ಟೀಂ ಇಂಡಿಯಾ ಹೊಸ ವರ್ಷವನ್ನು ಗೆಲುವಿನೊಂದಿಗೆ ಆರಂಭಿಸಲು ಸಿದ್ಧವಾಗಿದೆ. ಭಾರತ ಕ್ರಿಕೆಟ್ ತಂಡವು ಇಂದಿನಿಂದ ತವರಿನಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಶ್ರೀಲಂಕಾ (IND vs SL) ವಿರುದ್ಧದ 3 ಪಂದ್ಯಗಳ T20 ಸರಣಿಯನ್ನುಆರಂಭಿಸುತ್ತಿದೆ. ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಆರಂಭವಾಗಿದೆ. ಈಗಾಗಲೇ ಟಾಸ್ ಗೆದ್ದ ಶ್ರೀಲಂಕಾ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಲಿದೆ. ಅಲ್ಲದೇ ಇಂದಿನ ಪಂದ್ಯದ ಮೂಲಕ ಶುಭ್ಮನ್ ಗಿಲ್ (Shubman Gill) ಮತ್ತು ಶಿವಂ ಮಾವಿ (Shivam Mavi) ಅವರಿಗೆ ಟೀಂ ಇಂಡಿಯಾ ಕ್ಯಾಪ್ ನೀಡುವ ಮೂಲಕ ಭಾರತ ಟಿ20 ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದಾರೆ.
ಪಂದ್ಯದ ವಿವರ:
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರ ಪ್ರಸಾರವಾಗಲಿದೆ. ಲೈವ್ ಸ್ಟ್ರೀಮಿಂಗ್ ಅನ್ನು Disney+Hotstar ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ನೋಡಬಹುದು. ಡಿಡಿ ಫ್ರೀ ಡಿಶ್ ಪ್ಲಾಟ್ಫಾರ್ಮ್ ಮೂಲಕ ಡಿಡಿ ಸ್ಪೋರ್ಟ್ಸ್ನಲ್ಲಿ ಲೈವ್ ಟೆಲಿಕಾಸ್ಟ್ ಅನ್ನು ಉಚಿತವಾಗಿ ನೋಡಬಹುದು. ಭಾರತ vs ಶ್ರೀಲಂಕಾ ಮೊದಲ T20 ಪಂದ್ಯದ ಲೈವ್ ಅಪ್ಡೇಟ್ಗಳಿಗಾಗಿ ನ್ಯೂಸ್ 18 ಕನ್ನಡ ವೆಬ್ಸೈಟ್ ನೊಡಬಹುದು.
Sri Lanka have won the toss and they will bowl first in the 1st T20I.
A look at our Playing XI for the game.
Live - https://t.co/uth38CaxaP #INDvSL @mastercardindia pic.twitter.com/7cIfzgkttT
— BCCI (@BCCI) January 3, 2023
ಟಿ20 ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದ ಏಷ್ಯಾಕಪ್ನಲ್ಲಿ ಟೀಂ ಇಂಡಿಯಾ ಸೋತಿತ್ತು. ಉಭಯ ತಂಡಗಳು ಇಲ್ಲಿಯವರೆಗೆ T20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 26 ಬಾರಿ ಮುಖಾಮುಖಿಯಾಗಿವೆ. ಈ ಅವಧಿಯಲ್ಲಿ ಭಾರತ 17 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 8 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ನಡುವೆ 9 ಟಿ20 ಅಂತರಾಷ್ಟ್ರೀಯ ಪಂದ್ಯಗಳ ಸರಣಿಯನ್ನು ನಡೆಸಲಾಗಿದ್ದು, ಇದರಲ್ಲಿ ಭಾರತ ತಂಡವು 7 ಬಾರಿ ಜಯಗಳಿಸಿದರೆ, ಶ್ರೀಲಂಕಾ ತಂಡ ಒಂದೇ ಒಂದು ಸರಣಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮತ್ತೊಂದು ಸರಣಿ ಸಮಬಲಗೊಂಡಿದೆ.
ಭಾರತ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಶುಭ್ಮನ್ ಗಿಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಿವಂ ಮಾವಿ, ಉಮ್ರಾನ್ ಮಲ್ಲಿಕ್, ಚಹಾಲ್, ಹರ್ಷಲ್ ಪಟೇಲ್
ಶ್ರೀಲಂಕಾ ಪ್ಲೇಯಿಂಗ್ 11: ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ