ಭಾರತ ಮತ್ತು ಶ್ರೀಲಂಕಾ (IND vs SL) ತಂಡಗಳು ಇಂದು ಅಂದರೆ 2ನೇ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯವು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Maharashtra Cricket Association Stadium) ನಡೆಯುತ್ತಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊಣಕಾಲಿನ ಗಾಯದಿಂದಾಗಿ ಟಿ20 ಸರಣಿಯಿಂದ ಹೊರಗುಳಿದಿರುವ ಸಂಜು ಸ್ಯಾಮ್ಸನ್ ಬದಲಿಗೆ ಈ ಪಂದ್ಯದ ಮೂಲಕ ರಾಹುಲ್ ತ್ರಿಪಾಠಿಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿದೆ.
ಪಿಚ್ ರಿಪೋರ್ಟ್:
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶ್ರೀಲಂಕಾ ಮತ್ತು ಭಾರತ ಎರಡನೇ ಟಿ20 ಪಂದ್ಯ ಇಂದು ನಡೆಯಲಿದೆ. ಇಲ್ಲಿ ಉಭಯ ತಂಡಗಳು 2 ಪಂದ್ಯಗಳನ್ನು ಆಡಿದ್ದು, ಎರಡೂ ತಂಡಗಳು ತಲಾ ಒಂದು ಪಂದ್ಯವನ್ನು ಗೆದ್ದಿವೆ. ಈ ಮೈದಾನವು 50 ಕ್ಕೂ ಹೆಚ್ಚು T20 ಪಂದ್ಯಗಳನ್ನು ಆಯೋಜಿಸಿದೆ ಮತ್ತು ಇಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 162 ರನ್ ಆಗಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಮತ್ತು ಎರಡನೇ ಬ್ಯಾಟ್ ಮಾಡಿದ ತಂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿದೆ. ಕಳೆದ ವರ್ಷ ಪಾಂಡ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ಪ್ರವಾಸದಲ್ಲಿ 2 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡಿದ್ದರೆ, ನ್ಯೂಜಿಲೆಂಡ್ ಪ್ರವಾಸದಲ್ಲಿ 3 ಪಂದ್ಯಗಳ ಸರಣಿಯನ್ನು 1-0 ಅಂತರದಲ್ಲಿ ಗೆದ್ದುಕೊಂಡಿತ್ತು.
#TeamIndia have won the toss and elect to bowl first in the 2nd T20I against Sri Lanka.
A look at our Playing XI for the game.
Live - https://t.co/Fs33WcZ9ag #INDvSL @mastercardindia pic.twitter.com/lhrMwzlotK
— BCCI (@BCCI) January 5, 2023
ಇನ್ನು, ಗಾಯಾಳು ಸಂಜು ಸ್ಯಾಮ್ಸನ್ ಬದಲಿಗೆ ರಾಹುಲ್ ತ್ರಿಪಾಠಿ ಪಾದಾರ್ಪಣೆ ಮಾಡುವ ಅವಕಾಶ ಪಡೆದಿದ್ದಾರೆ. ಮೊಣಕಾಲಿನ ಗಾಯದಿಂದ ಸಂಜು ಹೊರಗುಳಿದಿದ್ದಾರೆ. ಈ ಮೂಲಕ ಅವರು ಟಿ20 ಅಂತರಾಷ್ಟ್ರೀಯ ಪಂದ್ಯಕ್ಕೆ ಎಂಟ್ರಿಕೊಟ್ಟಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ T20I ಸರಣಿಯಿಂದ ಹೊರಗುಳಿದಿದ್ದಾರೆ. ಸಂಜು ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದು, ಉಳಿದ ಎರಡು ಟಿ20 ಪಂದ್ಯಗಳಿಂದ ಹೊರಗುಳಿಯಬೇಕಾಗಿದೆ. ಆದರೆ ಮತ್ತೊಮ್ಮೆ ರುತುರಾಜ್ ಗಾಯಕ್ವಾಡ ಅವರಿಗೆ ಅವಕಾಶ ವಂಚಿತರಾಗಿದ್ದಾರೆ.
ಇದನ್ನೂ ಓದಿ: Ranji Trophy 2023: 21 ಬೌಂಡರಿ, 12 ಸಿಕ್ಸರ್, ರಣಜಿ ಪಂದ್ಯದಲ್ಲಿ ಟಿ20 ಆಟವಾಡಿದ IPL ಆಟಗಾರ
ಭಾರತ-ಶ್ರೀಲಂಕಾ ತಂಡ:
ಭಾರತ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಶುಭ್ಮನ್ ಗಿಲ್,ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ,ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್.
ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ