• Home
  • »
  • News
  • »
  • sports
  • »
  • IND vs SA T20: ಟಾಸ್​ ಗೆದ್ದ ಭಾರತ ತಂಡ; ಸ್ಟಾರ್​ ಪ್ಲೇಯರ್​ ಕಂಬ್ಯಾಕ್, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11​

IND vs SA T20: ಟಾಸ್​ ಗೆದ್ದ ಭಾರತ ತಂಡ; ಸ್ಟಾರ್​ ಪ್ಲೇಯರ್​ ಕಂಬ್ಯಾಕ್, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11​

IND vs SA

IND vs SA

IND vs SA T20: ಟಾಸ್​ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್​ ಮಾಡಲಿದೆ.

  • Share this:

ಆಸ್ಟ್ರೇಲಿಯಾ ವಿರುದ್ಧದ ಯಶಸ್ವಿ T20I ಸರಣಿಯ ನಂತರ, ಭಾರತವು ದಕ್ಷಿಣ ಆಫ್ರಿಕಾವನ್ನು ಮೂರು ಪಂದ್ಯಗಳ T20I ಸರಣಿಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ. ಇಂದಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವಿನ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಮೊದಲ ಪಂದ್ಯವು ತಿರುವನಂತಪುರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈಗಾಗಲೇ ಟಾಸ್​ ಗೆದ್ದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohith Sharma) ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್​ ಮಾಡಲಿದೆ.


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು  ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂನಲ್ಲಿ ನಡೆಯುತ್ತಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.



ಪಿಚ್​ ರಿಪೋರ್ಟ್ ಹವಾಮಾನ ವರದಿ: 


ತಿರುವನಂತಪುರಂನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ಅಕ್ಯುವೆದರ್ ಮುನ್ಸೂಚನೆ ನೀಡಿದೆ. ತಿರುವನಂತಪುರಂನಲ್ಲಿ ಇಂದು ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಮೋಡ ಕವಿದ ವಾತಾವರಣ ಮುಂದುವರಿದರೆ ಸಂಜೆ 7 ಗಂಟೆಯ ನಂತರ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಪಂದ್ಯದ ವೇಳೆ ಅಡ್ಡಿಯಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ: IND vs SA: ಆಫ್ರಿಕಾ ವಿರುದ್ಧ ಗೆದ್ದು ಇತಿಹಾಸ ನಿರ್ಮಿಸಲಿದೆಯೇ ಭಾರತ? ಹೇಗಿದೆ ಉಭಯ ತಂಡಗಳ ಹೆಡ್​ ಟು ಹೆಡ್​


ತಿರುವನಂತಪುರಂನಲ್ಲಿರುವ ಗ್ರೀನ್‌ಫೀಲ್ಡ್ ಇಂಟರ್‌ನ್ಯಾಶನಲ್ ಸ್ಟೇಡಿಯಂ 20-ಓವರ್ ಮಾದರಿಯಲ್ಲಿ ಕೇವಲ ಎರಡು ಪಂದ್ಯಗಳು ನಡೆದಿವೆ. ಕೊನೆಯ ಪಂದ್ಯವನ್ನು 2019 ರಲ್ಲಿ ನಡೆಯಿತು. ಇಲ್ಲಿ ಮೊದಲು ಬ್ಯಾಟ್ ಮಾಡುವ ತಂಡಕ್ಕೆ ಹೆಚ್ಚಿನ ನೆರವು ಸಿಗದಿರಬಹುದು. ಸುಮಾರು 170 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ ಗೆಲುವಿನ ಮೊತ್ತವಾಗಬಹುದು. ಟಾಸ್ ಗೆದ್ದ ನಾಯಕ ಚೇಸ್ ಮಾಡಲು ಯೋಚಿಸುವುದರಿಂದ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳಬಹುದು.


ಹೊಸ ದಾಖಲೆ ನಿರ್ಮಿಸಲು ಟೀಂ ಇಂಡಿಯಾ ರೆಡಿ:


ದಕ್ಷಿಣ ಆಫ್ರಿಕಾ ಈ ವರ್ಷದ ಆರಂಭದಲ್ಲಿ ಭಾರತದಲ್ಲಿ ಐದು ಪಂದ್ಯಗಳ T20I ಸರಣಿಯನ್ನು ಆಡಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ನಿರ್ಣಾಯಕ ಪಂದ್ಯ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಸರಣಿಯು 2-2ರಲ್ಲಿ ಕೊನೆಗೊಂಡಿತು. 2018 ರಿಂದ ತವರಿನಲ್ಲಿ ನಡೆದ T20I ದ್ವಿಪಕ್ಷೀಯ ಸರಣಿಯಲ್ಲಿ ಭಾರತವು ಇನ್ನೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ.


ಇದನ್ನೂ ಓದಿ: IND vs SA ODI: ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾದ ಈ ಸ್ಟಾರ್ ಆಟಗಾರನಿಗೆ ಉಪನಾಯಕನ ಪಟ್ಟ?


ಭಾರತ-ಆಫ್ರಿಕಾ ಪಂದ್ಯ:


ಭಾರತ ತಂಡ:  ರೋಹಿತ್ ಶರ್ಮಾ (c), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (WK), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಆರ್​. ಅಶ್ವಿನ್​, ದೀಪಕ್​ ಚಹರ್​, ಅರ್ಷ್ದೀಪ್ ಸಿಂಗ್


ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಿಲೆ ರುಸ್ಸೋ, ಡೇವಿಡ್ ಮಿಲ್ಲರ್, ಏಡನ್ ಮಾರ್ಕ್ರಾಮ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪೆರ್ನೆಲ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ, ತಬರಿಜ್ ಶಮ್ಸಿ, ಕೇಶವ್ ಮಹಾರಾಜ್

Published by:shrikrishna bhat
First published: