ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ (Team India) ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ ಏಕದಿನ ಶ್ರೇಯಾಂಕದಲ್ಲಿ ನಂಬರ್ 1 ಆಗಲು ಹವಣಿಸುತ್ತಿದೆ. ಇಂದೋರ್ನ ಹೋಲ್ಕರ್ (Holkar Stadium) ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ತಂಡ ಬ್ಯಾಟಿಂಗ್ ಆರಂಭಿಸಿದೆ. ಈಗಾಗಲೇ ಸರಣಿಯಲ್ಲಿ 2-0 ಅಂತರದ ಮುನ್ನಡೆ ಸಾಧಿಸಿರುವ ಭಾರತ ಇಂದು ಗೆದ್ದು ಸರಣಿಯನ್ನು ಕ್ಲೀನ್ ಸ್ವಿಪ್ ಮಾಡುವ ತವಕದಲ್ಲಿದೆ. ಇನ್ನು, ಭಾರತ ತಂಡದಲ್ಲಿ 2 ಮಹತ್ವದ ಬದಲಾವಣೆ ಮಾಡಿದ್ದು, ಇಬ್ಬರು ಸ್ಟಾರ್ ವೇಗಿಗಳಿಗೆ ವಿಶ್ರಾಂತಿ ನೀಡಲಾಗಿದೆ.
ಟೀಂ ಇಂಡಿಯಾದಲ್ಲಿ 2 ಮಹತ್ವದ ಬದಲಾವಣೆ:
ಟಾಸ್ ನಂತರ ರೋಹಿತ್ ಪ್ಲೇಯಿಂಗ್ 11ನಲ್ಲಿ 2 ಮಹತ್ವದ ಬದಲಾವಣೆ ಮಾಡಿದ್ದು, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಇಬ್ಬರಿಗೂ ಈ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿದೆ. ಇವರಿಬ್ಬರ ಸ್ಥಾನಕ್ಕೆ ಉಮ್ರಾನ್ ಮಲಿಕ್ ಮತ್ತು ಯುಜ್ವೇಂದ್ರ ಚಹಾಲ್ ಕಂಬ್ಯಾಕ್ ಮಾಡಿದ್ದಾರೆ. ಭುಜದ ಗಾಯದ ಕಾರಣ ಯುಜ್ವೇಂದ್ರ ಚಹಾಲ್ ನ್ಯೂಜಿಲೆಂಡ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದಿನ ಪಂದ್ಯದ ಮೂಲಕ ಅವರು ಮತ್ತೆ ತಂಡಕ್ಕೆ ಸೇರಿಕೊಂಡಿದ್ದು, ವೇಗಿ ಉಮ್ರಾನ್ ಮಲಿಕ್ ಸಹ ಮತ್ತೊಮ್ಮೆ ಕಂಬ್ಯಾಕ್ ಮಾಡಿದ್ದಾರೆ.
🚨 Team Update 🚨
Two changes in the side as Umran Malik & Yuzvendra Chahal are named in the eleven.
Follow the match ▶️ https://t.co/ojTz5RqWZf…#TeamIndia | #INDvNZ | @mastercardindia pic.twitter.com/ifXMk5NO4H
— BCCI (@BCCI) January 24, 2023
ಇನ್ನು, ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ODI ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಬಹುದು. ಇದೀಗ ಅವರು ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ತಂಡ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ತಂಡ ಅಗ್ರಸ್ಥಾನದಲ್ಲಿದೆ. ಭಾರತ ತಂಡ ಈಗಾಗಲೇ ಟಿ20 ಶ್ರೇಯಾಂಕದಲ್ಲಿ ನಂಬರ್-1 ಸ್ಥಾನದಲ್ಲಿ ಮುಂದುವರಿದಿದೆ. ಹೀಗಾಗಿ ಮೂರು ತಂಡಗಳು 113 ಅಂಕಗಳೊಂದಿಗೆ ಇರುವುದರಿಂದ ಇಂದಿನ ಪಂದ್ಯವನ್ನು ಭಾರತ ಗೆದ್ದಲ್ಲಿ ನೇರವಾಗಿ ಮೊದಲ ಸ್ಥಾನಕ್ಕೆ ಏರಲಿದೆ.
ಭಾರತ ಪ್ರಸ್ತುತ ಐಸಿಸಿ ಪುರುಷರ ODI ರ್ಯಾಂಕಿಂಗ್ನಲ್ಲಿ ಮೂರನೇ ಸ್ಥಾನದಲ್ಲಿದೆ. 113 ರೇಟಿಂಗ್ ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಅಗ್ರ ಶ್ರೇಯಾಂಕದ ರೇಸ್ನಲ್ಲಿ ಭಾರತ ಪ್ರವೇಶಿಸಿದ್ದು, ಕಿವೀಸ್ ಮೊದಲೆರಡು ಏಕದಿನ ಪಂದ್ಯಗಳಲ್ಲಿ ಸೋತು ಎರಡನೇ ಸ್ಥಾನಕ್ಕೆ ಕುಸಿದಿದೆ. ಸದ್ಯ ಭಾರತ ಟಿ20 ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದೆ. ಒಡಿಐನಲ್ಲಿಯೂ ಅವರು ಅದನ್ನು ಸಾಧಿಸಿದರೆ, ಏಕಕಾಲದಲ್ಲಿ ಏಕದಿನ ಮತ್ತು ಟಿ 20 ಐ ಎರಡರಲ್ಲೂ ನಂಬರ್ ಒನ್ ತಂಡವಾಗಲಿದೆ.
ಭಾರತ-ಕಿವೀಸ್ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ