• Home
  • »
  • News
  • »
  • sports
  • »
  • T20 WC IND vs NED: ಟಾಸ್​ ಗೆದ್ದ ಟೀಂ ಇಂಡಿಯಾ, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

T20 WC IND vs NED: ಟಾಸ್​ ಗೆದ್ದ ಟೀಂ ಇಂಡಿಯಾ, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs NED

IND vs NED

T20 WC IND vs NED: ಇಂದು ನಡೆಯಲಿರುವ ಭಾರತ ಮತ್ತು ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ಈಗಾಗಲೇ ಟಾಸ್​ ಗೆದ್ದಿರುವ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

  • Share this:

ಟಿ20 ವಿಶ್ವಕಪ್​ನಲ್ಲಿ (T20 World Cup 2022) ಭಾರತ ತಂಡ ಪಾಕಿಸ್ತಾನದ ವಿರುದ್ದ ಗೆದ್ದು ಭರ್ಜರಿಯಾಗಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇದರ ಆಧಾರದ ಮೇಲೆ ಇಂದು ನೆದರ್ಲ್ಯಾಂಡ್ಸ್ (Netherlands) ವಿರುದ್ಧ ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದು ಟಿ20 ವಿಶ್ವಕಪ್​ ಗ್ರೂಪ್ ಬಿ ಅಲ್ಲಿ ಅಗ್ರಸ್ಥಾನಕ್ಕೇರಲು ಹವಣಿಸುತ್ತಿದೆ. ಇನ್ನು ಭಾರತ ಮತ್ತು ನೆದರ್ಲ್ಯಾಂಡ್ಸ್ (IND vs NED) ಟಿ20 ಕ್ರಿಕೆಟ್​ನಲ್ಲಿ ಇದೇ ಮೊದಲ ಬಾರಿಗೆ ಮುಖಾಮುಖಿ ಆಗುತ್ತಿವೆ. ಹೀಗಾಗಿ ಎರಡೂ ತಂಗಳಿಗೂ ಮುಖಾಮುಖಿ ಆಡಿರುವ ಅನುಭವವಿಲ್ಲ.  ಈಗಾಗಲೇ ಟಾಸ್​ ಗೆದ್ದಿರುವ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 


ಪಂದ್ಯದ ವಿವರ:


ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯವು ಇಂದು ಮೆಲ್ಬೋರ್ನ್‌ನ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಇನ್ನು ಈ ಪಂದ್ಯವನ್ನು ನೀವು ಉಚಿತವಾಗಿ ಡಿಡಿ ಸ್ಪೋರ್ಟ್ಸ್ ನಲ್ಲಿ ವೀಕ್ಷಿಸಬಹುದು. ಇದಲ್ಲದೇ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ನಲ್ಲಿ ನೇರಪ್ರಸಾರ ಮತ್ತು ಡಿಸ್ನಿ ಫ್ಲಸ್ ಹಾಟ್​ ಸ್ಟಾರ್​ ನಲ್ಲಿ ಲೈವ್​ ಸ್ಟ್ರೀಮಿಂಗ್​ ಅನ್ನು ನೋಡಬಹುದು.ಉಭಯ ತಂಡಗಳ ಬಲಾಬಲ:


ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ಎರಡು ಬಾರಿ ಮುಖಾಮುಖಿ  ಆಗಿದೆ. ಭಾರತ ಮತ್ತು ನೆದರ್ಲೆಂಡ್ಸ್ ತಂಡಗಳು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಇದಕ್ಕೂ ಮುನ್ನ ಉಭಯ ತಂಡಗಳು 2003 ಮತ್ತು 2011ರ ಏಕದಿನ ವಿಶ್ವಕಪ್‌ನಲ್ಲಿ ಮುಖಾಮುಖಿ ಆಗಿದ್ದವು.


ಇದನ್ನೂ ಓದಿ: T20 WC IND vs NED: ಕೊಹ್ಲಿ ಮತ್ತೊಮ್ಮೆ ಅಬ್ಬರಿಸೋದು ಗ್ಯಾರಂಟಿ, ಸಿಡ್ನಿಯಲ್ಲಿ ಹೇಗಿದೆ ಟೀಂ ಇಂಡಿಯಾ ಪ್ರದರ್ಶನ?


ಎರಡೂ ಸಂದರ್ಭಗಳಲ್ಲಿ ಟೀಂ ಇಂಡಿಯಾ ಜಯಭೇರಿ ಬಾರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ನೆದರ್ಲೆಂಡ್ಸ್ ತಂಡವನ್ನು ಸೋಲಿಸುವುದು ಕಷ್ಟವೇನಲ್ಲ. ಆದರೆ ಈಗಾಗಲೇ ಬಿ ಗುಂಪಿನಲ್ಲಿ 2ನೇ ಸ್ಥಾನದಲ್ಲಿರುವ ಟೀಂ ಇಂಡಿಯಾ ಇಂದು ನೆದರ್ಲೆಂಡ್ಸ್ ವಿರುದ್ಧ ದೊಡ್ಡ ಗೆಲುವು ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಪ್ರಯತ್ನಿಸಲಿದೆ.


ಈ ಬಾರಿ ಫೈನಲ್​ ಪ್ರವೇಶಿಸಲಿದೆಯೇ ಭಾರತ:


ಹೌದು, ಇಂತಹುದೊಂದು ಹೊಸ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಕಾರಣ ಭಾರತ ಮತ್ತು ನೆದರ್ಲೆಂಡ್ಸ್ ಪಂದ್ಯದ ಮೊದಲು, ಭಾರತ ತಂಡವು ನೆದರ್ಲ್ಯಾಂಡ್ಸ್ ಅನ್ನು ವಿಶ್ವಕಪ್ ನಲ್ಲಿ ಸೋಲಿಸಿದಾಗಲೆಲ್ಲಾ ಭಾರತ ತಂಡವು ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. 2011 ರಲ್ಲಿ ಭಾರತವು ಪ್ರಶಸ್ತಿಯನ್ನು ತನ್ನ ಕೈಗೆ ತೆಗೆದುಕೊಂಡಿತು, ಆದರೆ 2003 ರಲ್ಲಿ ಅದು ರನ್ನರ್ ಅಪ್ ಆಗಿತ್ತು.


ಇದನ್ನೂ ಓದಿ: RCB ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್, ಕರ್ನಾಟಕದ ಈ 4 ನಗರಗಳಲ್ಲಿ ನಡೆಯಲಿದೆ IPL


IND vs NED ಪ್ಲೇಯಿಂಗ್​ 11:


ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.


ನೆದರ್ಲ್ಯಾಂಡ್ಸ್ ತಂಡ:  ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓ ಡೌಡ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ಸಿ & ಡಬ್ಲ್ಯೂಕೆ), ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್ ಮತ್ತು ಪಾಲ್ ವ್ಯಾನ್ ಮಿಕೆರೆನ್.

Published by:shrikrishna bhat
First published: