ಭಾರತ ಮತ್ತು ಶ್ರೀಲಂಕಾ ಕ್ರಿಕೆಟ್ ತಂಡಗಳು (IND vs SL 3 ನೇ T20) ಇಂದು ಮೂರನೇ ಮತ್ತು ನಿರ್ಣಾಯಕ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ (Saurashtra Cricket Association Stadium) ಈ ಪಂದ್ಯ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಆಕರ್ಷಕ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ಭಾರತ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸುವ ಮೂಲಕ ಶ್ರೀಲಂಕಾಗೆ 229 ರನ್ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಅಬ್ಬರಿಸಿದ ಸೂರ್ಯಕುಮಾರ್ ಯಾದವ್:
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಇಂದು ಸೂರ್ಯಕುಮಾರ್ ಯಾದವ್ ಮತ್ತೆ ಅಬ್ಬರಿಸಿದರು. ಸಿಕ್ಸ್ಗಳ ಸುರಿಮಳೆಗೈದ ಯಾದವ್ ಭರ್ಜರಿಯಾಗಿ ಟಿ20 ಕ್ರಿಕೆಟ್ನಲ್ಲಿ ತಮ್ಮ 3ನೇ ಶತಕ ಸಿಡಿಸಿದರು. ಈ ಮೂಲಕ ಭಾರತ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 228 ರನ್ ಗಳಿಸಿದರು. ಭಾರತದ ಪರ ಸೂರ್ಯಕುಮಾರ್ ಯಾದವ್ 52 ಎಸೆತದಲ್ಲಿ 9 ಸಿಕ್ಸ್ ಮತ್ತು 7 ಪೋರ್ಗಳ ಮೂಲಕ 112 ರನ್ ಗಳಿಸಿದರು. ಉಳದಂತೆ, ಇಶಾನ್ ಕಿಶನ್ 1 ರನ್, ಶುಭ್ಮನ್ ಗಿಲ್ 46 ರನ್, ರಾಹುಲ್ ತ್ರಿಪಾಠಿ 35 ರನ್, ನಾಯಕ ಹಾರ್ದಿಕ್ ಪಾಂಡ್ಯ 4 ರನ್, ದೀಪಕ್ ಹೂಡ 4 ರನ್ ಮತ್ತು ಅಕ್ಷರ್ ಪಟೇಲ್ 21 ರನ್ ಗಳಿಸಿ ತಂಡದ ಮೊತ್ತ 200ರ ಗಡಿ ದಾಟುವಲ್ಲಿ ಪ್ರಮುಖಪಾತ್ರವಹಿಸಿದರು.
𝓢𝓮𝓷𝓼𝓪𝓽𝓲𝓸𝓷𝓪𝓵 𝓢𝓾𝓻𝔂𝓪 👏👏
3⃣rd T20I ton for @surya_14kumar & what an outstanding knock this has been 🧨 🧨#INDvSL @mastercardindia pic.twitter.com/kM1CEmqw3A
— BCCI (@BCCI) January 7, 2023
ಇಂದು ಲಂಕಾ ಬೌಲರ್ಗಳು ಟೀಂ ಇಂಡಿಯಾದ ಆಟಗಾರ ಸೂರ್ಯಕುಮಾರ್ ಯಾದವ್ ಅಬ್ಬರವನ್ನು ತಡೆಯಲು ಸಾಧ್ಯವಾಗದೇ ಹೋದರು. ಲಂಕಾ ಪರ ದಿಲ್ಶನ್ ಮಧುಶಂಕ 2 ವಿಕೆಟ್, ಕಸುನ್ ರಜಿತಾ, ಚಮಿಕಾ ಕರುಣಾರತ್ನೆ ಮತ್ತು ವನಿಂದು ಹಸರಂಗ ತಲಾ 1 ವಿಕೆಟ್ ಪಡೆದರು.
ಸೌರಾಷ್ಟ್ರ ಪಿಚ್ ಭಾರತಕ್ಕೆ ಅದೃಷ್ಟ:
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆಡಿದ 4 ಟಿ20 ಪಂದ್ಯಗಳಲ್ಲಿ ಭಾರತ 3 ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯದಲ್ಲಿ ಸೋಲು ಕಂಡಿದೆ. ಕಳೆದ ವರ್ಷ ಅಂದರೆ 2022ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಇದೇ ಮೈದಾನದಲ್ಲಿ ಕೊನೆಯ ಬಾರಿಗೆ ಟಿ20 ಪಂದ್ಯವನ್ನು ಆಡಿದ್ದು, ಅದರಲ್ಲಿ 82 ರನ್ಗಳ ಜಯ ಸಾಧಿಸಿತ್ತು. 2019ರಲ್ಲಿ ಭಾರತ ಇಲ್ಲಿ ಬಾಂಗ್ಲಾದೇಶವನ್ನು 8 ವಿಕೆಟ್ಗಳಿಂದ ಸೋಲಿಸಿತ್ತು. ಶ್ರೀಲಂಕಾ ತಂಡ ಇದೇ ಮೈದಾನದಲ್ಲಿ ಮೊದಲ ಬಾರಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದೆ.
ಇದನ್ನೂ ಓದಿ: PAK vs NZ: 35ನೇ ವಯಸ್ಸಿನಲ್ಲಿ ತಂಡಕ್ಕೆ ಕಂಬ್ಯಾಕ್,! ಕೇವಲ 12 ದಿನದಲ್ಲಿ ಬದಲಾಯ್ತು ಅದೃಷ್ಟ
ಭಾರತ-ಶ್ರೀಲಂಕಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಯುಜುವೇಂದ್ರ ಚಾಹಲ್.
ಶ್ರೀಲಂಕಾ ಪ್ಲೇಯಿಂಗ್ 11: ದಸುನ್ ಶಾನಕ(ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಅವಿಷ್ಕ ಫರ್ನಾಂಡೊ, ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತಾ, ದಿಲ್ಶನ್ ಮಧುಶಂಕ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ