• Home
  • »
  • News
  • »
  • sports
  • »
  • Ind Vs Ban Live Streaming: ಭಾರತ-ಬಾಂಗ್ಲಾ ಪಂದ್ಯವನ್ನು ಉಚಿತವಾಗಿ ನೋಡಬೇಕಾ? ಹಾಗಿದ್ರೆ ಹೀಗೆ ಮಾಡಿ

Ind Vs Ban Live Streaming: ಭಾರತ-ಬಾಂಗ್ಲಾ ಪಂದ್ಯವನ್ನು ಉಚಿತವಾಗಿ ನೋಡಬೇಕಾ? ಹಾಗಿದ್ರೆ ಹೀಗೆ ಮಾಡಿ

IND vs BAN

IND vs BAN

Ind vs Ban 2nd odi Live Streaming: ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯವು ನಾಳೆ ಢಾಕಾದಲ್ಲಿ ನಡೆಯಲಿದಎ. ಆದರೆ ಈ ಪಂದ್ಯದ ನೇರಪ್ರಸಾರವನ್ನು ಹೀಗೆ ಉಚಿತವಾಗಿ ನೋಡಬಹುದು.

  • Share this:

ಭಾರತ ಮತ್ತು ಬಾಂಗ್ಲಾದೇಶ (Ind vs Ban 2nd odi Live Streaming) ತಂಡಗಳು 3 ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯವು ಬುಧವಾರದಂದು (ಡಿಸೆಂಬರ್ 7) ಮುಖಾಮುಖಿಯಾಗಲಿವೆ. ರೋಹಿತ್ ಶರ್ಮಾ ತಂಡವು ಸರಣಿಯಲ್ಲಿ ಉಳಿದುಕೊಳ್ಳಲು ನಾಳಿನ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಮೀರ್‌ಪುರದ ಶೇರ್-ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ (Sher-E-Bangla National Cricket Stadium) ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ 1 ವಿಕೆಟ್‌ನಿಂದ ಭಾರತವನ್ನು ಸೋಲಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 


ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಭಾರತ:


ಸರಣಿಯ ಎರಡನೇ ಏಕದಿನ ಪಂದ್ಯವೂ ಮೀರ್‌ಪುರದಲ್ಲಿ ನಡೆಯಲಿದೆ. ಪ್ರವಾಸಿ ಟೀಂ ಇಂಡಿಯಾ ತಂಡವು ಸರಣಿಯಲ್ಲಿ 0-1 ಹಿನ್ನಡೆಯಲ್ಲಿದ್ದು, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲಗೊಳಿಸಲು ಸಿದ್ಧವಾಗಿದೆ. ಆದರೆ ಆತಿಥೇಯ ತಂಡವು ಸರಣಿಯನ್ನು ಗೆಲ್ಲಲು ಸಜ್ಜಾಗಿದೆ. ಇದು ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಪರಿಣಮಿಸಿದೆ. ಈ ರಣ ರೋಚಕ ಪಂದ್ಯವನ್ನು ನೀವು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಬಾಂಗ್ಲಾದೇಶ ವಿರುದ್ಧದ ಸರಣಿಯ ನೇರ ಪ್ರಸಾರವನ್ನು  ವೀಕ್ಷಿಸಬಹುದು.


ಪಂದ್ಯದ ಸಂಪೂರ್ಣ ವಿವರ:


ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯ ಡಿಸೆಂಬರ್ 7 ರಂದು (ಬುಧವಾರ) ನಡೆಯಲಿದೆ.  ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯವು ಮೀರ್‌ಪುರದ ಶೇರ್-ಇ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 11.30 ರಿಂದ ಆರಂಭವಾಗಲಿದ್ದು, 11 ಗಂಟೆಗೆ ಟಾಸ್​ ಆಗಲಿದೆ. ಭಾರತ vs ಬಾಂಗ್ಲಾದೇಶ ನಡುವಿನ ಮೂರು ಪಂದ್ಯಗಳ ಸರಣಿಯ ಎರಡನೇ ODI ನ ನೇರ ಪ್ರಸಾರವನ್ನು ನೀವು DD SPORTS ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಪಂದ್ಯದ ಲೈವ್ ಅಪ್‌ಡೇಟ್‌ಗಳಿಗಾಗಿ ನಮ್ಮ ವೆಬ್‌ಸೈಟ್ News18 ಕನ್ನಡವನ್ನು ಅನುಸರಿಸಿ.


ಇದನ್ನೂ ಓದಿ:  IND vs BAN 2nd ODI: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಭಾರೀ ಶಾಕ್, ಮೊದಲ ಮ್ಯಾಚ್​ನ ತಪ್ಪಿಗೆ ಇಷ್ಟು ದೊಡ್ಡ ಶಿಕ್ಷೆನಾ?


ಪಿಚ್​ ರಿಪೋರ್ಟ್​:


ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಳೆದ ಐದು ODI ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 212 ರನ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯದಲ್ಲಿ ಸ್ಪಿನ್ನರ್‌ಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.


ಹವಾಮಾನ ವರದಿ ಹೇಗಿದೆ?:


ಭಾರತ ಮತ್ತು ಬಾಂಗ್ಲಾದೇಶ ತಂಡಗಳು 2ನೇ ಏಕದಿನ ಪಂದ್ಯದಲ್ಲಿ ಮೀರ್‌ಪುರದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇರುತ್ತದೆ. ಇದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲಿದೆ. ಪಂದ್ಯದ ದಿನದಂದು ಇಲ್ಲಿನ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.


IND vs BAN ಸಂಭಾವ್ಯ ಪ್ಲೇಯಿಂಗ್​ 11:


ಭಾರತ ಸಂಭಾವ್ಯ ಪ್ಲೇಯಿಂಗ್​ 11: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.


ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್​ 11: ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟ್ಟನ್ ದಾಸ್ (ಸಿ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

Published by:shrikrishna bhat
First published: