ಭಾರತ ಮತ್ತು ಶ್ರೀಲಂಕಾ (IND vs SL) ತಂಡಗಳು ಇಂದು ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಭಾರತ ತಂಡವು (Team India) ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಳ್ಳುವ ತವಕದಲ್ಲಿದ್ದರೆ, ಶ್ರೀಲಂಕಾ ಪ್ರತಿದಾಳಿ ಮಾಡಲು ಪ್ರಯತ್ನಿಸುತ್ತದೆ. ಮುಂಬೈ ಟಿ20 ಪಂದ್ಯದಲ್ಲಿ ಭಾರತ 2 ರನ್ಗಳಿಂದ ಶ್ರೀಲಂಕಾವನ್ನು ಸೋಲಿಸಿತು. ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸುವಲ್ಲ ಯಶಸ್ವಿಯಾಗಿತ್ತು. ಈ ಗೆಲುವಿನ ಓಟವನ್ನು ಮುಂದುವರೆಸಲು ಸಿದ್ಧವಾಗಿದೆ. ಇನ್ನು, ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಇಂದಿನ ಪಂದ್ಯ ಎಷ್ಟು ಗಂಟೆಗೆ? ಎಲ್ಲಿ ನೇರಪ್ರಸಾರವಾಗುತ್ತದೆ ಎನ್ನುವುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಗೆಲುವಿನ ಓಟ ಮುಂದುವರೆಸಿದ ಹಾರ್ದಿಕ್:
ಹಾರ್ದಿಕ್ ಪಾಂಡ್ಯ ಇದುವರೆಗೆ 6 ಟಿ20 ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದು, ಅದರಲ್ಲಿ ಟೀಂ ಇಂಡಿಯಾ 5 ಪಂದ್ಯಗಳನ್ನು ಗೆದ್ದಿದೆ ಮತ್ತು ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಪಾಂಡ್ಯ ಮೂರನೇ ಬಾರಿಗೆ ಟೀಂ ಇಂಡಿಯಾ ನಾಯಕರಾಗಿದ್ದಾರೆ. ಪಾಂಡ್ಯ ಭಾರತದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಐರ್ಲೆಂಡ್ ಮತ್ತು ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾದ ನಾಯಕತ್ವ ವಹಿಸಿದ್ದರು. 3 ವರ್ಷಗಳ ನಂತರ ಟೀಂ ಇಂಡಿಯಾ ಪುಣೆಯಲ್ಲಿ ಆಡಲಿದೆ.
ಇಲ್ಲಿದೆ ಪಂದ್ಯದ ಸಂಪೂರ್ಣ ವಿವರ:
ಭಾರತ ಮತ್ತು ಶ್ರೀಲಂಕಾ 2ನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಯಾವಾಗ ನಡೆಯಲಿದೆ?
ಇಂದು ಸಂಜೆ ಭಾರತ ಮತ್ತು ಶ್ರೀಲಂಕಾ 2ನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ.
ಭಾರತ vs ಶ್ರೀಲಂಕಾ 2ನೇ T20 ಅಂತಾರಾಷ್ಟ್ರೀಯ ಪಂದ್ಯ ಎಲ್ಲಿ ನಡೆಯಲಿದೆ?
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ಮತ್ತು ಶ್ರೀಲಂಕಾ 2ನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ.
ಭಾರತ vs ಶ್ರೀಲಂಕಾ 2ನೇ T20 ಅಂತರಾಷ್ಟ್ರೀಯ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ vs ಶ್ರೀಲಂಕಾ ಎರಡನೇ T20 ಅಂತಾರಾಷ್ಟ್ರೀಯ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7:00 ಗಂಟೆಗೆ ಆರಂಭವಾಗಲಿದ್ದು, 6:30ಕ್ಕೆ ಟಾಸ್ ನಡೆಯಲಿದೆ.
ಭಾರತ vs ಶ್ರೀಲಂಕಾ 2ನೇ T20 ಅಂತರಾಷ್ಟ್ರೀಯ ಪಂದ್ಯವನ್ನು ಟಿವಿಯಲ್ಲಿ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಇಂದಿನ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.
ಭಾರತ vs ಶ್ರೀಲಂಕಾ 2ನೇ T20 ಅಂತಾರಾಷ್ಟ್ರೀಯ ಪಂದ್ಯವನ್ನು ಉಚಿತವಾಗಿ ಎಲ್ಲಿ ವೀಕ್ಷಿಸಬೇಕು?
ಡಿಡಿ ಸ್ಪೋರ್ಟ್ಸ್ ಚಾನೆಲ್ನಲ್ಲಿ ನೀವು ಭಾರತ ಮತ್ತು ಶ್ರೀಲಂಕಾ 2ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು.
ಮೊಬೈಲ್ನಲ್ಲಿ ಭಾರತ vs ಶ್ರೀಲಂಕಾ 2 ನೇ T20 ಇಂಟರ್ನ್ಯಾಷನಲ್ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ನೀವು ಮೊಬೈಲ್ನಲ್ಲಿ ಡಿಸ್ನಿ ಹಾಟ್ಸ್ಟಾರ್ನಲ್ಲಿ ಇಂದಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್ಡೇಟ್ಗಳಿಗಾಗಿ ನೀವು ನಮ್ಮ ವೆಬ್ಸೈಟ್ News18 Kannada ಅನುಸರಿಸಬಹುದು.
ಇದನ್ನೂ ಓದಿ: IND vs PAK 2023: ಈ ವರ್ಷ 3 ಬಾರಿ ಮುಖಾಮುಖಿ ಆಗಲಿದೆ ಭಾರತ-ಪಾಕಿಸ್ತಾನ, ಬದ್ಧವೈರಿಗಳ ಸೆಣಸಾಟಕ್ಕೆ ಡೇಟ್ ಫಿಕ್ಸ್!
IND vs SL ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ,ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಥುಮ್ ನಿಸಾಂಕ, ಕುಸಾಲ್ ಮೆಂಡಿಸ್ (ವಿ.ಕೀ), ಧನಂಜಯ್ ಡಿ ಸಿಲ್ವಾ, ಚರಿತಾ ಅಸಲಂಕ, ಭನುಕ ರಾಜಪಕ್ಷ, ದಸೂನ್ ಶಾನಕ (ನಾಯಕ), ವಾನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೇಶ್ ತೀಕ್ಷಣ, ಕಸೂನ್ ರಜಿತ, ದಿಲ್ಷಾನ್ ಮದುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ