ಭಾರತ ಮತ್ತು ಶ್ರೀಲಂಕಾ (IND vs SL ODI) ನಡುವಿನ 3 ಪಂದ್ಯಗಳ ಏಕದಿನ ಸರಣಿಯು ಮೊದಲ ಪಂದ್ಯ ಗುವಾಹಟಿಯ ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ACA Stadium) ಆರಂಭವಾಗಿದೆ. ಈಗಾಗಲೇ ಟಾಸ್ ಗೆದ್ದ ಶ್ರೀಲಂಕಾ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡವು ಬ್ಯಾಟಿಂಗ್ ಆರಂಭಿಸಿದೆ. ಇಂದಿನ ಪಂದ್ಯದಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಕಂಬ್ಯಾಕ್ ಮಾಡಿದ್ದು, ಇಬ್ಬರು ಸ್ಟಾರ್ ಆಟಗಾರರನ್ನು ರೋಹಿತ್ ತಂಡದಿಂದ ಕೈಬಿಟ್ಟಿದ್ದಾರೆ.
ಭಾರತ vs ಶ್ರೀಲಂಕಾ ಹಣಾಹಣಿ:
ಏಕದಿನ ಮಾದರಿಯಲ್ಲಿ ಉಭಯ ತಂಡಗಳ ನಡುವಿನ ಮುಖಾಮುಖಿ ಕುರಿತು ನೋಡುವುದಾದರೆ, ಇಲ್ಲಿ ಎರಡೂ ತಂಡಗಳು 162 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಶ್ರೀಲಂಕಾ ತಂಡದ ವಿರುದ್ಧ ಭಾರತ ತಂಡ ಯಾವಾಗಲೂ ಮೇಲುಗೈ ಸಾಧಿಸಿದೆ. ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 93 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ 57 ಪಂದ್ಯಗಳಲ್ಲಿ ಯಶಸ್ಸು ಕಂಡಿದೆ. ಇದಲ್ಲದೇ 11 ಪಂದ್ಯಗಳ ಫಲಿತಾಂಶ ಹೊರಬಿದ್ದಿಲ್ಲ. ಪಂದ್ಯ ಟೈ ಆಗಿದೆ.
Sri Lanka have won the toss and elect to bowl first in the 1st ODI.
A look at our Playing XI for the game.
Live - https://t.co/262rcUdafb #INDvSL @mastercardindia pic.twitter.com/nd2D6s0rJm
— BCCI (@BCCI) January 10, 2023
ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಅನ್ನು ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ ಎಂದೂ ಕರೆಯಲಾಗುತ್ತದೆ. ಈ ಕ್ರಿಕೆಟ್ ಸ್ಟೇಡಿಯಂನಲ್ಲಿ ಇದುವರೆಗೆ ಒಟ್ಟು ಒಂದು ಅಂತರಾಷ್ಟ್ರೀಯ ಏಕದಿನ ಪಂದ್ಯ ಹಾಗೂ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊದಲ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 10 ಅಕ್ಟೋಬರ್ 2017 ರಂದು ನಡೆಯಿತು. ಇದರಲ್ಲಿ ಭಾರತ ತಂಡ ಎಂಟು ವಿಕೆಟ್ಗಳ ಸೋಲನ್ನು ಎದುರಿಸಬೇಕಾಯಿತು. ಹೀಗಾಗಿ ಇಂದಿನ ಪಂದ್ಯದ ಮೂಲಕವಾದರೂ ಗೆಲುವಿನ ಖಾತೆ ತೆರೆಯುತ್ತದೆಯೇ ಎಂದು ನೊಡಬೇಕಿದೆ.
ಭಾರತ ಪಂದ್ಯಕ್ಕಾಗಿ ಅರ್ಧ ದಿನ ರಜೆ:
ಇನ್ನು, ಗುವಾಹಟಿಯಲ್ಲಿ ನಡೆಯುತ್ತಿರುವ 2ನೇ ಅಂತರಾಷ್ಟ್ರೀಯ ಪಂದ್ಯ ಇದಾಗಿರುವುದರಿಂದ ಅಸ್ಸಾಂ ಸರ್ಕಾರವು ಪಂದ್ಯದ ರೋಚಕತೆ ಹೆಚ್ಚಿಸಲು ಪಂದ್ಯದ ದಿನವಾದ ಇಂದು ಕಾಮ್ರೂಪ್ ಜಿಲ್ಲೆಯ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಿಗೆ ಮತ್ತು ಎಲ್ಲಾ ಖಾಸಗಿ ಸಂಸ್ಥೆಗಳಿಗೂ ಅರ್ಧ ದಿನ ರಜೆಯನ್ನು ಘೋಷಣೆ ಮಾಡಿದೆ. ಈ ವಿಷಯವನ್ನು ಸ್ವತಃ ಸರ್ಕಾರವೇ ಖಚಿತಪಡಿಸಿದೆ. ಅಲ್ಲದೇ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ಕ್ರೀಡಾಂಗಣದ ಸಿದ್ಧತೆಯನ್ನು ಪರಿಶೀಲಿಸಿದ್ದಾರೆ. ಈ ಅರ್ಧ ದಿನದ ರಜೆ ಕೇವಲ ಬರ್ಸಾಪರಾ ಸ್ಟೇಡಿಯಂ ಇರುವ ಕಾಮ್ರೂಪ್ ಜಿಲ್ಲೆಗೆ ಮಾತ್ರ ಅನ್ವಯವಾಗುತ್ತದೆ.
ಇದನ್ನೂ ಓದಿ: Mohammad Kaif: ಅವಳು ಹಿಂದೂ, ಇವನು ಮುಸ್ಲಿಂ; ಟೀಂ ಇಂಡಿಯಾ ಆಟಗಾರನ ಲವ್ ಸ್ಟೋರಿಗೆ ಅಡ್ಡಿಯಾಗಿಲ್ಲ ಧರ್ಮ!
IND vs SL ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಅವಿಷ್ಕ ಫೆರ್ನಾಂಡೊ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ