ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವಿನ 2ನೇ ಟೆಸ್ಟ್ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ (Arun Jaitley Stadium) ನಡೆಯುತ್ತಿದೆ. 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆ ಸಾಧಿಸಿದೆ. ಈಗಾಗಲೇ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು, 35ರ ಹರೆಯದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ (Cheteshwar Pujara) ಅವರ ವೃತ್ತಿ ಜೀವನದಲ್ಲಿ ಇದು 100ನೇ ಟೆಸ್ಟ್ ಪಂದ್ಯವಾಗಿದೆ. ಪೂಜಾರ 100 ಅಥವಾ ಅದಕ್ಕಿಂತ ಹೆಚ್ಚು ಟೆಸ್ಟ್‌ಗಳನ್ನು ಆಡಿದ 13 ನೇ ಭಾರತೀಯರಾಗಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3 ರಲ್ಲಿ ಗೆದ್ದಿದೆ ಮತ್ತು ಅಷ್ಟೇ ಸಂಖ್ಯೆಯ ಪಂದ್ಯಗಳನ್ನು ಡ್ರಾ ಮಾಡಲಾಗಿದೆ.
ಪ್ಲೇಯಿಂಗ್ 11ನಿಂದ ಸ್ಟಾರ್ ಪ್ಲೇಯರ್ ಔಟ್:
ಇನ್ನು, ಟೀಂ ಇಂಡಿಯಾ ಪ್ಲೇಯಿಂಗ್ 11ನಿಂದ ಸ್ಟಾರ್ ಪ್ಲೇಯರ್ ಹೊರಗಿಳಿದಿದ್ದಾರೆ. ಹೌದು, ಶ್ರೇಯಸ್ ಅಯ್ಯರ್ ಮತ್ತೆ ಇಂಜುರಿಯಿಂದ ಗುಣಮುಖರಾಗಿ ತಂಡಕ್ಕೆ ಕಂಬ್ಯಾಕ್ ಮಾಡಿರುವುದರಿಂದ ಅವರಿಗೆ ಪ್ಲೇಯಿಂಗ್ 11ನಲ್ಲಿ ಸ್ಥಾನ ದೊರಕಿದೆ. ಇದರ ನಡುವೆ ಅಯ್ಯರ್ ಕಾರಣದಿಂದ ಟಿ20 ನಂಬರ್ 1 ಸ್ಥಾನದ ಪ್ಲೇಯರ್ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಭಾರತದ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಅಲ್ಲದೇ ಚೇತೇಶ್ವರ್ ಪೂಜಾರ ಈ ಪಂದ್ಯದ ಮೂಲಕ 100ನೇ ಟೆಸ್ಟ್ ಆಡುತ್ತಿದ್ದಾರೆ. ಹೀಗಾಗಿ ಅವರು ಒನ್ ಡೌನ್ ಬರಲಿದ್ದಾರೆ. ಬಳಿಕ ಕೊಹ್ಲಿ ಕಣಕ್ಕಿಳಿಯಲಿದ್ದಾರೆ.
🚨 Team News 🚨
1⃣ change for #TeamIndia as @ShreyasIyer15 is named in the team. #INDvAUS | @mastercardindia
Follow the match ▶️ https://t.co/hQpFkyZGW8
A look at our Playing XI 🔽 pic.twitter.com/L97F8kAcFA
— BCCI (@BCCI) February 17, 2023
ಬಾರ್ಡರ್ ಗವಾಸ್ಕರ್ ಟ್ರೋಫಿ ಅಡಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ 15 ಟೆಸ್ಟ್ ಸರಣಿಗಳು ನಡೆದಿದ್ದು, ಅದರಲ್ಲಿ ಟೀಂ ಇಂಡಿಯಾ 9 ಬಾರಿ ಸರಣಿಯನ್ನು ವಶಪಡಿಸಿಕೊಂಡಿದೆ. ಪ್ರವಾಸಿ ತಂಡ ಇದುವರೆಗೆ 5 ಬಾರಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಭಯ ತಂಡಗಳ ನಡುವೆ ಒಂದು ಸರಣಿ ಡ್ರಾ ಆಗಿದೆ. ಪ್ರಸ್ತುತ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆದಿದ್ದು, ಅಲ್ಲಿ ಭಾರತ ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಗೆದ್ದಿದೆ. ಹೀಗಾಗಿ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ.
ಇದನ್ನೂ ಓದಿ: Prithvi Shaw: ಸೆಲ್ಫಿ ಕೊಡದ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್, ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಸ್ವಲ್ಪದರಲ್ಲೇ ಬಚಾವ್!
ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ