ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ಗೆ (Womens T20 WC 2023) ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಹರ್ಮನ್ಪ್ರೀತ್ ಕೌರ್ (Harmanpreet Kaur) 15 ಸದಸ್ಯರ ತಂಡದ ನಾಯಕಿಯಾಗಲಿದ್ದಾರೆ. ಅದೇ ಸಮಯದಲ್ಲಿ ಸ್ಮೃತಿ ಮಂಧಾನ (Smriti Mandhana) ಅವರನ್ನು ತಂಡದ ಉಪನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮಹಿಳಾ ಟಿ20 ವಿಶ್ವಕಪ್ ಮುಂದಿನ ವರ್ಷ ಫೆಬ್ರವರಿ 10 ರಂದು ಆತಿಥೇಯ ದಕ್ಷಿಣ ಆಫ್ರಿಕಾ (South Africa) ಮತ್ತು ಶ್ರೀಲಂಕಾ (Sri Lanka) ನಡುವಿನ ಪಂದ್ಯದೊಂದಿಗೆ ಆರಂಭವಾಗಲಿದೆ. ಟಿ20 ವಿಶ್ವಕಪ್ಗೂ ಮುನ್ನ ಭಾರತ ತಂಡ ಮುಂದಿನ ವರ್ಷ ಜನವರಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೂರು ರಾಷ್ಟ್ರಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇದಕ್ಕಾಗಿ BCCI 18 ಸದಸ್ಯರ ತಂಡವನ್ನು ಪ್ರಕಟಿಸಿದೆ. ವೇಗದ ಬೌಲರ್ ಪೂಜಾ ವಸ್ತ್ರಾಕರ್ (Pooja Vastrakar) ಅವರು ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾರಣ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.
ಸ್ಟಾರ್ ಆಟಗಾರ್ತಿ ತಂಡಕ್ಕೆ ಕಂಬ್ಯಾಕ್:
ಪೂಜಾ ವಸ್ತ್ರಾಕರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಅವರು ತಮ್ಮ ಫಿಟ್ನೆಸ್ ಸಾಬೀತು ಮಾಡಬೇಕಿದೆ. ಒಂದು ವೇಳೆ ಪೂಜಾ ಫಿಟ್ನೆಸ್ ಸಾಬೀತು ಪಡಿಸಲು ಸಾಧ್ಯವಾಗದಿದ್ದಲ್ಲಿ ಅವರ ಜಾಗದಲ್ಲಿ ಮೇಘನಾ ಸಿಂಗ್ ಅವರಿಗೆ ಅವಕಾಶ ನೀಡಬಹುದು. ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತ ತಂಡ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಫೆಬ್ರವರಿ 12 ರಂದು ಕೇಪ್ಟೌನ್ನಲ್ಲಿ ಆಡಲಿದೆ. ಗುಂಪು-2ರಲ್ಲಿ ಭಾರತದೊಂದಿಗೆ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ ಮತ್ತು ಐರ್ಲೆಂಡ್ ತಂಡಗಳಿವೆ. ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯುತ್ತವೆ. ಪಂದ್ಯಾವಳಿಯ ಫೈನಲ್ ಪಂದ್ಯವು ಫೆಬ್ರವರಿ 26 ರಂದು ಕೇಪ್ ಟೌನ್ನಲ್ಲಿ ನಡೆಯಲಿದೆ.
NEWS 🚨 - India squad for ICC Women’s T20 World Cup 2023 & tri-series in South Africa announced.
More details here - https://t.co/3JVkfaDFPN #TeamIndia pic.twitter.com/FJex4VhAG6
— BCCI Women (@BCCIWomen) December 28, 2022
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (ವಿಕೆಟ್ಕೀಪರ್), ರಿಚಾ ಘೋಷ್ (ವಿಕೆಟ್ಕೀಪರ್), ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಶರವನ್, ರೇಣುಕಾ ಶರವನ್, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.
ಮೀಸಲು ಆಟಗಾರರು: ಎಸ್ ಮೇಘನಾ, ಸ್ನೇಹ ರಾಣಾ, ಮೇಘನಾ ಸಿಂಗ್.
ಭಾರತದ ತ್ರಿಕೋನ ಸರಣಿ:
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ಗೆ ಮೊದಲು, ಭಾರತ ತಂಡವು ದಕ್ಷಿಣ ಆಫ್ರಿಕಾದಲ್ಲಿಯೇ ತ್ರಿಕೋನ ಟಿ20 ಸರಣಿಯನ್ನು ಆಡಲಿದೆ. ಭಾರತವಲ್ಲದೆ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ತಂಡವೂ ಇದರಲ್ಲಿ ಭಾಗವಹಿಸಲಿದೆ. ಈ ಸರಣಿಯು ಜನವರಿ 19ರಿಂದ ಪ್ರಾರಂಭವಾಗಲಿದೆ. ಇದಕ್ಕಾಗಿ ಭಾರತ ತಂಡವನ್ನೂ ಪ್ರಕಟಿಸಲಾಗಿದೆ. ಈ ಸರಣಿಗೂ ಹರ್ಮನ್ಪ್ರೀತ್ ಕೌರ್ ಭಾರತ ತಂಡದ ನಾಯಕಿಯಾಗಲಿದ್ದಾರೆ.
ಇದನ್ನೂ ಓದಿ: IND vs SL 2023: ಟೀಂ ಇಂಡಿಯಾ ವಿರುದ್ಧದ ಸರಣಿಗೆ ಶ್ರೀಲಂಕಾ ತಂಡ ಪ್ರಕಟ, ನಿಷೇಧಿತ ಆಟಗಾರನ ಆಯ್ಕೆ
ತ್ರಿಕೋನ ಸರಣಿಗೆ ಭಾರತ ಮಹಿಳಾ ತಂಡ:
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಜೇಶ್ವರಿ ಗಾಯಕ್ವಾಡ್, ರಾಧಾ ಯಾದವ್, ರೇಣುಕಾ ಠಾಕೂರ್, ಮೇಘನಾ ಸಿಂಗ್, ಅಂಜಲಿ, ಅಂಜಲಿ ವರ್ಮಾ (ವಿಕೆಟ್-ಕೀಪರ್) ), ಅಮನ್ಜೋತ್ ಕೌರ್, ಪೂಜಾ ವಸ್ತ್ರಕರ್, ಎಸ್ ಮೇಘನಾ, ಸ್ನೇಹ ರಾಣಾ, ಶಿಖಾ ಪಾಂಡೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ