ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ (IND vs AUS) ನಾಳೆಯಿಂದ (ಫೆಬ್ರವರಿ 17) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ (Arun Jaitley Stadium) ನಡೆಯಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ (Border–Gavaskar Trophy) ಅಡಿಯಲ್ಲಿ ನಡೆಯುತ್ತಿರುವ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಇದು ಚೇತೇಶ್ವರ ಪೂಜಾರ ಅವರ 100ನೇ ಟೆಸ್ಟ್ ಪಂದ್ಯವಾಗಿದೆ. ಈ ಟೆಸ್ಟ್ನ್ನು ಸ್ಮರಣೀಯವಾಗಿಸಲು ಪೂಜಾರ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ದಾಖಲೆ ಉತ್ತಮವಾಗಿದೆ. 63 ವರ್ಷಗಳಿಂದ ಇಲ್ಲಿ ಕಾಂಗರೂಗಳ ವಿರುದ್ಧ ಟೀಂ ಇಂಡಿಯಾ ಯಾವುದೇ ಟೆಸ್ಟ್ ಪಂದ್ಯವನ್ನು ಸೋತಿಲ್ಲ.
1959 ರಲ್ಲಿ ಕೊನೆಯ ಬಾರಿಗೆ ಈ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಭಾರತವನ್ನು ಟೆಸ್ಟ್ ಪಂದ್ಯದಲ್ಲಿ ಸೋಲಿಸಿತು. ಅಂದಿನಿಂದ ಇಲ್ಲಿಯವರೆಗೆ ಕಾಂಗರೂಗಳ ವಿರುದ್ಧ ಟೀಂ ಇಂಡಿಯಾ ದೆಹಲಿಯಲ್ಲಿ ಯಾವುದೇ ಟೆಸ್ಟ್ ಪಂದ್ಯವನ್ನು ಸೋತಿಲ್ಲ. ಉಭಯ ತಂಡಗಳು ಇಲ್ಲಿ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 3ರಲ್ಲಿ ಗೆದ್ದಿವೆ. ಆದರೆ 3 ಪಂದ್ಯಗಳು ಡ್ರಾ ಆಗಿವೆ.
ಪಂದ್ಯದ ಸಂಪೂರ್ಣ ವಿವರ:
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಆರಂಭವಾಗಲಿದೆ.
Hard-work 💪
Focus 👌
Smiles 😊#TeamIndia gear up for the 2⃣nd #INDvAUS Test 👍 👍 pic.twitter.com/gY4wkgIlfc
— BCCI (@BCCI) February 16, 2023
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಎಷ್ಟು ಗಂಟೆಗೆ ನಡೆಯಲಿದೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ಬೆಳಗ್ಗೆ 9:30ಕ್ಕೆ ನಡೆಯಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದೆ.
ಇದನ್ನೂ ಓದಿ: Prithvi Shaw: ಸೆಲ್ಫಿ ಕೊಡದ ಪೃಥ್ವಿ ಶಾ ಕಾರಿನ ಮೇಲೆ ಅಟ್ಯಾಕ್, ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ಸ್ವಲ್ಪದರಲ್ಲೇ ಬಚಾವ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ನೇರ ಪ್ರಸಾರವನ್ನು ವೀಕ್ಷಿಸಬಹುದು, ಜೊತೆಗೆ ಡಿಡಿ ಸ್ಪೋರ್ಟ್ಸ್‌ನಲ್ಲಿ ಪಂದ್ಯವನ್ನು ಉಚಿತವಾಗಿ ಆನಂದಿಸಬಹುದು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಸರಣಿಯ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯ ಎಲ್ಲಾ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಅಲ್ಲದೆ, ಲೈವ್ ಅಪ್‌ಡೇಟ್‌ಗಳಿಗಾಗಿ ನೀವು ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಬಹುದು.
IND vs AUS ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (C), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (WK), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11: ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ (WK), ಪೀಟರ್ ಹ್ಯಾಂಡ್ಸ್ಕಾಂಬ್/ಆಶ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್ (C), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ