• Home
  • »
  • News
  • »
  • sports
  • »
  • IND vs SA: ಭಾರತ-ಆಫ್ರಿಕಾ ಪಂದ್ಯಕ್ಕೆ ಮಳೆ ಕಾಟ; ಪಿಚ್ ಹೇಗಿದೆ? ಯಾರಿಗೆ ಹೆಚ್ಚು ಸಹಕಾರಿ?

IND vs SA: ಭಾರತ-ಆಫ್ರಿಕಾ ಪಂದ್ಯಕ್ಕೆ ಮಳೆ ಕಾಟ; ಪಿಚ್ ಹೇಗಿದೆ? ಯಾರಿಗೆ ಹೆಚ್ಚು ಸಹಕಾರಿ?

IND vs SA

IND vs SA

IND vs SA: ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದ್ದು, ಇಂದಿನ ಪಂದ್ಯದ ಮೇಲೆ ಹೀಗಾಗಿ ಅನೇಖ ನಿರೀಕ್ಷೆಗಳಿವೆ.

  • Share this:

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa) ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ರೋಹಿತ್ ಶರ್ಮಾ ಪಡೆ (Rohit Sharma)  ಇಂದಿನ ಪಂದ್ಯ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿದೆ. ಅಲ್ಲದೇ ಈ ಸರಣಿಯು ಟಿ20 ವಿಶ್ವಕಪ್​ನ (T20 World Cup) ಆಧಾರದ ಮೇಲೆ ಎರಡೂ ತಂಡಗಳಿಗೂ ಮಹತ್ವದ್ದಾಗಿದ್ದು, ಸಣಿಯ ಗೆಲುವು ತಂಡದಲ್ಲಿನ ವಿಶ್ವಾಸವನ್ನು ಹೆಚ್ಚಿಸಲಿದೆ.  2018 ರಿಂದ ತವರಿನಲ್ಲಿ ನಡೆದ T20I ದ್ವಿಪಕ್ಷೀಯ ಸರಣಿಯಲ್ಲಿ ಭಾರತವು ಇನ್ನೂ ದಕ್ಷಿಣ ಆಫ್ರಿಕಾವನ್ನು ಸೋಲಿಸಿಲ್ಲ. ಆದರೆ ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಮಳೆ ಅಡ್ಡಿಯಾಗುವ ಸಾಧ್ಯತೆ:


ಹೌದು, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಇಂದು ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂದ್ಯಕ್ಕೂ ಮುನ್ನ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ಬಿರುಗಾಳಿ ಸಹಿತ ಕೆಲವೆಡೆ ಮಳೆ ಆಗಲಿರುವ ಸಾಧ್ಯತೆ ಇದ್ದು, ಇಲ್ಲವಾದಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಮ್ಮೆ ಮಳೆ ಆದಲ್ಲಿ ಓವರ್​ ಕಡಿಮೆ ಮಾಡಲಾಗುತ್ತದೆ.


ಪಿಚ್​ ವರದಿ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ ಟಿ20 ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಚಿಕ್ಕ ಭಾಗದಲ್ಲಿ ಬೌಂಡರಿಗಳನ್ನು ಹೊಂದಿದ್ದರೂ ದೇಶೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಲು ಈ ಮೈದಾನ ಅಷ್ಟು ಉತ್ತಮವಾಗಿಲ್ಲ. ಇಲ್ಲಿ ಭಾರತ 2 ಪಂದ್ಯಗಳನ್ನು ಆಡಿದ್ದು, ಆಸೀಸ್​ ವಿರುದ್ಧ ಮೆನ್ ಇನ್ ಬ್ಲೂ 122 ರನ್‌ಗಳಿಗೆ ಆಲೌಟ್ ಆಗಿತ್ತು.  ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ನಾಳೆ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.


ಇದನ್ನೂ ಓದಿ: IND vs SA: ಮತ್ತೊಂದು ದಾಖಲೆಯ ಸನಿಹದಲ್ಲಿ ಕಿಂಗ್​ ಕೊಹ್ಲಿ? ರೋಹಿತ್​ ರೆಕಾರ್ಡ್ ಮೇಲೆ ವಿರಾಟ್ ಕಣ್ಣು


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟಿ20 ಸರಣಿಯ 2ನೇ ಪಂದ್ಯವು  ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪಂದ್ಯದ ಟಾಸ್ ಸಂಜೆ 6.30ಕ್ಕೆ ನಡೆಯಲಿದೆ. ಈ ಸರಣಿಯನ್ನು ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದ್ದು, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.


ಇದನ್ನೂ ಓದಿ: Team India: ಅಕ್ಟೋಬರ್​ ತಿಂಗಳಲ್ಲಿನ ಟೀಂ ಇಂಡಿಯಾದ ವೇಳಾಪಟ್ಟಿ, ಇಲ್ಲಿದೆ ಲೈವ್​ ಸ್ಟ್ರೀಮಿಂಗ್​ ಸಂಪೂರ್ಣ ವಿವರ


IND vs SA  ಸಂಭಾವ್ಯ ಪ್ಲೇಯಿಂಗ್ 11:


ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಅಶ್ವಿನ್, ಅರ್ಷದೀಪ್, ಹರ್ಷಲ್ ಪಟೇಲ್, ದೀಪಕ್ ಚಹಾರ್


ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ, ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಶಮ್ಸಿ, ಅನ್ರಿಚ್ ನಾರ್ಟ್ಜೆ

Published by:shrikrishna bhat
First published: