ಭಾರತ ಕ್ರಿಕೆಟ್ ತಂಡವು ಇಂದಿನಿಂದ ತವರಿನಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಶ್ರೀಲಂಕಾ (IND vs SL) ವಿರುದ್ಧದ 3 ಪಂದ್ಯಗಳ T20 ಸರಣಿಯನ್ನುಆರಂಭಿಸುತ್ತಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಆರಂಭವಾಗಿದ್ದು, ಟಾಸ್ ಗೆದ್ದ ಶ್ರೀಲಂಕಾ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು, ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ 162 ರನ್ ಗಳಿಸುವ ಮೂಲಕ ಶ್ರೀಲಂಕಾ ತಂಡಕ್ಕೆ 163 ರನ್ ಗಳ ಟಾರ್ಗೆಟ್ ನೀಡಿದೆ. ಇನ್ನು, ಇಂದಿನ ಪಂದ್ಯದ ಮೂಲಕ ಶುಭ್ಮನ್ ಗಿಲ್ (Shubman Gill) ಮತ್ತು ಶಿವಂ ಮಾವಿ (Shivam Mavi) ಅವರಿಗೆ ಟೀಂ ಇಂಡಿಯಾ ಕ್ಯಾಪ್ ನೀಡುವ ಮೂಲಕ ಭಾರತ ಟಿ20 ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ. ಈವರೆಗೂ ಭಾರತ ತಂಡ ಶ್ರೀಲಂಕಾ ವಿರುದ್ಧ ಟಿ20 ಸರಣಿ ಸೋತಿಲ್ಲ.
ಭರ್ಜರಿ ಬ್ಯಾಟಿಂಗ್ ಮಾಡಿದ ಹೂಡಾ:
ಇನ್ನು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ 162 ರನ್ ಗಳಿಸುವ ಮೂಲಕ ಶ್ರೀಲಂಕಾ ತಂಡಕ್ಕೆ 163 ರನ್ ಗಳ ಟಾರ್ಗೆಟ್ ನೀಡಿದೆ. ಆದರೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲಿಯೇ ಶುಭ್ಮನ್ ಗಿಲ್ ಕೇವಲ 7 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಬಾಂಗ್ಲಾದೇಶ ವಿರುದ್ಧದ ಹೀರೋ ಇಶನ್ ಕಿಶನ್ 37 ರನ್ ಗಳಿಸಿದರು. ಉಳಿದಂತೆ ಅಂತಿಮವಾಗಿ ದೀಪಕ್ ಹೂಡಾ ಅಬ್ಬರಿಸುವ ಮೂಲಕ ತಂಡದ ಮೊತ್ತ ಹೆಚ್ಚಿಸಿದರು. ಅವರು 23 ಎಸೆತದಲ್ಲಿ 4 ಸಿಕ್ಸ್ ಮತ್ತು 1 ಫೋರ್ ಮೂಲಕ 41 ರನ್ ಗಳಿಸಿದರು. ಉಳಿದಂತೆ ಅಕ್ಷರ್ ಪಟೇಳ್ 31 ರನ್, ನಾಯಕ ಹಾರ್ದಿಕ್ ಪಾಂಡ್ಯ 29 ರನ್, ಸಂಜು ಸ್ಯಾಮ್ಸನ್ 5 ರನ್, ಸೂರ್ಯಕುಮಾರ್ ಯಾದವ್ 7 ರನ್ ಗಳಿಸಿದರು.
#TeamIndia post 162/5 on the board!
4⃣1⃣* for Deepak Hooda
3⃣7⃣ for Ishan Kishan
3⃣1⃣* for Akshar Patel
Over to our bowlers now 👍 👍
Sri Lanka innings underway.
Scorecard ▶️ https://t.co/uth38CaxaP #INDvSL pic.twitter.com/9yrF802Khi
— BCCI (@BCCI) January 3, 2023
ಇನ್ನು, ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಲಂಕಾ ಉತ್ತಮ ಆರಂಭವನ್ನು ಪಡೆಯಿತು. ಆದರೆ ಕೊನೆಯ ಓವರ್ಗಳಲ್ಲಿ ಹೆಚ್ಚಿನ ರನ್ ಬಿಟ್ಟುಕೊಟ್ಟು ಕೊಂಚ ದುಬಾರಿಯಾದರು. ಶ್ರೀಲಂಕಾ ಪರ ದಿಲ್ಶನ್ ಮಧುಶಂಕ, ಮಹೀಶ್ ತೀಕ್ಷಣ, ಚಮಿಕಾ ಕರುಣಾರತ್ನೆ, ಧನಂಜಯ ಡಿ ಸಿಲ್ವಾ ಮತ್ತು ವನಿಂದು ಹಸರಂಗ ತಲಾ 1 ವಿಕೆಟ್ ಪಡೆದರು.
ಇದನ್ನೂ ಓದಿ: Rohit Sharma: ರೋಹಿತ್ ಶರ್ಮಾ ನಾಯಕತ್ವದ ಬಗ್ಗೆ ಮಹತ್ವದ ನಿರ್ಧಾರ, ಬಿಸಿಸಿಐ ಭವಿಷ್ಯದ ಯೋಜನೆ ಏನು?
ಭಾರತ-ಶ್ರೀಲಂಕಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲ್ಲಿಕ್, ಚಹಾಲ್, ಹರ್ಷಲ್ ಪಟೇಲ್
ಶ್ರೀಲಂಕಾ ಪ್ಲೇಯಿಂಗ್ 11: ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ