ರಾಂಚಿಯಲ್ಲಿ ನಡೆದ ಹೀನಾಯ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ (Hardik Pandya) ನೇತೃತ್ವದ ಟೀಂ ಇಂಡಿಯಾ ಇಂದು ನ್ಯೂಜಿಲೆಂಡ್ (IND vs NZ ) ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸೆಣಸಾಡಲಿದೆ. ಇಂದಿನ ಪಂದ್ಯವು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekana Sports City) ನಡೆಯಲಿದೆ. ಈಗಾಗಲೇ ನ್ಯೂಜಿಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ (Team India) ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ. ಏಕೆಂದರೆ ಈ ಪಂದ್ಯವನ್ನು ನ್ಯೂಜಿಲೆಂಡ್ ಗೆದ್ದರೆ ಸರಣಿಯನ್ನೂ ಗೆಲ್ಲಲಿದೆ. ಪಂದ್ಯದ ಮೊದಲು, ಲಕ್ನೋದ ಪಿಚ್, ಪ್ಲೇಯಿಂಗ್ 11 ಮತ್ತು ದಾಖಲೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ನೋಡೋಣ ಬನ್ನಿ.
ಪಿಚ್ ರಿಪೋರ್ಟ್:
ಲಕ್ನೋದ ಪಿಚ್ ಬ್ಯಾಟಿಂಗ್‌ಗೆ ಉತ್ತಮ ಎಂದು ಪರಿಗಣಿಸಲಾಗಿದೆ. ಇಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಸರಾಸರಿ ಸ್ಕೋರ್ 160 ರನ್ ಆಗಿದೆ. ಇನ್ನು, ಎರಡನೇ ಇನ್ನಿಂಗ್ಸ್‌ನಲ್ಲಿ 135 ರನ್ ಸರಾಸರಿ ಸ್ಕೋರ್ ಆಗಿದೆ. ಇಲ್ಲಿ ಸ್ಪಿನ್ ಬೌಲರ್‌ಗಳು ಹೆಚ್ಚು ಪ್ರಭಾವ ಬೀರಲಿದ್ದಾರೆ. ಇಲ್ಲಿ 2022ರಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 199 ರನ್ ಗಳಿಸಿತ್ತು. ಹೀಗಾಗಿ ಇಂದು ಟಾಸ್ ಗೆದ್ದ ತಂಡದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಸೋಲು-ಗೆಲುವಿನ ಅಂಕಿಅಂಶ:
ಇಲ್ಲಿ ಒಟ್ಟು 8 ಟಿ20 ಅಂತರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಒಟ್ಟು 5ರಲ್ಲಿ ಗೆದ್ದಿದೆ. ಹಾಗಾಗಿ ಟಾಸ್ ಗೆದ್ದ ತಂಡ ಪಂದ್ಯವನ್ನೂ ಗೆಲ್ಲುತ್ತದೆ ಎಂಬ ಮಾತಿದೆ. ಡ್ಯೂ ಫ್ಯಾಕ್ಟರ್ ಕೂಡ ಇಲ್ಲಿ ಕಾರ್ಯನಿರ್ವಹಿಸುತ್ತದೆ, ಆದ್ದರಿಂದ ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: WPL 2023: ಮಹಿಳಾ ಐಪಿಎಲ್ ಹರಾಜಿಗೆ ಡೇಟ್ ಫಿಕ್ಸ್, ಯಾವ ತಂಡದ ಬಳಿ ಎಷ್ಟು ಹಣವಿದೆ? ಇಲ್ಲಿದೆ ಫುಲ್ ಡಿಟೇಲ್ಸ್
ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ. 6:30ಕ್ಕೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮತ್ತು ಲೈವ್-ಸ್ಟ್ರೀಮಿಂಗ್ ಅನ್ನು ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು. ಪಂದ್ಯಕ್ಕೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ, ನೀವು News18 Kannada ವೆಬ್ಸೈಟ್ ಅನುಸರಿಸಬಹುದು.
IND vs NZ ಸಂಭಾವ್ಯ ಆಡುವ 11:
ಟೀಂ ಇಂಡಿಯಾ ಸಂಭಾವ್ಯ ಆಡುವ 11: ಶುಭಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ/ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದೀಪಕ್ ಹೂಡಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ (ವಾಕ್), ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ಸಿ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ