ಭಾರತ ಮತ್ತು ನ್ಯೂಜಿಲ್ಯಾಂಡ್ (IND vs NZ) ನಡುವಿನ 3 ಪಂದ್ಯಗಳ ಟಿ20 ಸರಣಿಯ ಅಂತಿಮ ಹಾಗೂ 3ನೇ ಪಂದ್ಯವನ್ನು ಇಂದು ಆಡಲಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಈಗಾಗಲೇ 3 ಪಂದ್ಯಗಳ ಟಿ20 ಸರಣಿಯಲ್ಲಿ ಸದ್ಯ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ. ಎರಡೂ ತಂಡಗಳು ಸರಣಿ ಗೆಲ್ಲಬೇಕಾದರೆ ಇಂದಿನ ಪಂದ್ಯದಲ್ಲಿ ಜಯ ದಾಖಲಿಸಬೇಕಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತದ (Team India) ದಾಖಲೆ ಅದ್ಭುತವಾಗಿದೆ. ಇಲ್ಲಿಯವರೆಗೆ ಇಲ್ಲಿ ಆಡಿರುವ 6 ಟಿ20 ಪಂದ್ಯಗಳಲ್ಲಿ ಭಾರತದ ದಾಖಲೆ ಹೇಗಿದೆ ಎಂಬುದನ್ನು ತಿಳಿಯೋಣ ಬನ್ನಿ.
ಮೋದಿ ಕ್ರೀಡಾಂಗಣದಲ್ಲಿ ಭಾರತದ ದಾಖಲೆ:
ಭಾರತ ಇದುವರೆಗೆ ಅಹಮದಾಬಾದ್‌ನಲ್ಲಿ 6 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ಪೈಕಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಟೀಂ ಇಂಡಿಯಾ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಭಾರತ ಇಲ್ಲಿ ಇಂಗ್ಲೆಂಡ್ ವಿರುದ್ಧ 2 ಟಿ20 ಪಂದ್ಯಗಳನ್ನು ಸೋತಿದೆ. 2021ರಲ್ಲಿ, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಈ ಮೈದಾನದಲ್ಲಿ ಟಿ20 ಪಂದ್ಯವನ್ನು ಆಡಲಾಗಿತ್ತು. ಮೊದಲು ಬ್ಯಾಟ್ ಮಾಡಿದ ತಂಡವು 3 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಚೇಸಿಂಗ್ ತಂಡವು ಅಷ್ಟೇ ಸಂಖ್ಯೆಯ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಟಾಸ್ ಅಷ್ಟಾಗಿ ಪ್ರಮುಖ ಪಾತ್ರ ನಿರ್ವಹಿಸುವುದು ಅನುಮಾನವಾಗಿದೆ.
Finale Ready 🏟️ 👏@GCAMotera | #TeamIndia | #INDvNZ pic.twitter.com/jXhfMu24LK
— BCCI (@BCCI) January 31, 2023
ಇದನ್ನೂ ಓದಿ: IPL 2023: ಚೆನ್ನೈ-ಮುಂಬೈ ತಂಡಗಳನ್ನು ಹಿಂದಿಕ್ಕಿದ RCB, ಈ ಸಾಧನೆ ಮಾಡಿದ ಐಪಿಎಲ್ನ ಮೊದಲ ತಂಡ ನಮ್ಮ ಬೆಂಗಳೂರು!
ವೈಯಕ್ತಿಕ ದಾಖಲೆಗಳು ಹೇಗಿವೆ?:
ಅಹಮದಾಬಾದ್‌ನ ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ದಾಖಲೆ ಉತ್ತಮವಾಗಿದೆ. ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ6 ಇನ್ನಿಂಗ್ಸ್‌ಗಳಲ್ಲಿ ಗರಿಷ್ಠ 258 ರನ್ ಗಳಿಸಿದ್ದರು. ಇಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಬಗ್ಗೆ ಮಾತನಾಡುತ್ತಾ, ಶಾರ್ದೂಲ್ ಠಾಕೂರ್ 5 ಪಂದ್ಯಗಳಲ್ಲಿ 8 ವಿಕೆಟ್ ಪಡೆದಿದ್ದರು. ಈ ಮೈದಾನದಲ್ಲಿ ಒಟ್ಟು 81 ಸಿಕ್ಸ ಮತ್ತು 179 ಬೌಂಡರಿಗಳು ದಾಖಲಾಗಿವೆ.
ಭಾರತ - ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ 11:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
ನ್ಯೂಜಿಲ್ಯಾಂಡ್ ಸಂಭಾವ್ಯ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ