ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಕೊನೆಯ ODI (Ind vs Sl) ತಿರುವನಂತಪುರದಲ್ಲಿ ನಡೆಯಲಿದೆ. ಟೀಂ ಇಂಡಿಯಾ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡುವ ಉದ್ದೇಶದಿಂದ ಕಣಕ್ಕಿಳಿಯಲಿದೆ. ಭಾರತ ತಂಡ (Team India) ಈಗಾಗಲೇ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೂರನೇ ಏಕದಿನ ಪಂದ್ಯ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ (Greenfield International Stadium) ನಡೆಯಲಿದೆ. ಹಾಗಾದರೆ ತಿರುವನಂತಪುರಂ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆ ಹೇಗಿದೆ ಮತ್ತು ಈ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದನ್ನು ನೋಡೋಣ ಬನ್ನಿ.
ಟೀಂ ಇಂಡಿಯಾ ದಾಖಲೆ:
ಈ ಮೈದಾನದಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ ಕೇವಲ 1 ಏಕದಿನ ಪಂದ್ಯವನ್ನಾಡಿದೆ. ಅವರು 2018ರಲ್ಲಿ ಕೊನೆಯ ಬಾರಿಗೆ ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ಅನ್ನು 9 ವಿಕೆಟ್ಗಳಿಂದ ಸೋಲಿಸಿತ್ತು. ಕಳೆದ ವರ್ಷ ಇದೇ ಮೈದಾನದಲ್ಲಿ ಟೀಂ ಇಂಡಿಯಾ ಮತ್ತು ಸೌತ್ ನಡುವೆ ಟಿ20 ಪಂದ್ಯ ನಡೆದಿದ್ದು, ಇದರಲ್ಲಿ ಭಾರತ 8 ವಿಕೆಟ್ಗಳ ಜಯ ಸಾಧಿಸಿತ್ತು. ಆ ಪಂದ್ಯದಲ್ಲಿ ಕೆಎಲ್ ರಾಹುಲ್ ಅರ್ಧಶತಕ ಬಾರಿಸಿದ್ದರು. ನಾಳಿನ ಪಂದ್ಯದಲ್ಲಾದರೂ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಅವರಿಬ್ಬರಿಗೆ ಅವಕಾಶ ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.
Hello Trivandrum 👋🏻
We are here for the 3️⃣rd and final #INDvSL ODI ✅#TeamIndia pic.twitter.com/xzpr7UTCMT
— BCCI (@BCCI) January 13, 2023
ಈ ಮೈದಾನದಲ್ಲಿ ಸ್ಪಿನ್ ಬೌಲರ್ಗಳಿಗೆ ಸಾಕಷ್ಟು ನೆರವು ಸಿಗುತ್ತದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಒಬ್ಬರೇ 4 ವಿಕೆಟ್ ಪಡೆದು ಮಿಂಚಿದ್ದರು. ಕಾರಣ ನಾಳೆ ಭಾರತ ತಂಡ ಹೆಚ್ಚಿನ ಸ್ಪಿನರ್ಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಇಲ್ಲಿ ಯಾವ ತಂಡ ಟಾಸ್ ಗೆದ್ದರೂ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: IND VS SL ODI: ಸಂಕ್ರಾಂತಿ ಸಂಭ್ರಮದಲ್ಲಿ ಪದ್ಮನಾಭಸ್ವಾಮಿ ದರ್ಶನ, ಪಂಚೆ ಶಲ್ಯದಲ್ಲಿ ಮಿಂಚಿದ ಟೀಂ ಇಂಡಿಯಾ ಪ್ಲೇಯರ್ಸ್
ಪಂದ್ಯದ ವಿವರ:
ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 3ನೇ ಪಂದ್ಯವು ನಾಳೆ ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಮಧ್ಯಾಹ್ನ 1:30 ISTಗೆ ಪ್ರಾರಂಭವಾಗುತ್ತವೆ. ಏಕದಿನ ಪಂದ್ಯಗಳನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಲೈವ್ ಸ್ಟ್ರೀಮಿಂಗ್ ಡಿಸ್ನಿ+ ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ. ಇನ್ನು, ಪಂದ್ಯದ ಸಂಪೂರ್ಣ ಮಾಹಿತಿಗಾಗಿ News18 Kannada ವೆಬ್ಸೈಟ್ ಅನುಸರಿಸಿ.
IND vs SL ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ದಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್, ನುವಾನಿಡು ಫೆರ್ನಾಂಡೊ, ಅವಿಷ್ಕಾ ಫೆರ್ನಾಂಡೊ, ಚರಿತ್ ಅಸ್ಲಂಕಾ, ಧನಂಜಯ್ ಡಿಸಿಲ್ವಾ, ವನಿಂದು ಹಸರಂಗ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತ, ದುನಿತ್ ವೆಲಾಲ್ಗೆ, ಲಹಿರು ಕುಮಾರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ