ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾದ (IND vs AUS) ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ (Arun Jaitley Stadium) ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುತ್ತಿದೆ. ಈಗಾಗಲೇ ಮೊದಲ ದಿನದಾಟದ ಭೋಜನ ವಿರಾಮವಾಗಿದ್ದು, ಈ ವೇಳೆಗೆ ಭಾರತ ತಂಡ (Team India) ಮೇಲುಗೈ ಸಾಧಿಸಿದೆ. ಆಸ್ಟ್ರೇಲಿಯ ತನ್ನ ಮೊದಲ ಇನಿಂಗ್ಸ್‌ನಲ್ಲಿ ಭೋಜನ ವಿರಾಮದ ವೇಳೆಗ 3 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದೆ. ಭಾರತದ ಪರ ಆರ್. ಅಶ್ವಿನ್ ಪ್ರಮುಖ 2 ವಿಕೆಟ್ ಪಡೆದಿದ್ದಾರೆ.
ಮತ್ತೆ ವಾರ್ನರ್ ವಿಫಲ:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲಾರಂಭಿಸಿದ ಆಸೀಸ್, ಪ್ರಮುಖ 3 ವಿಕೆಟ್ ಕಳೆದುಕೊಂಡಿದೆ. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಕೇವಲ 15 ರನ್ ಗಳಿಸಿ ಸಿರಾಜ್ಗೆ ವಿಕೆಟ್ ಒಪ್ಪಿಸಿದರು. ಅಲ್ಲದೇ ನಂಬರ್ 1 ಬ್ಯಾಟ್ಸ್ಮನ್ ಆದ ಮಾರ್ನಸ್ ಲಾಬುಶೇನ್ ಸಹ ಕೇವಲ 18 ರನ್ ಗಳಿಸಿ ಅಶ್ವಿನ್ ದಾಳಿಗೆ ಔಟ್ ಆದರು. ಇನ್ನು, ಸ್ಟೀವ್ ಸ್ಮಿತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಸದ್ಯ ಕ್ರೀಸ್ನಲ್ಲಿ ಉಸ್ಮಾನ್ ಖ್ವಾಜಾ 50 ರನ್ ಹಾಗೂ ಟ್ರಾವಿಸ್ ಹೆಡ್ 1 ರನ್ ಗಳಿಸಿ ಆಟವಾಡುತ್ತಿದ್ದಾರೆ.
Lunch on Day 1 of the 2nd Test
Australia 94/3
Two wickets for @ashwinravi99 and a wicket for @MdShami11 in the morning session.
Scorecard - https://t.co/1DAFKevk9X #INDvAUS @mastercardindia pic.twitter.com/6L4lJnRACW
— BCCI (@BCCI) February 17, 2023
ಟೀಂ ಇಂಡಿಯಾ ಟಾಸ್ ಸೋತು ಮೊದಲು ಬೌಲಿಂಗ್ ಆರಂಭಿಸಿದೆ. ಭಾರತದ ಪರ ಮೊಹ್ಮಮದ್ ಸಿರಾಜ್ ಆಸೀಸ್ಗೆ ಆರಂಭಿಕ ಆಘಾತ ನೀಡಿದರು. ಅವರು 6 ಓವರ್ಗೆ 1 ವಿಕೆಟ್ ಪಡೆದರು. ರವಿಚಂದ್ರನ್ ಅಶ್ವಿನ್ ಸಹ ಇಂದು 10 ಓವರ್ ಮಾಡಿ 29 ರನ್ ನೀಡಿ 2 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಭಾರತ ಸದ್ಯ ಮೇಲುಗೈ ಸಾಧಿಸಿದೆ.
ಇದನ್ನೂ ಓದಿ: Chetan Sharma: ಬಿಸಿಸಿಐ ಮುಖ್ಯ ಆಯ್ಕೆಗಾರ ಹುದ್ದೆಗೆ ಚೇತನ್ ಶರ್ಮಾ ರಾಜೀನಾಮೆ, ಧೋನಿಯತ್ತ ಮುಖ ಮಾಡಿದ BCCI
ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಮೇಲುಗೈ:
ಬಾರ್ಡರ್ ಗವಾಸ್ಕರ್ ಟ್ರೋಫಿ ಅಡಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರೆಗೆ 15 ಟೆಸ್ಟ್ ಸರಣಿಗಳು ನಡೆದಿದ್ದು, ಅದರಲ್ಲಿ ಟೀಂ ಇಂಡಿಯಾ 9 ಬಾರಿ ಸರಣಿಯನ್ನು ವಶಪಡಿಸಿಕೊಂಡಿದೆ. ಪ್ರವಾಸಿ ತಂಡ ಇದುವರೆಗೆ 5 ಬಾರಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಉಭಯ ತಂಡಗಳ ನಡುವೆ ಒಂದು ಸರಣಿ ಡ್ರಾ ಆಗಿದೆ. ಪ್ರಸ್ತುತ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆದಿದ್ದು, ಅಲ್ಲಿ ಭಾರತ ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಗೆದ್ದಿದೆ. ಹೀಗಾಗಿ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ.
ಭಾರತ-ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್, ನಾಥನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ