India vs Zimbabwe 1st ODI: ಟಾಸ್​ ಗೆದ್ದ ಟೀಂ ಇಂಡಿಯಾ, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್ 11

ಭಾರತ ಮತ್ತು ಜಿಂಬಾಬ್ವೆ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಟಾಸ್​ ಗೆದ್ದಿರುವ ಟೀಂ ಇಂಡಿಯಾದ ನಾಯಕ ಕೆಎಲ್ ರಾಹುಲ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IND vs ZIM

IND vs ZIM

  • Share this:
ಭಾರತ ಮತ್ತು ಜಿಂಬಾಬ್ವೆ  (IND vs ZIM) ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯ ಇಂದು ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ಟಾಸ್​ ಆಗಿದ್ದು, ಟಾಸ್​ ಗೆದ್ದಿರುವ ಟೀಂ ಇಂಡಿಯಾದ ನಾಯಕ ಕೆಎಲ್ ರಾಹುಲ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಜಿಂಬಾಬ್ವೆ ತಂಡವು ಮೊದಲು ಬ್ಯಾಟಿಂಗ್ ಆರಂಭಿಸಲಿದೆ. ಈ ಸರಣಿಯು ಮುಂಬರುವ ಏಷ್ಯಾ ಕಪ್​ 2022 (Asia Cup 2022) ಮತ್ತು ಐಸಿಸಿ ಟಿ20 ವಿಶ್ವಕಪ್​ನ (ICC T20 World Cup) ತಯಾರಿ ಪಂದ್ಯವಾಗಿ ಗುರುತಿಸಿಕೊಂಡಿದೆ. ಯುವ ತಂಡವಾಗಿರುವುದಿರಂದ ಬಹಳಷ್ಟು ಆಟಗಾರರು ಅಂತರಾಷ್ಟ್ರೀಯ ತಂಡದಲ್ಲಿ ಮಿಂಚಲು ಕಾತುರರಾಗಿದ್ದಾರೆ.

ಪಿಚ್​ ವರದಿ:

ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತ ಮತ್ತು ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯವು ನಡೆಯುತ್ತಿದೆ. ಈ ಪಿಚ್​ ಬ್ಯಾಟರ್‌ಗಳು ಮತ್ತು ಬೌಲರ್‌ಗಳಿಗೆ ಸಮತೋಲಿತವಾಗಿದೆ. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ವೇಗಿಗಳು ಹೆಚ್ಚು ಪರಿಣಾಮಕಾರಿಯಾಗಿ ಬೌಲಿಂಗ್​ ಮಾಡುವ ಸಾಧ್ಯತೆಯಿದೆ. ಇಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ ಕೇವಲ 231 ರನ್ ಮತ್ತು 2ನೇ ಬ್ಯಾಟಿಂಗ್​ ಮಾಡುವ ತಂಡಕ್ಕೆ ಪಿಚ್​ ಹೆಚ್ಚು ಸಹಾಯಕವಾಗಿರಲಿದೆ. ಹೀಗಾಗಿ ಟಾಸ್​ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಂತೆ ಕಾಣುತ್ತದೆ.

ಇನ್ನು, ಇಂದಿನ ಪಂದ್ಯದ ನೇರ ಪ್ರಸಾರವನ್ನು ನೀವು ಸೋನಿ ಚಾನೆಲ್ ನಲ್ಲಿ ನೋಡನಬಹುದು. ಸೋನಿ ಲೈವ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ರಾಹುಲ್ ತ್ರಿಪಾಠಿಗೆ ನಿರಾಸೆ:

ಹೌದು, ರಾಹುಲ್ ತ್ರಿಪಾಠಿ ಇಂದಿನ ಪಮದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇಂದು ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಅಂತಿಮ 11ರ ಬಳಗದಲ್ಲಿ ಅವರು ಕಾಣಿಸಿಕೊಳ್ಳದೇ ನಿರಾಸೆ ಅನುಭವಿಸಿದ್ದಾರೆ. ಇನ್ನು, ಭಾರತ ಮತ್ತು ಜಿಂಬಾಬ್ವೆ ತಂಡಗಳು ಬರೋಬ್ಬರಿ 6 ವರ್ಷಗಳ ನಂತರ ಮುಖಾಮುಖಿ ಆಗುತ್ತಿವೆ. ಅಲ್ಲದೇ  1997 ರಿಂದ ಜಿಂಬಾಬ್ವೆಯಲ್ಲಿ ಭಾರತ ಒಂದೇ ಒಂದು ಸರಣಿಯನ್ನು ಕಳೆದುಕೊಂಡಿಲ್ಲ. ಇನ್ನು ಮೊದಲ ಏಕದಿನ ಪಂದ್ಯದ ಮೂಲಕ ಗಾಯದಿಂದ ಕಮ್ ಬ್ಯಾಕ್ ಮಾಡುತ್ತಿರುವ ಕೆಎಲ್ ರಾಹುಲ್ ಪ್ರದರ್ಶನದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅವರು ಧವನ್ ಜೊತೆ ಓಪನರ್​ ಆಗಿ ಕಣಕ್ಕಿಳಿಯುತ್ತಾರೆ.

ಇದನ್ನೂ ಓದಿ: Virat Kohli: ಏಷ್ಯಾಕಪ್​ಗೆ ವಿರಾಟ್ ಭರ್ಜರಿ ತಯಾರಿ, ವರ್ಕೌಟ್ ವಿಡಿಯೋ ಹಂಚಿಕೊಂಡ ಕೊಹ್ಲಿ

IND vs ZIM ಅಂತಿಮ ತಂಡ:

ಭಾರತ ತಂಡ: ಕೆಎಲ್ ರಾಹುಲ್(ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಷರ್ ಪಟೇಲ್, ದೀಪಕ್ ಚಾಹರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಜಿಂಬಾಬ್ವೆ ತಂಡ:  ರೆಗಿಸ್ ಚಕಬ್ವಾ (ನಾಯಕ), ಇನೊಸೆಂಟ್ ಕೈಯಾ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ಸೀನ್ ವಿಲಿಯಮ್ಸ್,  ಸಿಕಂದರ್ ರಾಜಾ,  ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ರಿಚರ್ಡ್ ನಾಗರವಾ.
Published by:shrikrishna bhat
First published: