IND vs SA: ಅಬ್ಬರಿಸಿದ ವ್ಯಾನ್ ಡೆರ್ ಡಸ್ಸೆನ್; ದಕ್ಷಿಣ ಆಫ್ರಿಕಾಗೆ 7 ವಿಕೆಟ್​ಗಳ ಜಯ

ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ 7 ವಿಕೆಟ್​ಗಳ ಜಯ ದಾಖಲಿಸಿತು. ಮೂಲಕ ಸೌತ್​ ಆಫ್ರಿಕಾ ತಂಡ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ದಕ್ಷಿಣ ಆಫ್ರಿಕಾ ತಂಡಕ್ಕೆ ಜಯ

ದಕ್ಷಿಣ ಆಫ್ರಿಕಾ ತಂಡಕ್ಕೆ ಜಯ

  • Share this:
ಭಾರತ ಮತ್ತು ದಕ್ಷಿಣ (IND vs SA) ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20ಐ ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬೌಮಾ (Temba Bavuma) ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಈ ಮೂಲಕ ಮೊದಲು ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ (Rishabh Pant) ನಾಯಕತ್ವದ ಟಿಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಇದು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಯಲ್ಲಿ ಭಾರತದ ಗರಿಷ್ಠ ಸ್ಕೋರ್ ಆಗಿದೆ. ಈ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ 7 ವಿಕೆಟ್​ಗಳ ಜಯ ದಾಖಲಿಸಿತು. ಮೂಲಕ ಸೌತ್​ ಆಫ್ರಿಕಾ ತಂಡ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ಅಬ್ಬರಿಸಿದ ಇಶಾನ್ ಕಿಶನ್:

ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಭಾರತದ ಪರ ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ತಂಡವು ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಇಶಾನ್ ಕಿಶನ್ 48 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದಂತೆ 76 ರನ್ ಗಳಿಸಿದರು.

ಶ್ರೇಯಸ್ ಅಯ್ಯರ್ 27 ಎಸೆತಗಳಲ್ಲಿ 36 ರನ್ ಮತ್ತು ನಾಯಕ ರಿಷಬ್ ಪಂತ್ 16 ಎಸೆತಗಳಲ್ಲಿ 29 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 258.33 ಸ್ಟ್ರೈಕ್ ರೇಟ್‌ನೊಂದಿಗೆ ಅಜೇಯ 31 ರನ್ ಗಳಿಸಿದರು.

ಇದನ್ನೂ ಓದಿ: Virat Kohli: ಆಡದೇ ದ್ವಿಶತಕ ಸಿಡಿಸಿದ ವಿಶ್ವದ ಏಕೈಕ ಕ್ರಿಕೆಟಿಗ ಕೊಹ್ಲಿ! ವಿಶೇಷ ದಾಖಲೆ ಬರೆದ ವಿರಾಟ್

ಬೌಲಿಂಗ್​ನಲ್ಲಿ ಎಡವಿದ ಸೌತ್ ಆಫ್ರಿಕಾ:

ಇನ್ನು, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾದ ಯೋಜನೆಯನ್ನು ಭಾರತೀಯ ಬ್ಯಾಟ್ಸ್​ಮನ್​ಗಳು ತಲೆ ಕೆಳಗು ಮಾಡಿದರು. ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್, ಎನ್ರಿಚ್ ನಾರ್ಸಿಯಾ, ವೇಯ್ನ್ ಪಾರ್ನೆಲ್ ಮತ್ತು ಡ್ವೇನ್ ಪ್ರಿಟೋರಿಯಸ್ ತಲಾ ಒಂದೊಂದು ವಿಕೆಟ್ ಪಡೆದರು.

ಕಮಾಲ್ ಮಾಡಿದ ವ್ಯಾನ್ ಡೆರ್ ಡಸ್ಸೆನ್:

ಇನ್ನು, ಭಾರತ ತಂಡ ನೀಡಿದ 2012 ರನ್ ಗಳ ಬೃಹತ್ ಮೊತ್ತ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 212 ರನ್ ಗಳಿಸುವ ಮೂಲಕ 7 ವಿಕೆಟ್​ಗಳ ಜಯ ದಾಖಲಿಸಿತು. ಮೂಲಕ ಸೌತ್​ ಆಫ್ರಿಕಾ ತಂಡ 5 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ.

ಸೌತ್ ಆಫ್ರಿಕಾ ಪರ ರುಸ್ಸೆ ವಂಡರ್​ ಡುಸ್ಸೆನ್ 46 ಎಸೆತದಲ್ಲಿ 5 ಸಿಕ್ಸ್ ಮತ್ತು 7 ಫೋರ್​ ಮೂಲಕ ಬರೋಬ್ಬರಿ 75 ರನ್ ಗಳಿಸುವ ಮೂಲಕ ತಂಡದ ಗೆಲುವಿನ ದಡ ಸೇರಲು ಕಾರಣಿಕರ್ತರಾದರು. ಉಳಿದಂತೆ ಕ್ವಿಂಟನ್ ಡಿ ಕಾಕ್ 22 ರನ್, ನಾಯಕ ಬುವಾಮ್ 10 ರನ್, ಡ್ವೈನೆ ಪ್ರಟೋರಿಯಸ್ 29 ರನ್ ಮತ್ತು ಡೇವಿಡ್ ಮಿಲ್ಲರ್ 31 ಎಸೆತದಲ್ಲಿ 5 ಸಿಕ್ಸ್ ಮತ್ತು 4 ಬೌಂಡರಿಗಳ ನೆರವಿನಿಂದ 64 ರನ್ ಗಳಿಸಿದರು.

ಇದನ್ನೂ ಓದಿ: Ranji Trophy: ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಮುಂಬೈ ವಿಶ್ವ ದಾಖಲೆ; 93 ವರ್ಷಗಳ ಇತಿಹಾಸ ಅಳಿಸಿ ಹಾಕಿದ ಪೃಥ್ವಿ ಶಾ ಪಡೆ

ಆಫ್ರಿಕನ್ನರನ್ನು ಕಟ್ಟಿ ಹಾಕುವಲ್ಲಿ ಸೋತ ಟೀಂ ಇಂಡಿಯಾ ಬೌಲರ್ಸ್:

ಹೌದು, ಭಾರತ ತಂಡ ಬ್ಯಾಟಿಂಗ್​ ನಲ್ಲಿ ಭರ್ಜರಿ ಪ್ರದರ್ಶನ ನೀಡಿತು. ಆದರೆ ಬೌಲಿಂಗ್​ ನಲ್ಲಿ ಡೆವಿದೆ. ಭಾರತ ಕಲೆಹಾಕಿದ್ದ ಬೃಹತ್ ಮೊತ್ತವನ್ನು ಡಿಫೆನ್ಸ್ ಮಾಡಿಕೊಳ್ಳುವಲ್ಲಿ ಟೀಂ ಇಂಡಿಯಾದ ಬೌಲರ್​ ಗಳು ಯಶಸ್ವಿ ಆಗಲಿಲ್ಲ. ಭಾರತದ ಪರ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದರು.
Published by:shrikrishna bhat
First published: