ಭಾರತ ಕ್ರಿಕೆಟ್ ತಂಡ ಪ್ರಸ್ತುತ ಬಾಂಗ್ಲಾದೇಶ (IND vs BAN 2nd Test) ಪ್ರವಾಸದಲ್ಲಿದೆ. ಆತಿಥೇಯ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ (Team India) 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದ್ದು, ಸರಣಿಯ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯ ಗುರುವಾರದಿಂದ (ಡಿಸೆಂಬರ್ 22) ಮೀರ್ಪುರದಲ್ಲಿ ನಡೆಯಲಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಲ್ಲದೇ ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ಈ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಲು 2ನೇ ಟೆಸ್ಟ್ ಪಂದ್ಯವನ್ನೂ ಗೆಲ್ಲಲೇ ಬೇಕಿದೆ. ಅಲ್ಲದೇ ಮೊದಲ ಟೆಸ್ಟ್ ಗೆದ್ದ ತಂಡವನ್ನೇ 2ನೇ ಟೆಸ್ಟ್ನಲ್ಲಿಯೂ ಮುಂದುವರೆಸುವ ಸಾಧ್ಯತೆ ಇದೆ. ಹಾಗಿದ್ದರೆ 2ನೇ ಟೆಸ್ಟ್ ಪಂದ್ಯದ ಸಂಫೂರ್ಣ ವಿವರ ಇಲ್ಲಿದೆ.
ಪಂದ್ಯದ ವಿವರ:
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯವು ಬುಧವಾರ, 22 ಡಿಸೆಂಬರ್ 2022 ರಿಂದ ಸೋಮವಾರ 26 ಡಿಸೆಂಬರ್ 2022ರ ವರೆಗೆ ಮೀರ್ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಭಾರತದಲ್ಲಿ ಅಧಿಕೃತ SonyLiv ವೆಬ್ಸೈಟ್ ಮತ್ತು Sony ಅಪ್ಲಿಕೇಶನ್ನಲ್ಲಿ ವೀಕ್ಷಿಸಬಹುದು. ಜೊತೆಗೆ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ಪ್ರಸಾರ ಮಾಡಲಾಗುತ್ತದೆ.
WTC ರೇಸ್ನಲ್ಲಿ ಭಾರತ:
ಇನ್ನು, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯಿತು. ಅದೇ ವೇಳೆಗೆ ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾಗೆ ಮತ್ತೊಂದು ಅನುಕೂಲ ಸಿಕ್ಕಿದೆ. ಈ ಸೋಲಿನೊಂದಿಗೆ ದಕ್ಷಿಣ ಆಫ್ರಿಕಾ ತಂಡ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿಯಿತು. ಭಾರತ ತಂಡ ಅಂಕಪಟ್ಟಿಯಲ್ಲಿ 2 ಸ್ಥಾನ ಪಡೆದುಕೊಂಡಿದೆ.ಕಳೆದ ಸೀಸನ್ ನಲ್ಲಿ ಟೀಂ ಇಂಡಿಯಾ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಆದರೆ, ಫೈನಲ್ನಲ್ಲಿ ನ್ಯೂಜಿಲೆಂಡ್ ಎದುರು ಸೋತಿತ್ತು.
ಇದನ್ನೂ ಓದಿ: IND vs BAN 2nd Test: 2ನೇ ಟೆಸ್ಟ್ಗೂ ಮುನ್ನ ಟೀಂ ಇಂಡಿಯಾಗೆ ಆಘಾತ, ಸ್ಟಾರ್ ಪ್ಲೇಯರ್ ಔಟ್!
ಆಸ್ಟ್ರೇಲಿಯಾ ಇದುವರೆಗೆ 13 ಪಂದ್ಯಗಳನ್ನು ಆಡಿದೆ. ಅದರಲ್ಲಿ 9ರಲ್ಲಿ ಗೆದ್ದರೆ, ಇನ್ನೊಂದರಲ್ಲಿ ಸೋತರು. 3 ಪಂದ್ಯಗಳು ಡ್ರಾ ಆಗಿವೆ. 76.92 ರಷ್ಟು ಯಶಸ್ಸಿನೊಂದಿಗೆ ಅಗ್ರಸ್ಥಾನದಲ್ಲಿದೆ. ಮೊದಲ ಸೀಸನ್ನಲ್ಲಿ ಟಾಪ್-2ರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ. ಅದೇ ಸಮಯದಲ್ಲಿ, ಭಾರತ ತಂಡವು 55.77 ಶೇಕಡಾ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಟೀಂ ಇಂಡಿಯಾ ಇದುವರೆಗೆ 13 ಪಂದ್ಯಗಳನ್ನು ಆಡಿದೆ. 7 ಗೆದ್ದು 4 ಸೋತಿದೆ. 2 ಪಂದ್ಯಗಳು ಡ್ರಾ ಆಗಿದೆ.
ಭಾರತ-ಬಾಂಗ್ಲಾದೇಶ ತಂಡ:
ಭಾರತ ಸಂಭಾವ್ಯ ತಂಡ: ಕೆಎಲ್ ರಾಹುಲ್ (ಸಿ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಅಕ್ಷರ್ ಪಟೇಲ್, ಆರ್ ಅಶ್ವಿನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
ಬಾಂಗ್ಲಾದೇಶ ಸಂಭಾವ್ಯ ತಂಡ: ಜಾಕಿರ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ನಸುಮ್ ಅಹ್ಮದ್, ಮಹ್ಮುದುಲ್ ಹಸನ್ ಪ್ಲೆಷರ್, ಮೊಮಿನುಲ್ ಹಕ್, ರೆಹಮಾನ್ ರಾಜಾ, ತಸ್ಕಿನ್ ಅಹ್ಮದ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ