ಭಾರತ ಮತ್ತು ನ್ಯೂಜಿಲೆಂಡ್ (IND vs NZ) ನಡುವಿನ ಏಕದಿನ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಬುಧವಾರ ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ (Hagley Park South) ಮೈದಾನದಲ್ಲಿ ನಡೆಯಲಿದೆ. ಸರಣಿ ಉಳಿಸಿಕೊಳ್ಳಬೇಕಾದರೆ ಟೀಂ ಇಂಡಿಯಾ (Team India) ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಏಳು ವಿಕೆಟ್ಗಳ ಜಯ ಸಾಧಿಸಿದರೆ, ಹ್ಯಾಮಿಲ್ಟನ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹಗ್ಲಿ ಓವಲ್ ಮೈದಾನದ ಮೇಲೂ ಮೋಡ ಕವಿದಿದ್ದು, ಬುಧವಾರ ಮಳೆಯಾಗುವ ನಿರೀಕ್ಷೆ ಇದೆ. ಆದರೂ ಮೂರನೇ ಪಂದ್ಯದ ಎಲ್ಲಾ ಟಿಕೆಟ್ಗಳು ಈಗಾಗಲೇ ಮಾರಾಟವಾಗಿವೆ. ಏನದರೂ ನಾಳೆ ಪಂದ್ಯ ಮಳೆಯಿಂದ ರದ್ದಾದರೆ ಕಿವೀಸ್ ಸರಣಿ ಗೆಲುವು ದಾಖಲಿಸಲಿದೆ.
ಪಂದ್ಯದ ವಿವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3ನೇ ಏಕದಿನ ಪಂದ್ಯ ನಾಳೆ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಹಾಗಾಗಿ 6.30ಕ್ಕೆ ಟಾಸ್ ಆಗಲಿದೆ. ಟೀಂ ಇಂಡಿಯಾವನ್ನು ನಾಯಕ ಶಿಖರ್ ಧವನ್ ಮುನ್ನಡೆಸಿದರೆ ಮತ್ತು ಕೇನ್ ವಿಲಿಯಮ್ಸನ್ ಕಿವೀಸ್ ನಾಯಕರಾಗಿದ್ದಾರೆ. ನಾಳಿನ ಪಂದ್ಯವು ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ನಡೆಯಲಿದೆ. ಈ ಪಂದ್ಯವನ್ನು ನೀವು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಅಧಿಕೃತ ಪ್ರಸಾರವಾಗಿದೆ. ಆದ್ದರಿಂದ, ಸರಣಿಯನ್ನು ಪ್ರೈಮ್ ವಿಡಿಯೋ ಅಪ್ಲಿಕೇಶನ್ನಲ್ಲಿ ಲೈವ್-ಸ್ಟ್ರೀಮ್ ಮಾಡಲಾಗುತ್ತದೆ.
Preps 🔛 #TeamIndia gear up for the 3⃣rd #NZvIND ODI in Christchurch 👌 👌 pic.twitter.com/2nkFpFNi77
— BCCI (@BCCI) November 29, 2022
ಹ್ಯಾಗ್ಲಿ ಓವಲ್ ಸ್ಟೇಡಿಯಂ ನೀಡಿರುವ ಮಾಹಿತಿಯಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಪಂದ್ಯದ ಟಿಕೆಟ್ಗಳು ಈಗಾಗಲೇ ಮಾರಾಟವಾಗಿದೆ. ಈ ಸಂದರ್ಭದಲ್ಲಿ ಸ್ಟೇಡಿಯಂ ಮ್ಯಾನೇಜ್ಮೆಂಟ್ ವಿಶೇಷ ಕೊಡುಗೆಯನ್ನು ನೀಡಿದ್ದು, ಇದರ ಅಡಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಒಂದು ಟಿಕೆಟ್ನಲ್ಲಿ ಎರಡು ಅಂತರರಾಷ್ಟ್ರೀಯ ಪಂದ್ಯಗಳನ್ನು ವೀಕ್ಷಿಸಬಹುದು. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಟಿಕೆಟ್ನಲ್ಲಿ ಮಾತ್ರ ಜನರಿಗೆ ಮತ್ತೊಂದು ಪಂದ್ಯವನ್ನು ವೀಕ್ಷಿಸುವ ಅವಕಾಶ ಸಿಗುತ್ತದೆ. ಹ್ಯಾಗ್ಲಿ ಓವಲ್ನಲ್ಲಿ ಮುಂದಿನ ಅಂತಾರಾಷ್ಟ್ರೀಯ ಪಂದ್ಯವು ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡಗಳ ನಡುವೆ ಡಿಸೆಂಬರ್ 2 ರಂದು ನಡೆಯಲಿದೆ.
ಶೇಕಡಾ 70ರಷ್ಟು ಮಳೆ ಸಾಧ್ಯತೆ:
ಹವಾಮಾನ ಇಲಾಖೆ ಪ್ರಕಾರ, ಬುಧವಾರ ಮಧ್ಯಾಹ್ನ ಕ್ರೈಸ್ಟ್ಚರ್ಚ್ನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನ್ಯೂಜಿಲೆಂಡ್ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಆಗ ಶೇ.70ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಹ್ಯಾಗ್ಲಿ ಓವಲ್ ಮೈದಾನದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಏಕದಿನ ಪಂದ್ಯವನ್ನಾಡಲಿದೆ. ಅದೇ ಹೊತ್ತಿಗೆ ಇಲ್ಲಿ ಆಡಿದ 11 ಪಂದ್ಯಗಳಲ್ಲಿ 10ರಲ್ಲಿ ಕಿವೀಸ್ ತಂಡ ಗೆಲುವು ಸಾಧಿಸಿದೆ.
IND vs NZ ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಶಿಖರ್ ಧವನ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಶುಭ್ಮನನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಚಹಲ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (WK), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ