ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು (Team India) ವರ್ಷಾಂತ್ಯದಲ್ಲಿ 3 ಪಂದ್ಯಗಳ ODI ಸರಣಿಯಲ್ಲಿ ಬಾಂಗ್ಲಾದೇಶವನ್ನು (IND vs BAN) ಎದುರಿಸಲು ಸಿದ್ಧವಾಗಿದೆ. ಸರಣಿಯ ಮೊದಲ ಏಕದಿನ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಭರ್ಜರಿ ತಯಾರಿ ನಡೆಸುತ್ತಿವೆ. ಆದರೆ ಕ್ರಿಕೆಟ್ ಅಭಿಮಾನಿಗಳು 50 ಓವರ್ಗಳ ಸಂಪೂರ್ಣ ಆಟವನ್ನು ನೋಡುತ್ತಾರೆಯೇ? ಪಂದ್ಯಕ್ಕೆ ಮಳೆ (Rain) ಅಡ್ಡಿಯಾಗಲಿದೆಯೇ? ಈ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಏಕೆಂದರೆ ಕಳೆದ ಕಿವೀಸ್ (IND vs NZ) ಪ್ರವಾದ ವೇಳೆ ಅರ್ಧದಷ್ಟು ಪಂದ್ಯಗಳು ಮಳೆಯಿಂದ ರದ್ದಾಗಿತ್ತು. ಹಾಗಿದ್ದರೆ ಇಂದಿನ ಪಂದ್ಯದ ಹವಾಮಾನ ವರದಿ ಹೇಗಿದೆ ನೋಡಿ.
ಹವಾಮಾನ ವರದಿ ಹೇಗಿದೆ?:
ಭಾರತ ಮತ್ತು ಬಾಂಗ್ಲಾದೇಶ ತಂಡಗಳು (IND v BAN 1 ನೇ ODI ಹವಾಮಾನ ಮುನ್ಸೂಚನೆ) ಮೀರ್ಪುರದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪ್ರೇಕ್ಷಕರಿಗೆ ಇಡೀ ಪಂದ್ಯವನ್ನು ಆನಂದಿಸುವ ಅವಕಾಶ ಸಿಗುತ್ತದೆ. ಮೀರ್ಪುರದಲ್ಲಿ ತಂಪಾದ ವಾತಾವರಣ ಇರುತ್ತದೆ. ಅದಕ್ಕಾಗಿಯೇ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಬಯಸುತ್ತದೆ. ಪಂದ್ಯದ ದಿನದಂದು ಇಲ್ಲಿನ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.
ಪಿಚ್ ವರದಿ:
ಶೇರ್-ಎ-ಬಾಂಗ್ಲಾ ಸ್ಟೇಡಿಯಂನಲ್ಲಿರುವ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಾಯಕವಾಗಿದೆ. ಆದರೂ ಇದು ಏಕದಿನ ಪಂದ್ಯಗಳಲ್ಲಿ ಆಗುವುದಿಲ್ಲ. ಈ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 53 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 59 ಪಂದ್ಯಗಳನ್ನು ಗೆದ್ದಿದೆ. ಮೊದಲ ಇನ್ನಿಂಗ್ಸ್ನ ಸರಾಸರಿ ಸ್ಕೋರ್ 228 ರನ್ ಆಗಿದ್ದರೆ, ಚೇಸಿಂಗ್ ತಂಡದ ಸರಾಸರಿ ಸ್ಕೋರ್ 197 ರನ್ ಆಗಿದೆ.
ಇದನ್ನೂ ಓದಿ: ICC ODI Rankings: ಐಸಿಸಿ ನೂತನ ಏಕದಿನ ರ್ಯಾಂಕಿಂಗ್ ಪ್ರಕಟ, ರೋಹಿತ್-ಕೊಹ್ಲಿಗೆ ಬಿಗ್ ಶಾಕ್!
ಪಂದ್ಯ ಎಷ್ಟು ಗಂಟೆಗೆ ಆರಂಭ:
ಇಂದು ಭಾರತ ಮತ್ತು ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಮೊದಲ ಏಕದಿನ ಪಂದ್ಯ ನಡೆಯಲಿದೆ. ಇಂದಿನ ಪಂದ್ಯ ಬಾಂಗ್ಲಾದ ಢಾಕಾದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದ್ದು, 11 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯಗಳನ್ನು ಸೋನಿ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ. ಡಿಜಿಟಲ್ನಲ್ಲಿ ಸೋನಿ ಲೈವ್ ಅಪ್ಲಿಕೇಶನ್ನಲ್ಲಿ ನೀವು ಈ ಪಂದ್ಯಗಳನ್ನು ಲೈವ್ ಆಗಿ ವೀಕ್ಷಿಸಬಹುದು. ಇವುಗಳ ಜೊತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.
IND vs BAN ಏಕದಿನ ತಂಡಗಳು:
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಕುಲದೀಪ್ ಸೇನ್, ಶಹಬಾಜ್ ಅಹ್ಮದ್, ಉಮ್ರಾನ್ ಮಲಿಕ್.
ಬಾಂಗ್ಲಾದೇಶ ODI ತಂಡ: ಲಿಟನ್ ದಾಸ್ (c), ನಜ್ಮುಲ್ ಹೊಸೈನ್ ಶಾಂಟೊ, ಯಾಸಿರ್ ಅಲಿ, ಆಸಿಫ್ ಹೊಸೈನ್, ಮಹಮ್ಮದುಲ್ಲಾ, ಮೆಹಿದಿ ಹಸನ್, ಶಕೀಬ್ ಅಲ್ ಹಸನ್, ಅನಾಮುಲ್ ಹಕ್, ಮುಶ್ಫಿಕರ್ ರಹೀಮ್ (wk), ನೂರುಲ್ ಹಸನ್, ಇಬಾದತ್ ಹೊಸೈನ್, ಹಸನ್ ಮಹ್ಮೂದ್, ಮುಸ್ತಾಫ್ ಮಹ್ಮೂದ್, ನಸ್ಸಾಮ್ ಅಹ್ಮದ್, ತಸ್ಕಿನ್ ಅಹ್ಮದ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ