ಭಾರತ ಕ್ರಿಕೆಟ್ ತಂಡಕ್ಕೆ ಇಂದು ನಡೆಯಲಿರುವ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯ 'ಮಾಡು ಇಲ್ಲವೇ ಮಡಿ' ಎಂಬಂತಾಗಿದೆ. ಟೀಂ ಇಂಡಿಯಾ (Team India) ಇಂದು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (Saurashtra Cricket Association Stadium) ಶ್ರೀಲಂಕಾ ವಿರುದ್ಧ (IND vs SL) ಸರಣಿಯ 3ನೇ ಮತ್ತು ಕೊನೆಯ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎದುರಿಸಲಿದೆ. ಸದ್ಯ ಎರಡೂ ತಂಡಗಳು ಸರಣಿಯಲ್ಲಿ 1-1ರಲ್ಲಿ ಸಮಬಲ ಸಾಧಿಸಿವೆ. ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದಲ್ಲಿ ಯಾವುದೇ ಸರಣಿಯನ್ನು ಕಳೆದುಕೊಂಡಿಲ್ಲ ಎಂಬುದು ಉತ್ತಮ ಸಂಗತಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಟಿ20 ಪಂದ್ಯ ಗೆದ್ದು ಅಜೇಯ ದಾಖಲೆ ಕಾಯ್ದುಕೊಳ್ಳುವುದು ಅವರ ಪ್ರಯತ್ನವಾಗಿದೆ. ಆದರೆ ಇಂದಿನ ಪಂದ್ಯಕ್ಕೆ ಮಳೆ ವಿಲನ್ ಆಗಲಿದೆಯೇ ಎಂದು ನೋಡೋಣ ಬನ್ನಿ.
ಇಂದು ರಾಜ್ಕೋಟ್ನಲ್ಲಿ ಹವಾಮಾನ ಹೇಗಿರುತ್ತೆ?:
ಪ್ರವಾಸಿ ಶ್ರೀಲಂಕಾ ತಂಡವು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ (ಎಸ್ಸಿಎ ಸ್ಟೇಡಿಯಂ) ಮೊದಲ ಬಾರಿಗೆ ಟಿ20 ಪಂದ್ಯವನ್ನು ಆಡಲಿದೆ. ಆತಿಥೇಯ ಭಾರತ ಇಲ್ಲಿ 4 ಟಿ20 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3ರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಇಂದು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಲಿರುವ ಮೂರನೇ T20 ಪಂದ್ಯದಲ್ಲಿ ರಾಜ್ಕೋಟ್ನಲ್ಲಿ ಹವಾಮಾನವು ಉತ್ತಮವಾಗಿರುತ್ತದೆ ಎಂದು ತಿಳಿದುಬಂದಿದೆ. ದಿನದ ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 24 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಇಡೀ ದಿನ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಂಪೂರ್ಣ ಪಂದ್ಯ ವೀಕ್ಷಿಸುವ ಅವಕಾಶ ಸಿಗಲಿದೆ.
ರಾಜ್ಕೋಟ್ನ ಪಿಚ್ ರಿಪೋರ್ಟ್:
ರಾಜ್ಕೋಟ್ನ ಪಿಚ್ ಬ್ಯಾಟ್ಸ್ಮನ್ಗಳಿಗೆ ಹೆಚ್ಚು ಸಹಾಯಕವಾಗಿದೆ. ಫ್ಲಾಟ್ ವಿಕೆಟ್ನಲ್ಲಿ, ಬೌಲರ್ಗಳು ವಿಕೆಟ್ಗಳನ್ನು ಪಡೆಯಲು ಸಾಕಷ್ಟು ಕಠಿಣ ಪರಿಶ್ರಮವನ್ನು ಮಾಡಬೇಕಾಗುತ್ತದೆ. ಬ್ಯಾಟರ್ಗಳು ಸಣ್ಣ ಬೌಂಡರಿಗಳ ಲಾಭವನ್ನು ಪಡೆಯಬಹುದು. ಅಂತಹ ಪರಿಸ್ಥಿತಿಯಲ್ಲಿ, ಈ ಪಿಚ್ನಲ್ಲಿ ಹೆಚ್ಚಿನ ಸ್ಕೋರಿಂಗ್ ಸ್ಪರ್ಧೆಯನ್ನು ಕಾಣಬಹುದು. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾ ಹೊರತುಪಡಿಸಿ, ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ದೊಡ್ಡ ಸ್ಕೋರ್ ಮಾಡಿದೆ. ಕಳೆದ ವರ್ಷ ಭಾರತ ವಿರುದ್ಧದ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ತಂಡ 87 ರನ್ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ನಾಳೆ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮ=ಆಯ್ಕೆ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: IND vs SL: ಮೈದಾನ ಯಾವುದೇ ಇರಲಿ, ಈ ಲಂಕಾ ಆಟಗಾರನದ್ದೇ ಅಬ್ಬರ! ಇವ್ರು ಕಣಕ್ಕಿಳಿದ್ರೆ ಟೀಂ ಇಂಡಿಯಾಗೆ ಚಳಿ-ಜ್ವರ ಗ್ಯಾರಂಟಿ!
ಭಾರತ ಮತ್ತು ಶ್ರೀಲಂಕಾ ಹೆಡ್ ಟು ಹೆಡ್:
ಭಾರತ ಮತ್ತು ಶ್ರೀಲಂಕಾ ನಡುವೆ ಈವರೆಗೆ ಒಟ್ಟು 28 ಟಿ20 ಅಂತಾರಾಷ್ಟ್ರೀಯ ಪಂದ್ಯಗಳು ನಡೆದಿವೆ. ಟೀಂ ಇಂಡಿಯಾ 18 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಗೆದ್ದಿದೆ. ಈ ಸಂದರ್ಭದಲ್ಲಿ ಒಂದು ಪಂದ್ಯ ರದ್ದಾಗಿತ್ತು. ಶ್ರೀಲಂಕಾ ವಿರುದ್ಧದ ಟಿ20ಯಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 7 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 2 ಪಂದ್ಯಗಳನ್ನು ಗೆದ್ದಿದೆ. ಚೇಸಿಂಗ್ ಸಮಯದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ 10 ಪಂದ್ಯಗಳನ್ನು ಗೆದ್ದಿದ್ದರೆ, ಪ್ರವಾಸಿ ತಂಡದ ಖಾತೆಯಲ್ಲಿ 7 ಗೆಲುವುಗಳಿವೆ.
IND vs SL ಸಂಭಾವ್ಯ ತಂಡ:
ಭಾರತ ಸಂಭಾವ್ಯ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್ , ಶಿವಂ ಮಾವಿ.
ಶ್ರೀಲಂಕಾ ಸಂಭಾವ್ಯ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ದಸುನ್ ಶಾನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ