ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡ 3-0 ಅಂತರದಲ್ಲಿ ಗೆಲುವು ಸಾಧಿಸಿದ ಬಳಿಕ ಇದೀಗ ನ್ಯೂಜಿಲೆಂಡ್ (IND vs NZ) ಅನ್ನು ಎದುರಿಸಲಿದೆ. ಈ ಸರಣಿಯ ಮೊದಲ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ (Rajiv Gandhi International Cricket Stadium, Hyderabad) ನಡೆಯಲಿದೆ. ಟಿ20 ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ (Suryakumar Yadav) ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಲ್ಲದೇ ಈಗಾಗಲೇ ಸಂಪೂರ್ಣ ಸರಣಿಯಿಂದ ಶ್ರೇಯಸ್ ಅಯ್ಯರ್ ಗಾಐದ ಸಮಸ್ಯೆಯಿಂದ ಹೊರಗುಳಿದ ಕಾರಣ, ಸೂರ್ಯಕುಮಾರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಹಾಗಿದ್ದರೆ, ಪಂದ್ಯದ ಆರಂಭ ಯಾವಾಗ? ಉಭಯ ತಂಡಗಳ ಪ್ಲೇಯಿಂಗ್ 11 ಹೇಗಿರಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಇಂದು ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1 ಗಂಟೆಗೆ ಟಾಸ್ ಮತ್ತು 1:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಸರಣಿಯ ಸಂಪೂರ್ಣ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ವೀಕ್ಷಿಸಬಹುದು. ಅಲ್ಲದೇ ಮೊಬೈಲ್ನಲ್ಲಿ ನೀವು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ನೋಡಬಹುದು. ಪಂದ್ಯದ ಕುರಿತ ಸಂಪೂರ್ಣ ಅಪ್ಡೇಟ್ಗಾಗಿ ನ್ಯೂಸ್ 18 ಕನ್ನಡ ವೆಬ್ ಸೈಟ್ನ್ನು ನೋಡಬಹುದು.
ಪಿಚ್ ವರದಿ:
ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿರುವ ಪಿಚ್ ಮೊದಲ ಇನ್ನಿಂಗ್ಸ್ ಸರಾಸರಿ 266 ಸ್ಕೋರ್ನೊಂದಿಗೆ ಬ್ಯಾಟಿಂಗ್ ಸ್ನೇಹಿ ಮೇಲ್ಮೈಯನ್ನು ಹೊಂದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಇಲ್ಲಿ ಆಡಿದ 5 ODIಗಳಲ್ಲಿ ಮೂರರಲ್ಲಿ ಗೆದ್ದಿವೆ ಆದ್ದರಿಂದ ಟಾಸ್ ಆಟದ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದ್ದು, ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬಹುದು. ಇಲ್ಲಿಯವರೆಗೆ ಭಾರತ ಇಲ್ಲಿ 6 ಏಕದಿನ ಪಂದ್ಯಗಳನ್ನು ಆಡಿದೆ. ಆರರಲ್ಲಿ ಮೂರರಲ್ಲಿ ಸೋತಿದೆ.
ಇದನ್ನೂ ಓದಿ: Virat Kohli: ಒಂದೇ ಶತಕಕ್ಕೆ 5 ದಾಖಲೆಗಳು ಉಡೀಸ್! ಕಿಂಗ್ ಈಸ್ ಆಲ್ವೇಸ್ ಕಿಂಗ್ ಎಂದ ಫ್ಯಾನ್ಸ್
ಸರಣಿಯಿಂದ ಶ್ರೇಯಸ್ ಅಯ್ಯರ್ ಔಟ್:
ಶ್ರೇಯಸ್ ಅಯ್ಯರ್ ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಗಾಯದಿಂದ ಚೇತರಿಸಿಕೊಳ್ಳಲು ಭಾರತೀಯ ಬ್ಯಾಟ್ಸ್ಮನ್ ಈಗ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್ಸಿಎ) ಹೋಗಬೇಕಾಗುತ್ತದೆ. ಹೀಗಾಗಿ ಬಿಸಿಸಿಐ ಶ್ರೇಯಸ್ ಅಯ್ಯರ್ ಬದಲಿಗೆ ಯುವ ಆಟಗಾರ ರಜತ್ ಪಾಟಿದಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಹೀಗಾಗಿ ಯುವ ಆಟಗಾರನಿಗೆ ತಂಡದಲ್ಲಿ ಅವಕಾಶ ದೊರಕುತ್ತದೆಯೇ ಎಂದು ಕಾದುನೋಡಬೇಕಿದೆ. ಅಯ್ಯರ್ ಬದಲಿಗೆ ಸೂರ್ಯಕುಮಾರ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
IND vs NZ ಸಂಭವನೀಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್.
ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಡಫ್ ಬ್ರೇಸ್ವೆಲ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ