• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS: ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ, ಪ್ಲೇಯಿಂಗ್ 11 ಹೀಗಿದೆ

IND vs AUS: ನಿರ್ಣಾಯಕ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ, ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ, ಪ್ಲೇಯಿಂಗ್ 11 ಹೀಗಿದೆ

ಭಾರತ ಆಸ್ಟ್ರೇಲಿಯಾ ಟೆಸ್ಟ್ ಸರಣಿ

ಭಾರತ ಆಸ್ಟ್ರೇಲಿಯಾ ಟೆಸ್ಟ್ ಸರಣಿ

ಬಾರ್ಡರ್ ಗವಾಸ್ಕರ್ ಟ್ರೋಫಿಯ (Border Gavaskar Trophy 2023)) ನಾಲ್ಕನೆ ಟೆಸ್ಟ್​ ಪಂದ್ಯದಲ್ಲಿ ಸೆಣಸಾಡಲಿವೆ. ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶ್ವದ ಅತಿ ದೊಡ್ಡ ಸ್ಟೇಡಿಯ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ (Narendra Modi stadium) ಲಿ ನಾಲ್ಕನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ.

ಮುಂದೆ ಓದಿ ...
  • News18 Kannada
  • 3-MIN READ
  • Last Updated :
  • Ahmadabad, India
  • Share this:

ಅಹಮದಾಬಾದ್‌: ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ತಂಡಗಳು ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ  (Border Gavaskar Trophy 2023) ನಾಲ್ಕನೇ ಟೆಸ್ಟ್​ ಪಂದ್ಯದಲ್ಲಿ ಸೆಣಸಾಡಲಿವೆ. ಟಾಸ್​ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ವಿಶ್ವದ ಅತಿ ದೊಡ್ಡದಾದ  ಸ್ಟೇಡಿಯಂ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ (Narendra Modi stadium)  ನಾಲ್ಕನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಈ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯಬೇಕಾದರೆ ಈ ಪಂದ್ಯ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿದೆ. ಇಂದಿನ ಪಂದ್ಯದಲ್ಲಿ ಕೆಎಲ್​ ರಾಹುಲ್​ಗೆ (KL Rahul) ಆಡುವ 11ರ ಬಳಗದಲ್ಲಿ ಅವಕಾಶ ಪಡೆದಿಲ್ಲ. ಮೊದಲೆರಡು ಪಂದ್ಯದಲ್ಲಿ ರಾಹುಲ್​ ವಿಫಲರಾಗಿದ್ದರು, ಹಾಗಾಗಿ  3ನೇ ಪಂದ್ಯದಲ್ಲಿ ರಾಹುಲ್​ ಬದಲಿಗೆ ಗಿಲ್​ ತಂಡದಲ್ಲಿ ಅವಕಾಶ ಪಡೆದರಾದರೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು, ಆದರೂ ಇಂದಿನ ಪಂದ್ಯದಲ್ಲಿ ಅವಕಾಶ ಆರಂಭಿಕನಾಗಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.


ಸಿರಾಜ್ ಬದಲಿಗೆ ಶಮಿಗೆ ಚಾನ್ಸ್​


ಇನ್ನು ಸತತ 3 ಪಂದ್ಯವಾಡಿದ್ದ ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ವಿಶ್ರಾಂತಿ ನೀಡಿ, ಬದಲಿಗೆ ಮೊಹಮ್ಮದ್ ಶಮಿ ಅವಕಾಶ ನೀಡಲಾಗಿದೆ. ಭಾರತ ಈ ಪಂದ್ಯದಲ್ಲೂ 3 ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುತ್ತಿದೆ. ಅಶ್ವಿನ್​, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ, ವೇಗಿಗಳ ವಿಭಾಗದಲ್ಲಿ ಶಮಿ ಜೊತೆಗೆ ಉಮೇಶ್​ ಯಾದವ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ.


ಇದನ್ನೂ ಓದಿ: IPL 2023: ಧೋನಿ-ಕೊಹ್ಲಿಯನ್ನೇ ಹಿಂದಿಕ್ಕಿದ ಕೆಎಲ್‌ ರಾಹುಲ್! ಕನ್ನಡಿಗನ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ!


 ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ತಲುಪಿರುವ ಆಸೀಸ್


ಬಾರ್ಡರ್‌-ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಪಡೆಯುವ ಮೂಲಕ 2-0 ಮುನ್ನಡೆ ಪಡೆದುಕೊಂಡಿದ್ದ ಭಾರತ ತಂಡಕ್ಕೆ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳಿಂದ ಗೆಲುವು ಸಾಧಿಸಿ ತಿರುಗೇಟು ನೀಡಿತ್ತು. ಆ ಮೂಲಕ ಪ್ರವಾಸಿ ತಂಡ ಅಧಿಕೃತವಾಗಿ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದರು.


ಇದೀಗ ಭಾರತ ತಂಡದ ಈ ಪಂದ್ಯವನ್ನು ಗೆದ್ದರೆ 2023ರ ವಿಶ್ವಟೆಸ್ಟ್ ಚಾಂಪಿಯನ್​ಶಿಪ್​ಗೆ ನೇರ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಪಂದ್ಯ ಸೋತರೆ ನ್ಯೂಜಿಲ್ಯಾಂಡ್ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಫಲಿತಾಂಶದ ಮೇಲೆ ಭಾರತದ ಅರ್ಹತೆ ನಿರ್ಧಾರವಾಗಲಿದೆ.




ಪ್ರಧಾನ ಮಂತ್ರಿಗಳಿಂದ ಪಂದ್ಯ ವೀಕ್ಷಣೆ


75 ವರ್ಷದ ಇಂಡೋ-ಆಸ್ಟ್ರೇಲಿಯಾ ಬಾಂಧವ್ಯವನ್ನು ಗುರುತಿಸಲು ಭಾರತ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬೇನೀಸ್ ಪಂದ್ಯದ ಮೊದಲ ದಿನದಾಟ ವೀಕ್ಷಣೆ ಮಾಡಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಂಧವ್ಯಕ್ಕೆ ಈ ವರ್ಷ 75 ವರ್ಷ ತುಂಬಲಿದೆ. ಅದರ ಸವಿನೆನಪಿಗಾಗಿ ಎರಡೂ ದೇಶಗಳ ಪ್ರಧಾನಿಗಳು ವಿಶ್ವದ ಅತಿದೊಡ್ಡ ಕ್ರೀಡಾಂಗಣದ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ. ಇಬ್ಬರೂ ಪ್ರಧಾನ ಮಂತ್ರಿಗಳು ಟಾಸ್ ಮಾಡುವ ಮೊದಲು ಉಭಯ ತಂಡಗಳ ನಾಯಕರಿಗೆ ಕ್ಯಾಪ್ ನೀಡಿದರು. ನಂತರ ವಿಶೇಷವಾಗಿ ಸಂಯೋಜಿಸಿದ್ದ ವಾಹನದಲ್ಲಿ ಮೈದಾನದ ಸುತ್ತಾ ಸುತ್ತು ಹಾಕಿ ಅಭಿಮಾನಿಗಳನ್ನು ಸ್ವಾಗತಿಸಿದರು.


ತಂಡಗಳ ವಿವರ


ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್


ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್

Published by:Rajesha M B
First published: