ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡ ಇಂದಿನಿಂದ ಆಸ್ಟ್ರೇಲಿಯಾ (IND vs AUS) ವಿರುದ್ಧದ ಸರಣಿಯ 2ನೇ ಟೆಸ್ಟ್ ಪಂದ್ಯದಲ್ಲಿ ಸೆಣಸುತ್ತಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ (Border–Gavaskar Trophy) ಸರಣಿಯ 4 ಪಂದ್ಯಗಳಲ್ಲಿ ಇದು 2ನೇ ಪಂದ್ಯವಾಗಿದ್ದು, ಈಗಾಗಲೇ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಭಾರತೀಯ ಬೌಲರ್ಗಳ ದಾಳಿಗೆ ತತ್ತರಿಸುವ ಮೂಲಕ ಮೊದಲ ದಿನವೇ ಆಲೌಟ್ ಆಗಿದ್ದಾರೆ. ಆಸೀಸ್ 78.4 ಓವರ್ಗಳಲ್ಲಿ 10 ವಿಕೆಟ್ ಕಳೆದುಕೊಂಡು 263 ರನ್ ಗಳಿಸಿದೆ. ಭಾರತದ ಪರ ಮೊಹಮ್ಮದ್ ಶಮಿ (Mohammed Shami) 4 ವಿಕೆಟ್ ಪಡೆದು ಮಿಂಚಿದರು.
ಮೊದಲ ದಿನವೇ ಆಸೀಸ್ ಆಲೌಟ್:
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಕೇವಲ 78.4 ಓವರ್ಗೆ 263 ರನ್ಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 15 ರನ್, ಉಸ್ಮಾನ್ ಖ್ವಾಜಾ 81 ರನ್, ಮಾರ್ನಸ್ ಲಾಬುಶೇನ್ 15 ರನ್, ಸ್ಟೀವ್ ಸ್ಮಿತ್ ಶೂನ್ಯ, ಟ್ರಾವಿಸ್ ಹೆಡ್ 12 ರನ್, ಪೀಟರ್ ಹ್ಯಾಂಡ್ಸ್‌ಕಾಂಬ್ 72 ರನ್, ಅಲೆಕ್ಸ್ ಕ್ಯಾರಿ ಶೂನ್ಯ, ಪ್ಯಾಟ್ ಕಮಿನ್ಸ್ 33 ರನ್, ನಾಥನ್ ಲಿಯಾನ್ 10 ರನ್, ಟಾಡ್ ಮರ್ಫಿ ಶೂನ್ಯ, ಮ್ಯಾಥ್ಯೂ ಕುಹ್ನೆಮನ್ 6 ರನ್ ಗಳಿಸಿದೆ.
Innings Break!
Australia are all out for 263 in the first innings.
4️⃣ wickets for @MdShami11 👌🏻
3️⃣ wickets apiece for @ashwinravi99 & @imjadeja 👍🏻
Scorecard ▶️ https://t.co/hQpFkyZGW8 #TeamIndia | #INDvAUS pic.twitter.com/RZvGJjsMvo
— BCCI (@BCCI) February 17, 2023
ಇನ್ನು, ಟೀಂ ಇಂಡಿಯಾ ಟಾಸ್ ಸೋತು ಮೊದಲು ಬೌಲಿಂಗ್ ಮಾಡುವ ಮೂಲಕ ಆಸೀಸ್ ಬ್ಯಾಟ್ಸ್ಮನ್ಗಳ ಅಬ್ಬರಕ್ಕೆ ಬ್ರೇಕ್ ಹಾಕಿದರು. ಭಾರತದ ಪರ ಮೊಹಮ್ಮದ್ ಶಮಿ 14.4 ಓವರ್ಗಳಲ್ಲಿ 4 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ 21 ಓವರ್ ಮಾಡಿ ತಲಾ 3 ವಿಕೆಟ್ ಪಡೆದರು.
ಇದನ್ನೂ ಓದಿ: Prithvi Shaw: ಟೀಂ ಇಂಡಿಯಾ ಆಟಗಾರನ ಮೇಲೆ ಹಲ್ಲೆಗೆ ಯತ್ನಿಸಿದ ನಟಿ, ಹೀರೋಯಿನ್ ಸಪ್ನಾ ಗಿಲ್ ಬಂಧನ
ಜಡೇಜಾ ದಾಖಲೆ:
ಆಲ್ರೌಂಡರ್ ರವೀಂದ್ರ ಜಡೇಜಾ ಕ್ರಿಕೆಟ್ನಲ್ಲಿ ಇತಿಹಾಸ ಬರೆದಿದ್ದು, ಟೆಸ್ಟ್ ಕ್ರಿಕೆಟ್ನಲ್ಲಿ ವೇಗವಾಗಿ 250 ವಿಕೆಟ್ ಮತ್ತು 2500 ರನ್ ಗಳಿಸಿದ ಭಾರತ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪ್ರಸ್ತುತ ICC ಟೆಸ್ಟ್ ಆಲ್ರೌಂಡರ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ.
ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ