• Home
  • »
  • News
  • »
  • sports
  • »
  • IND vs NZ ODI: ಭಾರತ ಮತ್ತು ನ್ಯೂಜಿಲ್ಯಾಂಡ್​ ಅಂತಿಮ ಪಂದ್ಯ; ಗೆದ್ದರೆ ಟೀಂ ಇಂಡಿಯಾ ನಂಬರ್​ 1, ಹೇಗಿರಲಿದೆ ಪ್ಲೇಯಿಂಗ್​ 11

IND vs NZ ODI: ಭಾರತ ಮತ್ತು ನ್ಯೂಜಿಲ್ಯಾಂಡ್​ ಅಂತಿಮ ಪಂದ್ಯ; ಗೆದ್ದರೆ ಟೀಂ ಇಂಡಿಯಾ ನಂಬರ್​ 1, ಹೇಗಿರಲಿದೆ ಪ್ಲೇಯಿಂಗ್​ 11

IND vs NZ ODI

IND vs NZ ODI

IND vs NZ ODI: ಭಾರತ ಮತ್ತು ನ್ಯೂಜಿಲೆಂಡ್ (IND vs NZ) ತಂಡವು ನಡೆಯುತ್ತಿರುವ ಏಕದಿನ ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕಾಗಿ ಇಂದು ಇಂದೋರ್ (Holkar Stadium) ನಡೆಯಲಿದೆ.

  • Share this:

ಭಾರತ ಮತ್ತು ನ್ಯೂಜಿಲೆಂಡ್ (IND vs NZ) ತಂಡವು ನಡೆಯುತ್ತಿರುವ ಏಕದಿನ ಪಂದ್ಯಗಳ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕಾಗಿ ಇಂದು ಇಂದೋರ್ (Holkar Stadium) ತಲುಪಿದೆ. ಈ ಪಂದ್ಯ ಮಂಗಳವಾರ (ಜನವರಿ 24) ನಗರದ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಉಭಯ ತಂಡಗಳ 3 ಪಂದ್ಯಗಳ ಏಕದಿನ ಸರಣಿಯಲ್ಲಿ 2 ಗೆಲುವನ್ನು ದಾಖಲಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ (Team India) ಸರಣಿಯನ್ನು ಕ್ಲೀನ್​ ಸ್ವೀಪ್​ ಮಾಡಲು ಸಿದ್ಧವಾಗಿದೆ. ಅಲ್ಲದೇ ಈ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ (ICC ODI Rankings) ಅಗ್ರಸ್ಥಾನಕ್ಕೇರಲು ಹವಣಿಸುತ್ತಿದೆ.


ಪಂದ್ಯದ ಸಂಪೂರ್ಣ ವಿವರ:


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಇಂದೋರ್​ನ ಹೋಳ್ಕರ್​ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪ್ರಾರಂಭವಾಗಲಿದೆ. ಪಂದ್ಯ ಆರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ಮಾಡಲಾಗುತ್ತದೆ.


ಇದನ್ನೂ ಓದಿ: WTC Final 2023: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ಗೆ ಡೇಟ್​ ಫಿಕ್ಸ್! ಇಲ್ಲಿದೆ ಟೀಂ ಇಂಡಿಯಾ ಫೈನಲ್​ ಲೆಕ್ಕಾಚಾರ


ಭಾರತ-ನ್ಯೂಜಿಲೆಂಡ್ 2ನೇ ODI ಅನ್ನು ನೀವು ಯಾವ ಚಾನಲ್‌ನಲ್ಲಿ ಲೈವ್ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನಲ್‌ಗಳಲ್ಲಿ ವೀಕ್ಷಿಸಬಹುದು. ಅದೇ ಸಮಯದಲ್ಲಿ ದೂರದರ್ಶನದ ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿಯೂ ಪಂದ್ಯ ಪ್ರಸಾರವಾಗಲಿದೆ.


ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ಎಲ್ಲಿ ವೀಕ್ಷಿಸಬೇಕು?
ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ODI ನ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು. ಹೆಚ್ಚಿನ ಪಂದ್ಯಗಳ ಮಾಹಿತಿಗಾಗಿ ನ್ಯೂಸ್ 18 ಕನ್ನಡ ವೆಬ್​ಸೈಟ್​ ಅನುಸರಿಸಿ.


ಭಾರತ ತಂಡದಲ್ಲಿ ಬದಲಾವಣೆ:


ಇನ್ನು, ಎರಡನೇ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್​ 11ನಲ್ಲಿ ಬದಲಾವಣೆ ತರುವ ಸಾಧ್ಯತೆಗಳಿವೆ. ಹೀಗಾಗಿ ಶಾರ್ದೂಲ್​ ಠಾಕೂರ್​ ಬದಲಿಗೆ ಇಂದಿನ ಪಂದ್ಯದಲ್ಲಿ ಉಮ್ರಾನ್​ ಮಲಿಕ್​ ಅವರನ್ನು ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ 2 ಪಂದ್ಯದಲ್ಲಿ ಮಲಿಕ್​ ಅವರನ್ನು ತಂಡದಿಂದ ಹೊರಗಿಡಲಾಗಿತ್ತು.
ಭಾರತ ಮತ್ತು ನ್ಯೂಜಿಲೆಂಡ್ ಸಂಭಾವ್ಯ ತಂಡ:


ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್


ನ್ಯೂಜಿಲೆಂಡ್ ಸಂಭಾವ್ಯ ತಂಡ: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.

Published by:shrikrishna bhat
First published: