• Home
  • »
  • News
  • »
  • sports
  • »
  • IND vs SA: ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ , ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA: ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ , ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA

IND vs SA

IND vs SA: ಈಗಾಗಲೇ ಟಾಸ್​ ಗೆದ್ದ ದಕ್ಷಿಣ ಆಪ್ರಿಕಾ (South Africa) ತಂಡದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡ ಬ್ಯಾಟಿಂಗ್​ ಆರಂಭಿಸಲಿದೆ.

  • Share this:

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ರೋಹಿತ್ ಶರ್ಮಾ ಪಡೆ (Rohit Sharma)  ಇಂದಿನ ಪಂದ್ಯ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಈಗಾಗಲೇ ಟಾಸ್​ ಗೆದ್ದ ದಕ್ಷಿಣ ಆಪ್ರಿಕಾ (South Africa) ತಂಡದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡ ಬ್ಯಾಟಿಂಗ್​ ಆರಂಭಿಸಲಿದೆ.


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು  ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.ಇತಿಹಾಸ ಸೃಷ್ಟಿಸುತ್ತಾ ಭಾರತ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯಲ್ಲಿ ಈಗಾಗಲೇ ಭಾರತ ತಂಡ ಮೊದಲ ಪಂದ್ಯವನ್ನು ಗೆದ್ದು, 1-0 ಅಂತರದ ಮುನ್ನಡೆ ಸಾಧಿಸಿದೆ. ಇಂದಿನ ಪಂದ್ಯ ಗೆದ್ದಲ್ಲಿ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾದ್ದಲ್ಲಿ ಟೀಂ ಇಂಡಿಯಾ ಹೊಸ ಐತಿಹಾಸಿಕ ಸಾಧನೆ ಮಾಡಲಿದೆ.ಹೌದು, ದಕ್ಷಿಣ ಆಫ್ರಿಕಾ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಐದು ಪಂದ್ಯಗಳ T20I ಸರಣಿಯನ್ನು ಆಡಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ನಿರ್ಣಾಯಕ ಪಂದ್ಯ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಸರಣಿಯು 2-2ರಲ್ಲಿ ಕೊನೆಗೊಂಡಿತು. 2018 ರಿಂದ ತವರಿನಲ್ಲಿ ನಡೆದ T20I ದ್ವಿಪಕ್ಷೀಯ ಸರಣಿಯಲ್ಲಿ ಭಾರತವು ಇನ್ನೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ.


ಇದನ್ನೂ ಓದಿ: Rohit Sharma: ಆಫ್ರಿಕಾ ವಿರುದ್ಧ ರೋಹಿತ್ ಮಾಡ್ತಾರಾ ವಿಶೇಷ ದಾಖಲೆ? ಹಿಟ್​ಮ್ಯಾನ್ ನಾಯಕತ್ವಕ್ಕೆ ಸಿಗುತ್ತಾ ಮತ್ತೊಂದು ಗರಿಮೆ?


ಗುವಾಹಟಿಯಲ್ಲಿ ಟೀಂ ಇಂಡಿಯಾದ ದಾಖಲೆ:


ಭಾರತ ತಂಡ ಇದುವರೆಗೆ ಗುವಾಹಟಿಯಲ್ಲಿ ಮೂರು ಟಿ20 ಪಂದ್ಯಗಳನ್ನು ಆಡಿದೆ. ಅದರಲ್ಲಿ ಭಾರತ 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಸೋಲು ಒಪ್ಪಿಕೊಳ್ಳಬೇಕಾಯಿತು. 2018ರಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್ ಗಳಿಂದ ಸೋಲಿಸಿತ್ತು. 2020ರಲ್ಲಿ ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.


ಭಾರತ-ದಕ್ಷಿಣ ಆಫ್ರಿಕಾ ತಂಡ: 


ಭಾರತ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅಶ್ವಿನ್, ಅರ್ಷದೀಪ್, ಹರ್ಷಲ್ ಪಟೇಲ್, ದೀಪಕ್ ಚಹಾರ್.


ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ, ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ,  ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ.

Published by:shrikrishna bhat
First published: