• Home
  • »
  • News
  • »
  • sports
  • »
  • IND vs SA: ಭಾರತ-ಆಫ್ರಿಕಾ ಪಂದ್ಯ; ನಾಯಕತ್ವದಲ್ಲಿ ಬದಲಾವಣೆ, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA: ಭಾರತ-ಆಫ್ರಿಕಾ ಪಂದ್ಯ; ನಾಯಕತ್ವದಲ್ಲಿ ಬದಲಾವಣೆ, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IND vs SA

IND vs SA

IND sv SA ODI: ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವೆ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಇಂದು (ಅಕ್ಟೋಬರ್ 11) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ (Arun Jaitley Stadium) ನಡೆಯುತ್ತಿದೆ.

  • Share this:

ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವೆ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯ ಮೂರನೇ ಮತ್ತು ನಿರ್ಣಾಯಕ ಪಂದ್ಯ ಇಂದು (ಅಕ್ಟೋಬರ್ 11) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ (Arun Jaitley Stadium) ನಡೆಯುತ್ತಿದೆ. ಈಗಾಗಲೇ ಟಾಸ್​ ಗೆದ್ದಿರುವ ಭಾರತ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದು, ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್​ ಆರಂಭಿಸಿದೆ.ಇನ್ನು, ಇಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ನಾಯಕನನ್ನು ಬದಲಾವಣೆ ಮಾಡಿದ್ದು, ಡೇವಿಡ್ ಮಿಲ್ಲರ್ (David Miller) ತಂಡವನ್ನು ಮುನ್ನಡೆಸುತ್ತಿದ್ದಾರೆ. 


ಪಂದ್ಯದ ವಿವರ:


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಸರಣಿಯ 3ನೇ ಪಂದ್ಯವು ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸರಣಿಯ ಎಲ್ಲಾ ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಹಾಗೂ ಲೈವ್ ಸ್ಟ್ರೀಮಿಂಗ್ ಅನ್ನು ನೀವು Disney + Hotstar ನಲ್ಲಿ ವೀಕ್ಷಿಸಬಹುದು.ಪಿಚ್​ ರಿಪೋರ್ಟ್:


ದೆಹಲಿಯ ಫಿರೋಜ್ ಶಾ ಕೋಟ್ಲಾ ಸ್ಟೇಡಿಯಂ ಎಂದು ಹಿಂದೆ ಕರೆಯಲಾಗುತ್ತಿದ್ದ ಅರುಣ್ ಜೇಟ್ಲಿ ಸ್ಟೇಡಿಯಂ ಬ್ಯಾಟಿಂಗ್‌ಗೆ ಉತ್ತಮ ಮೇಲ್ಮೈಯಾಗಿದ್ದರೂ ಸ್ವಲ್ಪ ಇಬ್ಬನಿ ಬೀಳಬಹುದು. ಗಡಿಗಳು ಅಸಾಧಾರಣವಾಗಿ ದೊಡ್ಡದಾಗಿರುವುದಿಲ್ಲ ಮತ್ತು ಔಟ್‌ಫೀಲ್ಡ್ ಕೂಡ ಸ್ವಲ್ಪ ವೇಗವಾಗಿರುತ್ತದೆ. ಇಲ್ಲಿನ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿತ್ತು, ಆದರೆ ಇತ್ತೀಚಿನ ವರ್ಷಗಳಲ್ಲಿ, ಇದು ಗಮನಾರ್ಹ ಮಾರ್ಪಾಡುಗಳಿಗೆ ಒಳಗಾಗಿದೆ.


ಇದನ್ನೂ ಓದಿ: BCCI President: ಬಿಸಿಸಿಐ ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್​ ಬಿನ್ನಿ ಆಯ್ಕೆ? ಕಾರ್ಯದರ್ಶಿಯಾಗಿ ಜಯ್ ಶಾ ಮುಂದುವರಿಕೆ


ಉಭಯ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯ:


ಇನ್ನು, ಇಂದಿನ ಪಂದ್ಯ ಎರಡೂ ತಂಡಗಳಿಗೂ ಮಾಡು ಇ್ಲಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ 3 ಪಂದ್ಯಗಳ ಸರಣಿಯಲ್ಲಿ ಎರಡೂ ತಂಡಗಳು ತಲಾ 1-1 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಸಮಬಲ ಆಗಿದೆ. ಹೀಗಾಗಿ ಇಂದು ಗೆದ್ದ ತಂಡವು ಸರಣಿಯಲ್ಲಿ ವಿಜೇತವಾಘಲಿದೆ. ಆದ್ದರಿಂದ ಇಂದಿನ ಪಂದ್ಯವು ಹೆಚ್ಚು ಮಹತ್ವಪೂರ್ಣವಾಗಿದ್ದು, ಇತ್ತಂಡಗಳು ಗೆಲುವುಗಾಗಿ ಭರ್ಜರಿ ಪೈಪೋಟಿ ನಡೆಸುವ ಸಾಧ್ಯತೆ ಇದೆ.


ಭಾರತ ಈ ಮೈದಾನದಲ್ಲಿ 21 ಏಕದಿನ ಪಂದ್ಯಗಳನ್ನು ಆಡಿದೆ. ಈ ಮೈದಾನದಲ್ಲಿ ಭಾರತ ತಂಡ 12 ಏಕದಿನ ಪಂದ್ಯಗಳನ್ನು ಗೆದ್ದಿದೆ. ಇಲ್ಲಿ ಭಾರತ 7 ಪಂದ್ಯಗಳಲ್ಲಿ ಸೋಲನುಭವಿಸಿದೆ. ಒಂದು ಪಂದ್ಯವನ್ನು ರದ್ದುಗೊಂಡರೆ ಒಂದು ಪಂದ್ಯವು ಫಲಿತಾಂಶವನ್ನು ನೀಡಲಿಲ್ಲ. ಕಳೆದ ಎರಡು ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಇಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿದೆ.


ಇದನ್ನೂ ಓದಿ: T20 World Cup 2022: ಟಿ20ಯಲ್ಲಿ ಅತಿ ಹೆಚ್ಚು ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ 10 ಆಟಗಾರರು, ಭಾರತೀಯರು ಯಾರೆಲ್ಲಾ ಇದ್ದಾರೆ?


IND vs SA ತಂಡ:


ಭಾರತ ತಂಡ: ಶಿಖರ್ ಧವನ್ (ನಾಯಕ) , ಶುಭಮನ್ ಗಿಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಮೊಹಮ್ಮದ್ ಸಿರಾಜ್ , ಅವೇಶ್ ಖಾನ್


ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ , ಜಾನ್ನೆಮನ್ ಮಲನ್ , ರೀಜಾ ಹೆಂಡ್ರಿಕ್ಸ್ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ , ಡೇವಿಡ್ ಮಿಲ್ಲರ್ (ನಾಯಕ) , ಮಾರ್ಕೊ ಯಾನ್ಸೆನ್ , ಆಂಡಿಲ್ ಫೆಹ್ಲುಕ್ವಾಯೊ , ಜೋರ್ನ್ ಫೋರ್ಚುಯಿನ್ , ಲುಂಗಿ ಎನ್ಗಿಡಿ , ಅನ್ರಿಕ್ ನೋಕಿಯಾ.

Published by:shrikrishna bhat
First published: