ಭಾರತ ಮತ್ತು ನ್ಯೂಜಿಲ್ಯಾಂಡ್ (IND vs NZ ) ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು ಇಂದು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekana Sports City) ನಡೆಯಲಿದೆ. ಈಗಾಗಲೇ ನ್ಯೂಜಿಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಂ ಇಂಡಿಯಾಗೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲ ಪಂದ್ಯದಂತೆ ಮತ್ತೊಮ್ಮೆ ಭಾರತ ತಂಡ ಮೊದಲಿಗೆ ಬೌಲಿಂಗ್ ಮಾಡಲಿದೆ. ಇನ್ನು, ಇಂದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಬದಲಿಗೆ ಚಹಾಲ್ ಅವರನ್ನು ಕಣಕ್ಕಿಳಿದಿದ್ದಾರೆ.
ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮತ್ತು ಲೈವ್-ಸ್ಟ್ರೀಮಿಂಗ್ ಅನ್ನು ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಪಂದ್ಯಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ, ನೀವು News18 Kannada ವೆಬ್ಸೈಟ್ ಅನುಸರಿಸಬಹುದು.
🚨 Toss Update from Lucknow 🚨
New Zealand have opted to bat first.
One change in #TeamIndia's Playing XI as @yuzi_chahal is named in the side 👌
Live - https://t.co/VmThk71OWS… #INDvNZ @mastercardindia pic.twitter.com/9btnunpbkM
— BCCI (@BCCI) January 29, 2023
ಇಲ್ಲಿ ಏಕನಾ ಮೈದಾನದಲ್ಲಿ ಈವರೆಗೆ ಒಟ್ಟು 8 ಟಿ20 ಅಂತರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಒಟ್ಟು 5ರಲ್ಲಿ ಗೆದ್ದಿದೆ. ಹಾಗಾಗಿ ಟಾಸ್ ಗೆದ್ದ ತಂಡ ಪಂದ್ಯವನ್ನೂ ಗೆಲ್ಲುತ್ತದೆ ಎಂಬ ಮಾತಿದೆ. ಡ್ಯೂ ಫ್ಯಾಕ್ಟರ್ ಕೂಡ ಇಲ್ಲಿ ಕಾರ್ಯನಿರ್ವಹಿಸುತ್ತದೆ, ಆದ್ದರಿಂದ ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: IND vs AUS 2023: ಗುಡ್ ನ್ಯೂಸ್ ಬೆನ್ನಲ್ಲೇ ಟೀಂ ಇಂಡಿಯಾಗೆ ಬ್ಯಾಡ್ ನ್ಯೂಸ್! ತಂಡಕ್ಕೆ ಸಂಜು ಇನ್, ಬುಮ್ರಾ ಔಟ್!
ಭಾರತಕ್ಕೆ ಮಾಡು ಇಲ್ಲವೇ ಮಡಿ:
ಇನ್ನು, ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಕಿವೀಸ್ ತಂಡವು 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಭಾರತ ತಂಡ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಿದೆ. ಇಲ್ಲವಾದ್ದಲ್ಲಿ ಟೀಂ ಇಂಡಿಯಾದಿಂದ ಸರಣಿ ಕೈ ತಪ್ಪಲಿದೆ. ಈಗಾಗಲೇ ಹಾರ್ದಿಕ್ ನಾಯಕತ್ವದಲ್ಲಿ ಯಾವುದೇ ಸರಣಿಯನ್ನು ಭಾರತ ತಂಡ ಸೋತಿಲ್ಲ. ಹೀಗಾಗಿ ಹಾರ್ದಿಕ್ ಸಹ ಇಂದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಜೀವಂತಾಗಿರಲು ಪ್ರಯತ್ನಿಸಲಿದೆ. ಹೀಗಾಗಿ ಈ ಪಂದ್ಯ ಬಹಳ ಮುಖ್ಯವಾಗಿದೆ.
ಭಾರತ - ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ