• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS ODI: ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ; ಸಂಪೂರ್ಣ ತಂಡ, ಪಂದ್ಯದ ವಿವರ ಇಲ್ಲಿದೆ

IND vs AUS ODI: ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ; ಸಂಪೂರ್ಣ ತಂಡ, ಪಂದ್ಯದ ವಿವರ ಇಲ್ಲಿದೆ

IND vs AUS ODI

IND vs AUS ODI

IND vs AUS ODI: ಟೆಸ್ಟ್ ಬಳಿಕ ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಸ್ಟೀವ್ ಸ್ಮಿತ್ ಅವರು ಏಕದಿನದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳಲಿದ್ದಾರೆ.

  • Share this:

ಟೆಸ್ಟ್ ಸರಣಿ ಬಳಿಕ ಇದೀಗ ಭಾರತ ಮತ್ತು ಆಸ್ಟ್ರೇಲಿಯಾ (IND vs AUS ODI) ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ. ಸ್ಟೀವ್ ಸ್ಮಿತ್ (Steve Smith) ಅವರು ಏಕದಿನದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕತ್ವವನ್ನೂ ವಹಿಸಿಕೊಳ್ಳಲಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿ (BGT 2023) ಗೆದ್ದಿರುವ ಭಾರತ ತಂಡ ಏಕದಿನ ಸರಣಿಯನ್ನೂ ಗೆಲ್ಲುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾಗೆ (Team India) ಮರಳುತ್ತಿದ್ದಾರೆ. ಯುಜ್ವೇಂದ್ರ ಚಹಾಲ್ ಅವರಂತಹ ಸ್ಪಿನ್ನರ್‌ಗಳು ಕೂಡ ಕಾಂಗರೂಗಳೊಂದಿಗೆ ಸೆಣಸಲು ಸಿದ್ಧರಾಗಿದ್ದಾರೆ. ODI ಸರಣಿಯ ಸಂಪೂರ್ಣ ವೇಳಾಪಟ್ಟಿ ಮತ್ತು ತಂಡಗಳ ಮಾಹಿತಿ ಇಲ್ಲಿದೆ ನೋಡಿ.


ಪಂದ್ಯದ ವಿವರ:


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಎಲ್ಲ ಪಂದ್ಯಗಳು ಮಧ್ಯಾಹ್ನ ಒಂದೂವರೆ ಗಂಟೆಗೆ ಆರಂಭವಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ನಂತರ ಎರಡೂ ತಂಡಗಳು ವಿಶಾಖಪಟ್ಟಣಕ್ಕೆ ತೆರಳಲಿವೆ. ಅಲ್ಲಿ ಸರಣಿಯ ಎರಡನೇ ಪಂದ್ಯ ಮಾರ್ಚ್ 19 ರಂದು ನಡೆಯಲಿದೆ. ಇದಾದ ನಂತರ ಮಾರ್ಚ್ 22 ರಂದು ಆಸ್ಟ್ರೇಲಿಯಾ ತಂಡ ಭಾರತ ಪ್ರವಾಸದ ಕೊನೆಯ ಪಂದ್ಯವನ್ನು ಆಡಲಿದೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.


ಭಾರತ vs ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ


ಮೊದಲ ಏಕದಿನ - ವಾಂಖೆಡೆ ಸ್ಟೇಡಿಯಂ, ಮುಂಬೈ - 1:30 - ಮಾರ್ಚ್ 17
2ನೇ ಏಕದಿನ - ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣ, ವಿಶಾಖಪಟ್ಟಣ - 1:30 - ಮಾರ್ಚ್ 19
3ನೇ ಏಕದಿನ - ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ - 1:30 - ಮಾರ್ಚ್ 22


ಇದನ್ನೂ ಓದಿ: WTC 2023: ಡಬ್ಲ್ಯುಟಿಸಿ ಫೈನಲ್‌ನಿಂದ ಜಡೇಜಾ - ಅಕ್ಷರ್​ ಔಟ್​! ಟೀಂ ಇಂಡಿಯಾ ಪ್ಲೇಯಿಂಗ್​ 11 ಹೇಗಿದೆ ನೋಡಿ


IND vs AUS ಲೈವ್​ ಸ್ಟ್ರೀಮಿಂಗ್​:


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಇದಲ್ಲದೇ ಡಿಡಿ ಸ್ಪೋರ್ಟ್ಸ್ ಫ್ರೀ ಟು ಏರ್ ಚಾನೆಲ್‌ನಲ್ಲಿಯೂ ಪಂದ್ಯವನ್ನು ಉಚಿತವಾಗಿ ಪಡೆಯಬಹುದು. ಮೊಬೈಲ್‌ನಲ್ಲಿ ಪಂದ್ಯವನ್ನು ಆನಂದಿಸುವ ಅಭಿಮಾನಿಗಳಿಗೆ ಎರಡು ವೇದಿಕೆಗಳು ಲಭ್ಯವಿರಲಿದೆ.
ಡಿಸ್ನಿ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಪಂದ್ಯವನ್ನು ಆನಂದಿಸಬಹುದು. ಇದರೊಂದಿಗೆ ಡಿಡಿ ಸ್ಪೋರ್ಟ್ಸ್‌ನ ಆ್ಯಪ್ ಅನ್ನು ಉಚಿತವಾಗಿ ಡೌನ್‌ಲೋಡ್ ಮಾಡುವ ಮೂಲಕ ಪಂದ್ಯವನ್ನು ವೀಕ್ಷಿಸಬಹುದು. ಏಕದಿನ ಸರಣಿಯ ಬಳಿಕ ಭಾರತ ತಂಡದ ಕ್ರಿಕೆಟಿಗರು ಇನ್ನೆರಡು ತಿಂಗಳು ಐಪಿಎಲ್ ನಲ್ಲಿ ಬ್ಯುಸಿಯಾಗಲಿದ್ದಾರೆ. ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ ಜೂನ್‌ನಲ್ಲಿ ನಡೆಯಲಿದೆ.


ಭಾರತ- ಆಸ್ಟ್ರೇಲಿಯಾ ತಂಡಗಳು:


ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (WK), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಜಯದೇವ್ ಉನದ್ಕತ್.


ಆಸ್ಟ್ರೇಲಿಯಾ ಏಕದಿನ ತಂಡ: ಪ್ಯಾಟ್ ಕಮ್ಮಿನ್ಸ್ (ಸಿ), ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಸೀನ್ ಅಬಾಟ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಜ್ಯೆ ರಿಚರ್ಡ್‌ಸನ್, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಸ್ಟೀವ್ ಸ್ಮಿತ್ ವಾರ್ನರ್, ಆಡಮ್ ಝಂಪಾ

Published by:shrikrishna bhat
First published: