ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶಕ್ಕೆ (IND vs BAN) ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ನಾಳೆ ಢಾಕಾದಲ್ಲಿ ನಡೆಯಲಿದೆ. 2023ರ ODI ವಿಶ್ವಕಪ್ಗಾಗಿ (ODI World Cup) ಬಾಂಗ್ಲಾದೇಶ ವಿರುದ್ಧದ ಸರಣಿಯು ಹೆಚ್ಚಿನ ಮಹತ್ವದ್ದಾಗಿದೆ. ಇನ್ನು, 2023ರ ವಿಶ್ವಕಪ್ಗೆ (ODI Wrld Cup) ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ODI ವಿಶ್ವಕಪ್ ಸೂಪರ್ ಲೀಗ್ಗೆ ಅರ್ಹತೆ ಪಡೆದಿದೆ. ಈಗಾಗಲೇ ಸರಣಿಯಲ್ಲಿ ಭಾರತ ತಂಡ ಮೊದಲ ಪಂದ್ಯ ಸೋತಿದ್ದು, ಬಾಂಗ್ಲಾದೇಶ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ನಾಳಿನ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ.
ಪಂದ್ಯದ ವಿವರ:
ನಾಳೆ ಭಾರತ ಮತ್ತು ಬಾಂಗ್ಲಾ ವಿರುದ್ಧದ 3 ಪಂದ್ಯಗಳ ಸರಣಿಯ 2ನೇ ಏಕದಿನ ಪಂದ್ಯ ನಡೆಯಲಿದೆ. ನಾಳಿನ ಪಂದ್ಯ ಬಾಂಗ್ಲಾದ ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದ್ದು, 11 ಗಂಟೆಗೆ ಟಾಸ್ ಆಗಲಿದೆ. ಈ ಪಂದ್ಯಗಳನ್ನು ಸೋನಿ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್ನಲ್ಲಿ ನೀವು ಈ ಪಂದ್ಯಗಳನ್ನು ಲೈವ್ ಆಗಿ ವೀಕ್ಷಿಸಬಹುದು. ಇವುಗಳ ಜೊತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.
ಪಿಚ್ ವರದಿ:
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕಳೆದ ಐದು ODI ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 212 ರನ್ ಆಗಿದ್ದು, ಮೊದಲು ಬ್ಯಾಟ್ ಮಾಡಿದ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯದಲ್ಲಿ ಸ್ಪಿನ್ನರ್ಗಳು ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಹೀಗಾಗಿ ನಾಳೆ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: IND vs BAN: ನಟಿಯರನ್ನೂ ಮೀರಿಸಿದ ಕ್ರಿಕೆಟಿಗರ ಪತ್ನಿಯರ ಸೌಂದರ್ಯ, ಬಾಂಗ್ಲಾದಲ್ಲಿ ಭಾರತೀಯ ಜೋಡಿಯ ಪ್ರೇಮ್ ಕಹಾನಿ
ತಂಡದಲ್ಲಿ ಬದಲಾವಣೆ ಸಾಧ್ಯತೆ:
ಇನ್ನು, ಸರಣಿಯಲ್ಲಿ ಜೀವಂತವಾಗಿರಲು ಭಾರತ ತಂಡ ನಾಳಿನ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಹೀಗಾಗಿ ಕಳೆದ ಪಂದ್ಯದ ಕೆಲ ಆಟಗಾರರ ಬದಲಿಗೆ ಬೇರೆ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅದರಂತೆ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದ್ದು, ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.
ಹವಾಮಾನ ವರದಿ ಹೇಗಿದೆ?:
ಭಾರತ ಮತ್ತು ಬಾಂಗ್ಲಾದೇಶ ತಂಡಗಳು 2ನೇ ಏಕದಿನ ಪಂದ್ಯದಲ್ಲಿ ಮೀರ್ಪುರದ ಶೇರ್-ಎ-ಬಾಂಗ್ಲಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಮೀರ್ಪುರದಲ್ಲಿ ತಂಪಾದ ವಾತಾವರಣ ಇರುತ್ತದೆ. ಇದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲಿದೆ. ಪಂದ್ಯದ ದಿನದಂದು ಇಲ್ಲಿನ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆ ಇದೆ.
IND vs BAN ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.
ಬಾಂಗ್ಲಾದೇಶ ಸಂಭಾವ್ಯ ಪ್ಲೇಯಿಂಗ್ 11: ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟ್ಟನ್ ದಾಸ್ (ಸಿ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ