• Home
  • »
  • News
  • »
  • sports
  • »
  • India vs Sri Lanka T20: ಭಾರತ-ಶ್ರೀಲಂಕಾ ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ವಾಂಖೆಡೆ ಹವಾಮಾನ ವರದಿ, ಲೈವ್ ಸ್ಟ್ರೀಮಿಂಗ್ ವಿವರ

India vs Sri Lanka T20: ಭಾರತ-ಶ್ರೀಲಂಕಾ ಪಂದ್ಯಕ್ಕೆ ಮಳೆ ಅಡ್ಡಿ? ಇಲ್ಲಿದೆ ವಾಂಖೆಡೆ ಹವಾಮಾನ ವರದಿ, ಲೈವ್ ಸ್ಟ್ರೀಮಿಂಗ್ ವಿವರ

IND vs SL 2023

IND vs SL 2023

IND vs SL 1st T20: ಟೀಂ ಇಂಡಿಯಾ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಿದ್ಧವಾಗಿದೆ. ಭಾರತ ಕ್ರಿಕೆಟ್ ತಂಡವು ಇಂದಿನಿಂದ ಅಂದರೆ ಜನವರಿ 3, 2023 ರಿಂದ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಶ್ರೀಲಂಕಾ (IND vs SL) ವಿರುದ್ಧದ 3 ಪಂದ್ಯಗಳ T20 ಸರಣಿಯನ್ನು ಪ್ರಾರಂಭಿಸುತ್ತಿದೆ.

ಮುಂದೆ ಓದಿ ...
  • Share this:

ಟೀಂ ಇಂಡಿಯಾ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಿದ್ಧವಾಗಿದೆ. ಭಾರತ ಕ್ರಿಕೆಟ್ ತಂಡವು ಇಂದಿನಿಂದ ಅಂದರೆ ಜನವರಿ 3, 2023 ರಿಂದ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಶ್ರೀಲಂಕಾ (IND vs SL) ವಿರುದ್ಧದ 3 ಪಂದ್ಯಗಳ T20 ಸರಣಿಯನ್ನು ಪ್ರಾರಂಭಿಸುತ್ತಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯಲಿದೆ. ಹೊಸ ವರ್ಷದಲ್ಲಿ ಭಾರತ ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಇಲ್ಲದೆ ಆರಂಭವಾಗಲಿದೆ. ಟಿ20 ಕ್ರಿಕೆಟ್​ನಿಂದ ಹಿರಿಯರನ್ನು ದೂರವಿಟ್ಟಿ 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಬಿಸಿಸಿಐ ಸಿದ್ಧತೆ ನಡೆಸುತ್ತಿದೆ ಎಂಬುದು ಸ್ಪಷ್ಟವಾಗಿದೆ.


ನಾಯಕತ್ವದಲ್ಲಿ ಯಶಸ್ಸು ಕಂಡಿದ್ದ ಹಾರ್ದಿಕ್:


ಕಳೆದ ವರ್ಷ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಹಾರ್ದಿಕ್ ಪಾಂಡ್ಯ 1-0 ಅಂತರದಲ್ಲಿ ಗೆದ್ದುಕೊಂಡಿದ್ದರು. ಪಾಂಡ್ಯ ಇಂದು ಇಶಾನ್ ಕಿಶನ್ ಮತ್ತು ರಿತುರಾಜ್ ಗಾಯಕ್ವಾಡ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಬಹುದು. ವಿಶ್ವ ನಂ.1 ಟಿ20 ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಮತ್ತು ಮತ್ತು ನಾಯಕ ಪಾಂಡ್ಯ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು. ಆದರೆ, ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಮತ್ತು ರಾಹುಲ್ ತ್ರಿಪಾಠಿ ನಡುವೆ ಯಾರು ಬ್ಯಾಟ್​ ಮಾಡುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.


ಭಾರತ ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪಿಂಗ್ ಆಯ್ಕೆಗಳಾಗಿ ನೋಡುತ್ತಿದೆ. ಬೌಲಿಂಗ್ ವಿಭಾಗದಲ್ಲಿ, ಯಜುವೇಂದ್ರ ಚಹಾಲ್ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್ ಅವರೊಂದಿಗೆ ಅರ್ಷದೀಪ್ ಸಿಂಗ್ ಮತ್ತು ಹರ್ಷಲ್ ಪಟೇಲ್ ಸರಣಿಯನ್ನು ಮುನ್ನಡೆಸುವ ನಿರೀಕ್ಷೆಯಿದೆ.


ವಾಂಖೆಡೆ ಪಿಚ್‌ನ ರಿಪೋರ್ಟ್​:


ವಾಂಖೆಡೆ ಸ್ಟೇಡಿಯಂನ ಪಿಚ್ ಕೆಂಪು ಜೇಡಿಮಣ್ಣಿನ ಪಿಚ್ ಆಗಿದೆ ಮತ್ತು ಬಿಳಿ ಚೆಂಡಿನ ಆಟದಲ್ಲಿ ಸರಿಯಾದ ಬೌನ್ಸ್ ನೀಡುತ್ತದೆ. ಅಲ್ಲದೇ ಸಮುದ್ರ ಮಟ್ಟದ ಗಾಳಿಯಿಂದಾಗಿ ತ್ವರಿತ ಸ್ವಿಂಗ್ ಕೂಡ ಸಂಭವಿಸಬಹುದು. ವಾಂಖೆಡೆ ಸಣ್ಣ ಬೌಂಡರಿಗಳನ್ನು ಹೊಂದಿದ್ದು, ಇದು ದೊಡ್ಡ ಸ್ಕೋರ್ ಮಾಡಲು ಸಹಾಯ ಮಾಡುತ್ತದೆ. ಹೀಗಾಗಿ ಟಾಸ್ ಗೆದ್ದ ನಂತರ, ನಾಯಕನು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಇಶಾನ್ ಕಿಶನ್ ಮತ್ತು ಕುಸಾಲ್ ಮೆಂಡಿಸ್ ಅವರಂತಹ ಬಿಗ್ ಹಿಟ್ಟರ್‌ಗಳು ವಾಂಖೆಡೆಯಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸುವ ಸಾಧ್ಯತೆ ಇದೆ.


ಇದನ್ನೂ ಓದಿ: Cricket Schedule 2023: ಕ್ರಿಕೆಟ್​ ಪ್ರೇಮಿಗಳಿಗೆ ಈ ವರ್ಷ ಭರ್ಜರಿ ಹಬ್ಬ, ಇಲ್ಲಿದೆ 2023ರ ಜನವರಿ-ಡಿಸೆಂಬರ್​ ವರೆಗಿನ ಸಂಪೂರ್ಣ ವೇಳಾಪಟ್ಟಿ


ಹವಾಮಾನ ವರದಿ:


ಪಂದ್ಯ ಭಾರತೀಯ ಕಾಲಮಾನ ರಾತ್ರಿ 7:00 ಗಂಟೆಗೆ ಟಾಸ್​ ಮತ್ತು 7:30ಕ್ಕೆ ಆರಂಭವಾಗಲಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ. ಕ್ರಿಕೆಟ್‌ಗೆ ಸೂಕ್ತವಾದ ಪರಿಸ್ಥಿತಿಗಳು ಮತ್ತು ಇಡೀ ದಿನ ಮಳೆ ಇರುವುದಿಲ್ಲ. ಆದಾಗ್ಯೂ, ಸಂಜೆಯ ವೇಳೆಗೆ ಆರ್ದ್ರತೆಯ ಮಟ್ಟವು 60%ರಷ್ಟಿರುತ್ತದೆ. ಇದರಿಂದಾಗಿ ಸಂಪೂರ್ಣ ಪಂದ್ಯವನ್ನು ವೀಕ್ಷಿಸಬಹುದು.


ಪಂದ್ಯದ ಲೈವ್​ ಸ್ಟ್ರೀಮಿಂಗ್​:


ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು Disney+Hotstar ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ನೋಡಬಹುದು. ಡಿಡಿ ಫ್ರೀ ಡಿಶ್ ಪ್ಲಾಟ್‌ಫಾರ್ಮ್ ಮೂಲಕ ಡಿಡಿ ಸ್ಪೋರ್ಟ್ಸ್‌ನಲ್ಲಿ ಲೈವ್ ಟೆಲಿಕಾಸ್ಟ್ ಅನ್ನು ಉಚಿತವಾಗಿ ನೋಡಬಹುದು. ಭಾರತ vs ಶ್ರೀಲಂಕಾ ಮೊದಲ T20 ಪಂದ್ಯದ ಲೈವ್ ಅಪ್‌ಡೇಟ್‌ಗಳಿಗಾಗಿ ನ್ಯೂಸ್​ 18 ಕನ್ನಡ ವೆಬ್​ಸೈಟ್​ ನೊಡಬಹುದು.


IND vs SL ತಂಡಗಳ ಸಂಭಾವ್ಯ ಪ್ಲೇಯಿಂಗ್ 11:


ಭಾರತದ ಸಂಭಾವ್ಯ ಪ್ಲೇಯಿಂಗ್ 11: ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಸೂರ್ಯಕುಮಾರ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್.


ಶ್ರೀಲಂಕಾ ಸಂಭಾವ್ಯ ಆಟಗಾರರ 11: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (WK), ಅವಿಷ್ಕಾ ಫೆರ್ನಾಂಡೊ, ಚರಿತ್ ಅಸ್ಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ (ಸಿ), ವನಿಂದು ಹಸರಂಗ, ಚಮಿಕಾ ಕರುಣರತ್ನೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ.

Published by:shrikrishna bhat
First published: