IND vs SA: ಭಾರತ - ಸೌತ್ ಆಫ್ರಿಕಾ 2ನೇ ಟಿ20 ಪಂದ್ಯ, ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ

ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA)  ನಡುವಿನ 2ನೇ ಟಿ20 (2nd T20) ಪಂದ್ಯ ಇಂದು (ಭಾನುವಾರ) ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ (Barabati Stadium) ನಡೆಯಲಿದೆ.

IND vs SA

IND vs SA

  • Share this:
ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA)  ನಡುವಿನ 2ನೇ ಟಿ20 (2nd T20) ಪಂದ್ಯ ಇಂದು (ಭಾನುವಾರ) ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ (Barabati Stadium) ನಡೆಯಲಿದೆ. ಮೊದಲ ಪಂದ್ಯದಲ್ಲಿ ಆಫ್ರಿಕಾ ಎದುರು ಸೋತಿರುವ ಟೀಂ ಇಂಡಿಯಾ ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಸಮಬಲ ಸಾಧಿಸುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. ದಕ್ಷಿಣ ಆಫ್ರಿಕಾ ಸರಣಿಯಲ್ಲಿ ತನ್ನ ಮುನ್ನಡೆಯನ್ನು 2-0 ಗೆ ವಿಸ್ತರಿಸಲು ಪ್ರಯತ್ನಿಸುತ್ತಿದೆ. ಸರಣಿಯ ಈ ಮಹತ್ವದ ಪಂದ್ಯದ ವೇಳೆ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾನುವಾರ ಸಂಜೆ ಕಟಕ್‌ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾಗಿ ಪಂದ್ಯದ ವೇಳೆ ಮಳೆ ಅಡ್ಡಿಯಾಗಬಹುದು ಎನ್ನಲಾಗುತ್ತಿದೆ.

ಪಂದ್ಯದ ವಿವರ:

ಇನ್ನು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವು ಇಂದು ಕಟಕ್​ನ ಬಾರಾಬತಿ ಕ್ರೀಡಾಂಗಣದಲ್ಲಿnಡೆಯಲಿದೆ. ಪಂದ್ಯದ ಟಾಸ್​ ಸಂಜೆ 6:30ಕ್ಕೆ ಹಾಗೂ ಪಂದ್ಯವು 7 ಗಂಟೆಗೆ ಆರಂಭವಾಗಲಿದೆ.

ಪಂದ್ಯದ ವೇಳೆ ಮಳೆ ನಿರೀಕ್ಷೆ:

ಇನ್ನು, ಭುವನೇಶ್ವರ್ ಹವಾಮಾನ ಇಲಾಖೆ ನಿರ್ದೇಶಕ ಎಚ್. ಆರ್. ವಿಶ್ವಾಸ್ ಪ್ರಕಾರ, ಟಿ20 ಪಂದ್ಯದ ವೇಳೆ ಶೇ.50 ರಷ್ಟು ಮಳೆ ಬೀಳುವ ಸಾಧ್ಯತೆ ಇದೆ. ಪಂದ್ಯದ ವೇಳೆ ಮೋಡ ಕವಿದ ವಾತಾವರಣವಿದ್ದು, ಭಾನುವಾರ ಸಂಜೆ ಕೆಲಕಾಲ ಮಳೆಯಾಗುವ ಸಾಧ್ಯತೆ ಇದೆ. ಮಳೆ ಬರುತ್ತದೋ ಇಲ್ಲವೋ ಎಂಬುದನ್ನು 3ರಿಂದ 4 ಗಂಟೆ ಮೊದಲೇ ಊಹಿಸಬಹುದು. ಏತನ್ಮಧ್ಯೆ, ಒಡಿಶಾ ಕ್ರಿಕೆಟ್ ಸಂಸ್ಥೆಯು ಪಂದ್ಯದ ಸಮಯದಲ್ಲಿ ಯಾವುದೇ ರೀತಿಯ ಮಳೆಗೂ ಸಿದ್ಧವಾಗಿದೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: Team India: ಕಾರ್ತಿಕ್ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಅತ್ಯುತ್ತಮ ಫಿನಿಶರ್ ಆಗುತ್ತಾನೆ, ಭವಿಷ್ಯ ನುಡಿದ ರಿಕಿ ಪಾಂಟಿಂಗ್

ಬಿಸಿಸಿಐನ ತಾಂತ್ರಿಕ ತಂಡದ ಸಲಹೆ ಮೇರೆಗೆ ಒಳಚರಂಡಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇವೆ. ಇಡೀ ಕ್ಷೇತ್ರವನ್ನು ಆವರಿಸಲು ಇಂಗ್ಲೆಂಡ್‌ನಿಂದ ಕವರ್‌ಗಳನ್ನು ಖರೀದಿಸಲಾಗಿದೆ. ದಿನವಿಡೀ ಮಳೆ ಬಂದರೂ ಅದಕ್ಕೂ ಪರಿಹಾರ ಕಂಡುಕೊಳ್ಳಲು ಸಿದ್ಧರಿದ್ದೇವೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸರಣಿ ಮುನ್ನಡೆಯಲ್ಲಿ ಆಫ್ರಿಕಾ:

1ನೇ T20I ಗೆದ್ದ ನಂತರ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳಿಂದ ಟೀಂ ಇಂಡಿಯಾವನ್ನು ಸೋಲಿಸಿತ್ತು.  ಭಾರತ ನೀಡಿದ 212 ರನ್‌ಗಳ ಬೃಹತ್ ಗುರಿಯನ್ನು ಆಫ್ರಿಕಾ ಸರಾಗವಾಗಿ ಚೇಸ್ ಮಾಡಿತ್ತು. ಹೀಗಾಗಿ ಇಂದಿನ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸಲು ಭಾರತ ಹವಣಿಸುತ್ತಿದ್ದರೆ, ಆಫ್ರಿಕಾ ಸರಣಿಯಲ್ಲಿ ಇನ್ನೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ: IND vs SA: ಇಂದಿನಿಂದ ಭಾರತ- ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭ; ಯುವಪಡೆ ಮೇಲೆ ಹೆಚ್ಚಿನ ನಿರೀಕ್ಷೆ

ಭಾರತ ಮತ್ತು ಆಫ್ರಿಕಾ ಸಂಭಾವ್ಯ ತಂಡ:

ಭಾರತ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ಸಿ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ಸಿ), ಡ್ವೈನ್ ಪ್ರಿಟೋರಿಯಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ತಬ್ರೈಜ್ ಶಮ್ಸಿ.
Published by:shrikrishna bhat
First published: