ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಮತ್ತು ಟೆಸ್ಟ್ ಸರಣಿಗೆ ಟೀಂ ಇಂಡಿಯಾ (Team India) ತಂಡವನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ (Rohit sharma), ವಿರಾಟ್ ಕೊಹ್ಲಿ (Virat Kohli) ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಐಪಿಎಲ್ ನಲ್ಲಿ (IPL) ಮಿಂಚು ಹರಿಸಿರುವ ಅರ್ಷದೀಪ್ ಸಿಂಗ್ ಹಾಗೂ ಉಮ್ರಾನ್ ಮಲಿಕ್ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಮೂರು ವರ್ಷಗಳ ನಂತರ ದಿನೇಶ್ ಕಾರ್ತಿಕ್ ಟೀಂ ಇಂಡಿಯಾಗೆ ಮರಳಿದ್ದಾರೆ. ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ತೊರೆದಿದ್ದ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಸರಣಿಯಿಂದ ವಾಪಸಾಗಲಿದ್ದಾರೆ.
ಟಿ20 ಸರಣಿಗೆ ಕನ್ನಡಿಗ ರಾಹುಲ್ ನಾಯಕ:
ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ಕೆಎಲ್ ರಾಹುಲ್ ಅವರನ್ನು ಟೀಂ ಇಂಡಿಯಾ ನಾಯಕರನ್ನಾಗಿ ನೇಮಿಸಲಾಗಿದೆ, ಆದರೆ ಶಿಖರ್ ಧವನ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಶಿಖರ್ ಧವನ್ ಕಳೆದ ವರ್ಷ ಶ್ರೀಲಂಕಾದಲ್ಲಿ ನಡೆದ ODI ಮತ್ತು T20 ಸರಣಿಗೆ ತಂಡದ ನಾಯಕತ್ವ ವಹಿಸಿದ್ದರು, ಆದರೆ ಈ ಬಾರಿ ದಕ್ಷಿಣ ಆಫ್ರಿಕಾ T20 ತಂಡದಲ್ಲಿ ಆಯ್ಕೆಯಾಗಿಲ್ಲ.
ಹಿರಿಯ ಆಟಗಾರರಿಗೆ ವಿಶ್ರಾಂತಿ:
ಇನ್ನು, ಸಾಲು ಸಾಲು ಟೂರ್ನಿಗಳಲ್ಲಿ ಭಾಗವಹಿಸುತ್ತಿರು ಟೀಂ ಇಂಡಿಯಾದ ಹಿರಿಯ ಆಟಗಾರರಿಗೆ ಸೌತ್ ಆಫ್ರಿಕಾ ಟಿ20 ಸರಣಿಯಿಂದ ವಿಶಾಂತ್ರಿ ನೀಡಲಾಗಿದೆ. ಹೀಗಾಗಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರಿತ್ ಬೂಮ್ರಾ ಅವರನ್ನು ತಂಡದಿಂದ ಕೈ ಬಿಡಲಾಗಿದ್ದು, ಇವರುಗಳಿಗೆ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವ ಸಾಧ್ಯತೆಗಳಿದೆ.
ಇದನ್ನೂ ಓದಿ: IPL 2022 PBKS vs SRH: ಪಂಜಾಬ್ - ಹೈದರಾಬಾದ್ ಮುಖಾಮುಖಿ, ಹೇಗಿದೆ ಉಭಯ ತಂಡಗಳ ಬಲಾಬಲ
ಉಮ್ರಾನ್ ಮಲಿಕ್ ಗೆ ಟೀಂ ಇಂಡಿಯಾದಲ್ಲಿ ಸ್ಥಾನ:
ಐಪಿಎಲ್ ನಲ್ಲಿ ಮಿಮಚು ಹರಿಸಿದ ವೇಗಿ ಉಮ್ರಾನ್ ಮಲಿಕ್ ಗೆ ಸೌತ್ ಆಫ್ರಿಕಾದ ಟಿ 20 ಸರಣಿಗೆ ಆತ್ಕೆ ಮಾಡಲಾಗಿದೆ. ಇದರೊಂದಿಗೆ ಅರ್ಷದೀಪ್ ಸಿಂಗ್ ಗೂ ಸಹ ತಂಡದಲ್ಲಿ ಸ್ಥಾನ ಸಿಕ್ಕಿದ್ದು, ಇವರುಗಳ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಭಾರತ T20 ತಂಡ:
ಕೆಎಲ್ ರಾಹುಲ್ (ನಾಯಕ), ರಿತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಹರ್ಷಲ್ ಪಟೇಲ್ , ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.
ಇದನ್ನೂ ಓದಿ: Sourav Ganguly: ಹೊಸ ಮನೆ ಖರೀದಿಸಿದ ಸೌರವ್ ಗಂಗೂಲಿ, 48 ವರ್ಷಗಳ ನಂತರ ವಿಳಾಸ ಬದಲಿಸಿದ ದಾದಾ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ:
ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಕಳೆದ ವರ್ಷ ನಡೆಯದ ಸರಣಿಯ ಕೊನೆಯ ಪಂದ್ಯ ಇದಾಗಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಕೊರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ.
ಭಾರತ ಟೆಸ್ಟ್ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಯಾದವ್, ಪ್ರಸಿದ್ಧ ಕೃಷ್ಣ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ