ಏಕದಿನ ಸರಣಿಯಲ್ಲಿ ಶ್ರೀಲಂಕಾವನ್ನು ಸೋಲಿಸಿದ ನಂತರ ರೋಹಿತ್ ಶರ್ಮಾ ಪಡೆ ಇದೀಗ ನ್ಯೂಜಿಲೆಂಡ್ (IND vs NZ) ವಿರುದ್ಧ ತವರಿನಲ್ಲಿ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ನಾಳೆ ( ಜನವರಿ 18 ಬುಧವಾರ) ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಏಕದಿನ ವಿಶ್ವಕಪ್ (ODI World Cup) ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ತಲುಪಲು ಈ ಸರಣಿ ಮಹತ್ವದ್ದಾಗಿದೆ. ಅಲ್ಲದೇ ಎರಡೂ ತಂಡಗಳು ಸದ್ಯ ಗೆಲುವಿನ ಲಯದಲ್ಲಿದೆ. ತವರಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಕಿವೀಸ್ (PAK vs NZ) ತಂಡ ಕೂಡ ಭಾರತ ಪ್ರವಾಸಕ್ಕೆ ಬಂದಿದ್ದು, ಭಾರತ ತಂಡ ಸಹ ತವರಿನಲ್ಲಿ ಶ್ರೀಲಂಕಾವನ್ನು (IND vs SL) ಮಣಿಸಿದೆ. ಹಾಗಿದ್ದರೆ ಉಭಯ ತಂಡಗಳ ಸರಣಿಯ ಸಂಪೂರ್ಣ ವಿವರ ಇಲ್ಲಿದೆ ನೋಡಿ.
ಗೆಲುವಿನ ಲಯದಲ್ಲಿ ಭಾರತ-ಕಿವೀಸ್:
ತವರಿನಲ್ಲಿ ನಡೆದ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು 2-1 ಅಂತರದಿಂದ ಸೋಲಿಸಿದರೆ, ಭಾರತವು ಶ್ರೀಲಂಕಾವನ್ನು 3-0 ಅಂತರದಿಂದ ಸೋಲಿಸಿದೆ. ಈ ಸರಣಿಯಲ್ಲಿ ನಾಯಕ ಕೇನ್ ವಿಲಿಯಮ್ಸನ್ ಮತ್ತು ಟಿಮ್ ಸೌಥಿ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಈ ಸರಣಿಯಲ್ಲಿ ಈ ಇಬ್ಬರು ಸ್ಟಾರ್ ಪ್ಲೇಯರ್ಗೆ ವಿಶ್ರಾಂತಿ ನೀಡಲಾಗಿದೆ.
ಮೊದಲ ಏಕದಿನ ಪಂದ್ಯದ ಸಂಪೂರ್ಣ ವವರ:
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಬುಧವಾರ (ಜನವರಿ 18) ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ 1 ನೇ ODI ಎಲ್ಲಿ ನಡೆಯಲಿದೆ?
ಸರಣಿಯ ಮೊದಲ ಏಕದಿನ ಪಂದ್ಯ ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: ODI World Cup 2023: ತಾಲಿಬಾನ್ನಿಂದಾಗಿ ಆಸ್ಟ್ರೇಲಿಯಾ ಸರಣಿ ರದ್ದು, ವಿಶ್ವಕಪ್ಗೆ ಬರೋದು ಡೌಟ್! ಭಾರತಕ್ಕೂ ಬಿಗ್ ಶಾಕ್
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಮೊದಲ ODI ಯಾವಾಗ ನಡೆಯಲಿದೆ?
ಸರಣಿಯ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ರಿಂದ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಮಧ್ಯಾಹ್ನ 1:00 ಗಂಟೆಗೆ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ 1ನೇ ODIನ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಮೊದಲ ODIನ ನೇರ ಪ್ರಸಾರವನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ವೀಕ್ಷಿಸಬಹುದು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 1ನೇ ODIನ ಉಚಿತ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬೇಕು?
ಮೊದಲ ODIನ ನೇರ ಪ್ರಸಾರವನ್ನು ನೀವು DD ಸ್ಪೋರ್ಟ್ಸ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
ಈ ಸರಣಿಯ ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಡಿಸ್ನಿ ಹಾಟ್ಸ್ಟಾರ್ ಅಪ್ಲಿಕೇಶನ್ನಲ್ಲಿ ವೀಕ್ಷಿಸಬಹುದು. ಅಲ್ಲದೇ ಪಂದ್ಯದ ಹೆಚ್ಚಿನ ಅಪ್ಡೇಟ್ಗಾಗಿ ನ್ಯೂಸ್ 18 ಕನ್ನಡ ವೆಬ್ಸೈಟ್ ಅನುಸರಿಸಿ.
ಭಾರತ-ನ್ಯೂಜಿಲ್ಯಾಂಡ್ ತಂಡಗಳು:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಕುಲದೀಪ್ ಯಾದವ್ ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ನ್ಯೂಜಿಲ್ಯಾಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ಸಿ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೇನ್ ಕ್ಲೀವರ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ