• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • India vs Australia: ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳಾಪಟ್ಟಿ, ಭಾರತ-ಆಸೀಸ್​ ತಂಡಗಳು ಹೀಗಿವೆ

India vs Australia: ಬಾರ್ಡರ್ ಗವಾಸ್ಕರ್ ಟ್ರೋಫಿ ವೇಳಾಪಟ್ಟಿ, ಭಾರತ-ಆಸೀಸ್​ ತಂಡಗಳು ಹೀಗಿವೆ

IND vs AUS

IND vs AUS

India vs Australi: ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯು ಫೆಬ್ರವರಿ 9 ರಿಂದ ನಾಗ್ಪುರದಲ್ಲಿ ಪ್ರಾರಂಭವಾಗಲಿದೆ. ಇದರ ಸಂಪೂರ್ಣ ವೇಳಾಪಟ್ಟಿ ಈ ಕೆಳಕಂಡಂತಿದೆ.

  • Share this:

ಭಾರತ ಮತ್ತು ಆಸ್ಟ್ರೇಲಿಯಾ (IND sv AUS) ನಡುವಿನ ಬಾರ್ಡರ್​ ಗವಾಸ್ಕರ್​ ಟ್ರೋಫಿ (Border–Gavaskar Trophy) ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಉಭಯ ತಂಡಗಳ ನಡುವೆ ಒಟ್ಟು 4 ಪಂದ್ಯಗಳ ಟೆಸ್ಟ್​ ಸರಣಿ ಇದಾಗಿದ್ದು, ಸರಿಸುಮಾರು ಒಂದು ತಿಂಗಳುಗಳ ಕಾಲ ಈ ಮಹತ್ವದ ಸರಣಿ ನಡೆಯಲಿದೆ. ಅಲ್ಲದೇ ಈ ಸರಣಿ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಸರಣಿಯಲ್ಲಿ ಭಾರತ ತಂಡ ಗೆದ್ದರೆ ಮಾತ್ರ ಮುಂಬರಲಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ (WTC)​ ಫೈನಲ್​ಗೆ ಎಂಟ್ರಿಕೊಡಲಿದೆ. ಹೀಗಾಗಿ ಭಾರತ ತಂಡ (Team India) ಈ ಸರಣಯನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹಾಗಿದ್ದರೆ ಈ ಮಹತ್ವದ ಸರಣಿಯ ಸಂಪೂರ್ಣ ವೇಳಾಪಟ್ಟಿ ಹಾಗೂ ತಂಡಗಳು ಹೇಗಿವೆ ಎಂದು ನೋಡೋಣ ಬನ್ನಿ.


ಭಾರತ-ಆಸೀಸ್​ ಸರಣಿಗೆ 10 ರೂ. ಟಿಕೆಟ್​:


ಇನ್ನು, ವಿದರ್ಭ ಕ್ರಿಕೆಟ್ ಸಂಸ್ಥೆ ವತಿಯಿಂದ ಈ ವರ್ಷ ವಿದ್ಯಾರ್ಥಿಗಳಿಗೆ ವಿಶೇಷ ಆಫರ್​ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಮಹತ್ವ ನೀಡುವ ಕಾರಣ, ವಿಸಿಎ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೆ ಕೇವಲ 10 ರೂಪಾಯಿ ಟಿಕೆಟ್ ದರದಲ್ಲಿ ಪಂದ್ಯವನ್ನು ವೀಕ್ಷಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗಾಗಿ ಅಂದಾಜು 4 ಸಾವಿರ ಟಿಕೆಟ್‌ಗಳನ್ನು ಕಾಯ್ದಿರಿಸಿರುವುದರಿಂದ, ಈ ಟಿಕೆಟ್‌ಗಳನ್ನು ಶಾಲೆಯ ಮೂಲಕ ಮತ್ತು ಆಫ್‌ಲೈನ್ ಮೂಲಕ ಮಾತ್ರ ಖರೀದಿಸಬಹುದು. ಪಂದ್ಯದ ದಿನದಂದು ಗುರುತಿನ ಚೀಟಿಯನ್ನು ಕೊಂಡೊಯ್ಯಬೇಕು. ವಿದ್ಯಾರ್ಥಿಗಳ ಟಿಕೆಟ್‌ಗಳನ್ನು ಹೊರತುಪಡಿಸಿ, ಇತರ ಎಲ್ಲಾ ಟಿಕೆಟ್‌ಗಳು ಸೀಸನ್ ಪಾಸ್‌ಗಳಾಗಿವೆ, ಇದು ಟೆಸ್ಟ್ ಪಂದ್ಯದ ಎಲ್ಲಾ ಐದು ದಿನಗಳವರೆಗೆ ಮಾನ್ಯವಾಗಿರುತ್ತದೆ.


ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:


ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್)


ಇದನ್ನೂ ಓದಿ: Shubman Gill: ಒಂದೇ ಒಂದು ಶತಕಕ್ಕೆ 10 ದಾಖಲೆಗಳು ಉಡೀಸ್​, ಶುಭ್​ಮನ್ ಗಿಲ್​ ಅಬ್ಬರಕ್ಕೆ ದಂಗಾದ ವಿಶ್ವ ಕ್ರಿಕೆಟ್​


ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:


ಮಾರ್ಚ್ 17- ಮೊದಲ ಏಕದಿನ ಪಂದ್ಯ (ವಾಂಖೆಡೆ ಸ್ಟೇಡಿಯಂ, ಮುಂಬೈ)
ಮಾರ್ಚ್ 19- ಎರಡನೇ ಏಕದಿನ ಪಂದ್ಯ (ವೈಎಸ್​ಆರ್ ಸ್ಟೇಡಿಯಂ, ವಿಶಾಖಪಟ್ಟಣಂ)
ಮಾರ್ಚ್ 22- ಮೂರನೇ ಏಕದಿನ ಪಂದ್ಯ (ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ)




ಭಾರತ - ಆಸ್ಟ್ರೇಲಿಯಾ ತಂಡ:


ಭಾರತ ತಂಡ (2 ಟೆಸ್ಟ್​ಗಳಿಗೆ): ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.


ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್

Published by:shrikrishna bhat
First published: