ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ (IND vs SL) ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ. ಇಂದಿನ ಪಂದ್ಯವು ತಿರುವನಂತಪುರಂನಲ್ಲಿರುವ ಗ್ರೀನ್ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ (Greenfield International Stadium) ನಡೆಯಲಿದೆ. ಈಗಾಗಲೇ ಟಾಸ್ ಗೆದ್ದ ಭಾರತ (Team India) ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಪ್ಲೇಯಿಂಗ್ 11ರಲ್ಲಿ 2 ಮಹತ್ವದ ಬದಲಾವಣೆ ಮಾಡಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ಮತ್ತು ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಮತ್ತು ಉಮ್ರಾನ್ ಮಲಿಕ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ಭಾರತ ಟಿ20 ಸರಣಿಯನ್ನೂ 2-1ರಿಂದ ವಶಪಡಿಸಿಕೊಂಡಿತ್ತು.
ಕೊಹ್ಲಿಗೆ 50ನೇ ಪಂದ್ಯ:
ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ಇದುವರೆಗೆ 49 ಪಂದ್ಯಗಳನ್ನು ಆಡಿದ್ದಾರೆ. ಅಂದರೆ ಇಂದಿನ ಪಂದ್ಯ ಅವರ 50ನೇ ಏಕದಿನ ಪಂದ್ಯವಾಗಲಿದೆ. ಅವರು ಇಲ್ಲಿಯವರೆಗೆ 2337 ರನ್ ಗಳಿಸಿದ್ದಾರೆ. ಇದರಲ್ಲಿ 9 ಶತಕಗಳು ಮತ್ತು 11 ಅರ್ಧ ಶತಕಗಳು ಸೇರಿವೆ. ಇನ್ನು, ಕೊಹ್ಲಿ ಮೂರನೇ ODI ನಲ್ಲಿ MS ಧೋನಿ ಮತ್ತು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ.
#TeamIndia Captain @ImRo45 wins the toss and elects to bat first against Sri Lanka in the third and final ODI.
Washington Sundar and Suryakumar Yadav come in to the XI.
Live - https://t.co/muZgJH3f0i #INDvSL @mastercardindia pic.twitter.com/4TNIPSezrI
— BCCI (@BCCI) January 15, 2023
ಲಂಕಾ ವಿರುದ್ಧ ಭಾರತವೇ ಬಲಿಷ್ಠ:
ಇನ್ನು, ಭಾರತ ಮತ್ತು ಶ್ರೀಲಂಕಾ ಈವರೆಗೂ ಒಟ್ಟು 164 ಏಕದಿನ ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಭಾರತ 95 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 57 ಪಂದ್ಯಗಳಲ್ಲಿ ಜಯ ಗಳಿಸಿದೆ. ಉಳಿದಂತೆ 11 ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ. ಒಂದು ಪಂದ್ಯ ಟೈ ಗೊಂಡಿತ್ತು. ಇನ್ನು, ಕಳೆದ 2 ಪಂದ್ಯಗಳನ್ನೂ ಗೆದ್ದಿರುವ ಭಾರತ ಇಂದಿನ ಪಂದ್ಯವನ್ನೂ ಗೆಲ್ಲುವ ವಿಶ್ವಾಸದಲ್ಲಿದೆ. ಈ ಮೈದಾನದಲ್ಲಿ ಇಲ್ಲಿಯವರೆಗೆ ಟೀಂ ಇಂಡಿಯಾ ಕೇವಲ 1 ಏಕದಿನ ಪಂದ್ಯವನ್ನಾಡಿದೆ.
ಇದನ್ನೂ ಓದಿ: Team India: ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂಗೆ ಬಂದಿದ್ದ ದಾವೂದ್ ಇಬ್ರಾಹಿಂ, ಆಟಗಾರರಿಗೆ ಬಂಪರ್ ಆಫರ್ ನೀಡಿದ್ದ ಭೂಗತ ದೊರೆ!
ಭಾರತ-ಶ್ರೀಲಂಕಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಶ್ರೀಲಂಕಾ ಪ್ಲೇಯಿಂಗ್ 11: ಎನ್ ಫೆರ್ನಾಂಡೋ, ಅವಿಷ್ಕಾ ಫೆರ್ನಾಂಡೋ, ಕುಸಾಲ್ ಮೆಂಡಿಸ್, ಚರಿತ್ ಅಸ್ಲಂಕಾ, ಅಶೆಲ್ ಭಂಡಾರ, ದಸುನ್ ಶನಕ, ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ ಮತ್ತು ಲಹಿರು ಕುಮಾರ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ