IND vs SA: 3 ವರ್ಷಗಳ ನಂತರ ಟೀಂ ಇಂಡಿಯಾಕ್ಕೆ ಮರಳಿದ ಕಾರ್ತಿಕ್, ಎಲ್ಲಕ್ಕೂ ಐಪಿಎಲ್ ಕಾರಣವಂತೆ

ಮೂರು ವರ್ಷಗಳ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾಗೆ ಮರಳಿದ್ದಾರೆ. ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ತೊರೆದಿದ್ದ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಸರಣಿಯಿಂದ ವಾಪಸಾಗಲಿದ್ದಾರೆ.

ದಿನೇಶ್ ಕಾರ್ತಿಕ್

ದಿನೇಶ್ ಕಾರ್ತಿಕ್

  • Share this:
ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ (Team India) ತಂಡವನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ (Rohit sharma), ವಿರಾಟ್ ಕೊಹ್ಲಿ (Virat Kohli) ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮೂರು ವರ್ಷಗಳ ನಂತರ ದಿನೇಶ್ ಕಾರ್ತಿಕ್ (Dinesh Karthik) ಟೀಂ ಇಂಡಿಯಾಗೆ ಮರಳಿದ್ದಾರೆ. ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ತೊರೆದಿದ್ದ ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ಸರಣಿಯಿಂದ ವಾಪಸಾಗಲಿದ್ದಾರೆ. ಐಪಿಎಲ್ 2022 ರಲ್ಲಿ ಅದ್ಭುತ ಪ್ರದರ್ಶನದ ನಂತರ 36ರ ಹರೆಯದ ಕಾರ್ತಿಕ್ ಟೀಂ ಇಂಡಿಯಾಗೆ ಮತ್ತೆ ಗ್ರ್ಯಾಂಡ್​ ಆಗಿ ಕಂಬ್ಯಾಕ್ ಮಾಡಿದ್ದಾರೆ.

ಆಸೀಸ್​ ವಿರುದ್ಧ ಕೊನೆಯ ಪಂದ್ಯ:

ದಿನೇಶ್ ಕಾರ್ತಿಕ್ 27 ಫೆಬ್ರವರಿ 2019 ರಂದು ಆಸ್ಟ್ರೇಲಿಯಾ ವಿರುದ್ಧ ತಮ್ಮ ಕೊನೆಯ T20 ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ಸರಣಿಯ ಮೊದಲ ಪಂದ್ಯ ಜೂನ್ 9 ರಂದು ದೆಹಲಿಯಲ್ಲಿ ನಡೆಯಲಿದೆ.

2019ರ ವಿಶ್ವಕಪ್ ಬಳಿಕ ಮೊದಲ ಬಾರಿಗೆ ಟೀಂ ಇಂಡಿಯಾದ ಜೆರ್ಸಿಯಲ್ಲಿ ದಿನೇಶ್ ಕಾರ್ತಿಕ್ ಕಾಣಿಸಿಕೊಳ್ಳಲಿದ್ದಾರೆ. ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಕಾರ್ತಿಕ್ ಟೀಂ ಇಂಡಿಯಾ ಪರ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ Team India ಪ್ರಕಟ, ಮತ್ತೆ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿದ ಕಾರ್ತಿಕ್

ಅಂತರಾಷ್ಟ್ರೀಯ ಟಿ20 ಪಂದ್ಯದಲ್ಲಿ ಕಾರ್ತಿಕ್ ಪ್ರದರ್ಶನ:

ದಿನೇಶ್ ಕಾರ್ತಿಕ್ 32 T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 143.52 ಸ್ಟ್ರೈಕ್ ರೇಟ್‌ನೊಂದಿಗೆ 399 ರನ್ ಗಳಿಸಿದ್ದಾರೆ, ಅವರ ಗರಿಷ್ಠ ಸ್ಕೋರ್ 48 ಆಗಿದೆ. ಐಪಿಎಲ್ 2022 ರಲ್ಲಿ ಕಾರ್ತಿಕ್ 14 ಪಂದ್ಯಗಳಲ್ಲಿ 191.33 ಸ್ಟ್ರೈಕ್ ರೇಟ್‌ನೊಂದಿಗೆ 287 ರನ್ ಗಳಿಸಿದರು. ಅವರ ಅಜೇಯ 66 ಅವರ ಗರಿಷ್ಠ ಸ್ಕೋರ್ ಆಗಿದೆ ಮತ್ತು ಅವರು 9 ಬಾರಿ ಅಜೇಯರಾಗಿ ಉಳಿದಿದ್ದಾರೆ.

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ರಿತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಹರ್ಷಲ್ ಪಟೇಲ್ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಇದನ್ನೂ ಓದಿ: ಫ್ಲೇ ಆಫ್ ನಲ್ಲಿ RCB ತಂಡಕ್ಕೆ ಲಕ್ನೋ ಸವಾಲ್, ಬೆಂಗಳೂರು ತಂಡಕ್ಕೆ ಇವರುಗಳೇ ವಿಲನ್

ಟಿ20 ಸರಣಿಗೆ ಕನ್ನಡಿಗ ರಾಹುಲ್ ನಾಯಕ:

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ಕೆಎಲ್ ರಾಹುಲ್ ಅವರನ್ನು ಟೀಂ ಇಂಡಿಯಾ ನಾಯಕರನ್ನಾಗಿ ನೇಮಿಸಲಾಗಿದೆ, ಆದರೆ ಶಿಖರ್ ಧವನ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಶಿಖರ್ ಧವನ್ ಕಳೆದ ವರ್ಷ ಶ್ರೀಲಂಕಾದಲ್ಲಿ ನಡೆದ ODI ಮತ್ತು T20 ಸರಣಿಗೆ ತಂಡದ ನಾಯಕತ್ವ ವಹಿಸಿದ್ದರು, ಆದರೆ ಈ ಬಾರಿ ದಕ್ಷಿಣ ಆಫ್ರಿಕಾ T20 ತಂಡದಲ್ಲಿ ಆಯ್ಕೆಯಾಗಿಲ್ಲ.

ಭಾರತ-ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ:

1. ಜೂನ್ 9 - ಮೊದಲ ಟಿ20, ದೆಹಲಿ
2. ಜೂನ್ 12 - ಎರಡನೇ ಟಿ20, ಕಟಕ್
3. ಜೂನ್ 14 - ಮೂರನೇ ಟಿ20, ವಿಶಾಖಪಟ್ಟಣ
4. ಜೂನ್ 17 - ನಾಲ್ಕನೇ ಟಿ20, ರಾಜ್‌ಕೋಟ್
5. ಜೂನ್ 19- ಐದನೇ ಟ್ವೆಂಟಿ-20, ಬೆಂಗಳೂರು
Published by:shrikrishna bhat
First published: