇಶೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಲು ಈ ಮೈದಾನ ಅಷ್ಟು ಉತ್ತಮವಾಗಿಲ್ಲ. ಇಲ್ಲಿ ಭಾರತ ಏಕೈಕ ಇನ್ನಿಂಗ್ಸ್‌ ಆಡಿದ್ದು, ಮೆನ್ ಇನ್ ಬ್ಲೂ 122 ರನ್‌ಗಳಿಗೆ ಆಲೌಟ್ ಆಗಿತ್ತು.  ಹೀಗಾಗಿ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಲ್ಳುವ ಸಾಧ್ಯತೆ ಇದೆ.


ಇದನ್ನೂ ಓದಿ: IND vs SA: ಭಾರತ-ದಕ್ಷಿಣ ಆಫ್ರಿಕಾ ಪಂದ್ಯ, ಐಸಿಸಿ ನೂತನ ಕ್ರಿಕೆಟ್​ ನಿಯಮ ಜಾರಿ; ಏನೆಲ್ಲಾ ಬದಲಾಗಲಿದೆ ನೊಡಿ


ಐತಿಹಾಸ ನಿರ್ಮಿಸಲಿದೆಯೇ ಟೀಂ ಇಂಡಿಯಾ?:


ದಕ್ಷಿಣ ಆಫ್ರಿಕಾ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಐದು ಪಂದ್ಯಗಳ T20I ಸರಣಿಯನ್ನು ಆಡಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ನಿರ್ಣಾಯಕ ಪಂದ್ಯ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಸರಣಿಯು 2-2ರಲ್ಲಿ ಕೊನೆಗೊಂಡಿತು. 2018 ರಿಂದ ತವರಿನಲ್ಲಿ ನಡೆದ T20I ದ್ವಿಪಕ್ಷೀಯ ಸರಣಿಯಲ್ಲಿ ಭಾರತವು ಇನ್ನೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ.


ಇದನ್ನೂ ಓದಿ: T20 World Cup: ಟಿ20 ವಿಶ್ವಕಪ್ ಆಡುತ್ತಾರಾ ಬುಮ್ರಾ? ಮಹತ್ವದ ಹೇಳಿಕೆ​ ನೀಡಿದ ಗಂಗೂಲಿ


IND vs SA  ಸಂಭಾವ್ಯ ಪ್ಲೇಯಿಂಗ್ 11:


ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅಶ್ವಿನ್, ಅರ್ಷದೀಪ್, ಹರ್ಷಲ್ ಪಟೇಲ್, ದೀಪಕ್ ಚಹಾರ್


ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ, ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಶಮ್ಸಿ, ಅನ್ರಿಚ್ ನಾರ್ಟ್ಜೆ

Published by:shrikrishna bhat
First published: