ಭಾರತ ಮತ್ತು ಶ್ರೀಲಂಕಾ (IND vs SL) ನಡುವೆ ನಡೆಯುತ್ತಿರುವ ಟಿ20 ಸರಣಿಯ ನಿರ್ಣಾಯಕ ಪಂದ್ಯ ಇಂದು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Saurashtra Cricket Association Stadium) ನಡೆಯಲಿದೆ. ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದು, ಸರಣಿ ಸಮಬಲವಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆದ್ದ ತಂಡ ಸರಣಿ ಜಯ ದಾಖಲಿಸಲಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಬೃಹತ್ ಮೊತ್ತ ಕಲೆಹಾಕುವ ಸಾಧ್ಯತೆ ಹೆಚ್ಚಿದೆ.
ಪಂದ್ಯದ ವಿವರ:
ಭಾರತ ಮತ್ತು ಶ್ರೀಲಂಕಾ ನಡುವಿನ 3ನೇ ಮತ್ತು ಕೊನೆಯ ಟಿ20 ಪಂದ್ಯ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಈ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ+ ಹಾಟ್ಸ್ಟಾರ್ ನಲ್ಲಿ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.
#TeamIndia have won the toss and elect to bat first in the third and final T20I.
We go in with an unchanged Playing XI.
Live - https://t.co/bY4wgiSvMC #INDvSL @mastercardindia pic.twitter.com/SDfhNlastc
— BCCI (@BCCI) January 7, 2023
ರಾಜ್ಕೋಟ್ನ ಪಿಚ್ ಬ್ಯಾಟ್ಸ್ಮನ್ಗಳಿಗೆ ಹೆಚ್ಚು ಸಹಾಯಕವಾಗಿದೆ. ಫ್ಲಾಟ್ ವಿಕೆಟ್ನಲ್ಲಿ, ಬೌಲರ್ಗಳು ವಿಕೆಟ್ಗಳನ್ನು ಪಡೆಯಲು ಸಾಕಷ್ಟು ಕಠಿಣ ಪರಿಶ್ರಮವನ್ನು ಮಾಡಬೇಕಾಗುತ್ತದೆ. ಬ್ಯಾಟರ್ಗಳು ಸಣ್ಣ ಬೌಂಡರಿಗಳ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಪಿಚ್ನಲ್ಲಿ ಹೆಚ್ಚಿನ ಸ್ಕೋರಿಂಗ್ ಸ್ಪರ್ಧೆಯನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಮಾಡಿದೆ. ಕಳೆದ ವರ್ಷ ಭಾರತ ವಿರುದ್ಧದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ತಂಡ 87 ರನ್ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಭಾರತ ತಂಡ ಇಂದು ದೊಡ್ಡ ಮೊತ್ತ ಕಲೆಹಾಕುವ ಸಾಧ್ಯತೆ ಇದೆ.
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಡಿದ 4 ಟಿ20 ಪಂದ್ಯಗಳಲ್ಲಿ ಭಾರತ 3 ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಕಳೆದ ವರ್ಷ ಅಂದರೆ 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಇದೇ ಮೈದಾನದಲ್ಲಿ ಕೊನೆಯ ಬಾರಿಗೆ ಟಿ20 ಪಂದ್ಯವನ್ನು ಆಡಿದ್ದು, ಅದರಲ್ಲಿ 82 ರನ್ಗಳ ಜಯ ಸಾಧಿಸಿತ್ತು. 2019ರಲ್ಲಿ ಭಾರತ ಇಲ್ಲಿ ಬಾಂಗ್ಲಾದೇಶವನ್ನು 8 ವಿಕೆಟ್ಗಳಿಂದ ಸೋಲಿಸಿತ್ತು. ಶ್ರೀಲಂಕಾ ತಂಡ ಇದೇ ಮೈದಾನದಲ್ಲಿ ಮೊದಲ ಬಾರಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದೆ.
ಇದನ್ನೂ ಓದಿ: Joginder Sharma: 120 ಮಹಿಳೆಯರ ಮೇಲೆ ಜಿಲೇಬಿ ಬಾಬಾ ದೌರ್ಜನ್ಯ! ಕಾಮುಕನನ್ನು ಬಂಧಿಸಿದ್ದು ಟೀಂ ಇಂಡಿಯಾ ಕ್ರಿಕೆಟಿಗ!
ಭಾರತ-ಶ್ರೀಲಂಕಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್.
ಶ್ರೀಲಂಕಾ ಪ್ಲೇಯಿಂಗ್ 11: ದಸುನ್ ಶಾನಕ(ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅವಿಷ್ಕ ಫರ್ನಾಂಡೊ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ