India vs Zimbabwe 2nd ODI: ಟಾಸ್ ಗೆದ್ದ ಟೀಂ ಇಂಡಿಯಾ, ತಂಡದಿಂದ ಪ್ರಮುಖ ಬೌಲರ್ ಔಟ್​

ಜಿಂಬಾಬ್ವೆಯ ಹರಾರೆ ಮೈದಾನದಲ್ಲಿ ಇಂದು ಭಾರತ ಮತ್ತು ಜಿಂಬಾಬ್ವೆಯ 2ನೇ ಏಕದಿನ ಪಂದ್ಯ ನಡೆಯುತ್ತಿದೆ. ಟಾಸ್​ ಗೆದ್ದಿರುವ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

IND vs ZIM

IND vs ZIM

  • Share this:
ಭಾರತ ಮತ್ತು ಜಿಂಬಾಬ್ವೆ  (IND vs ZIM) ನಡುವಿನ 3 ಪಂದ್ಯಗಳ ಏಕದಿನ ಸರಣಿಯು ಈಗಾಗಲೇ ಆರಂಭವಾಗಿದ್ದು, ಭಾರತ ತಂಡ (Team India) ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈ ವಶ ಮಾಡಿಕೊಳ್ಳುವ ತವಕದಲ್ಲಿ ಟೀಂ ಇಂಡಿಯಾವಿದೆ. ಇಂದು ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ (ODI) ಈಗಾಗಲೇ ಟಾಸ್​ ಗೆದ್ದಿರುವ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ (KL Rahul) ​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅಲ್ಲದೇ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಸ್ಟಾರ್​ ಬೌಲರ್​ ಆದ ಚಹಾಲ್​ ಅವರನ್ನು ಕೈ ಬಿಡಲಾಗಿದ್ದು, ಅವರ ಬದಲಿಗೆ ಶಾರ್ದೂಲ್ ಠಾಕೂರ್ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ವಿವರ:

ಭಾರತ ಮತ್ತು ಜಿಂಬಾಬ್ವೆ ನಡುವಿನ 3 ಪಂದ್ಯಗಳ ಏಕದಿನ ಸರಣಿಯು ಇಂದಿನಿಂದ ಹರಾರೆ ಸ್ಪೋರ್ಟ್ ಕ್ಲಬ್ ಮೈದಾನದಲ್ಲಿ ನಡೆಯಲಿದೆ.  ಭಾರತೀಯ ಕಾಲಮಾನ ಮಧ್ಯಾಹ್ನ 12:45ಕ್ಕೆ ಪ್ರಾರಂಭವಾಗಲಿದೆ. ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿರುವ ಪಿಚ್ ಒಣ ಮೈದಾನವಾಗಿರುವುದರಿಂದ ಇದು ಬೌಲರ್​ಗಳಿಗೆ ಮತ್ತು ಬ್ಯಾಟರ್​ಗಳಿಗೆ ಹೆಚ್ಚು ಸಹಾಯವಾಗಿರುತ್ತದೆ.

ಚಹಾಲ್​ ಬದಲು ಶಾರ್ದೂಲ್ ಠಾಕೂರ್:

ಹೌದು, ಜಿಂಬಾಬ್ವೆ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಆಗಿದೆ. ಈ ಪಂದ್ಯದಲ್ಲಿ ತಂಡದ ಪ್ರಮುಖ ಬೌಲರ್ ಆದ ಯಜ್ವೇಂದ್ರ ಚಹಾಲ್​ ಅವರನ್ನು ಕೈ ಬಿಡಲಾಗಿದೆ. ಅವರ ಬದಲಾಗಿ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಲಿಲ್ಲ. ಆದರೆ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಮತ್ತು ರಾಹುಲ್ ಇಂದು ಬ್ಯಾಟಿಂಗ್ ಮಾಡುತ್ತಾರೆಯೇ ಎಂದು ಕಾದು ನೋಡಬೇಕಿದೆ.

ಸರಣಿ ಗೆಲ್ಲುವ ತವಕದಲ್ಲಿ ಭಾರತ:

ಹೌದು, ಈಗಾಗಲೇ ಜಿಂಬಾಬ್ವೆ ನಡುವಿನ 3 ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ಹೀಗಾಗಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದರಿಂದಾಗಿ ಇಂದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕೈ ವಶ ಮಾಡಿಕೊಳ್ಳುವ ತವಕದಲ್ಲಿ ರಾಹುಲ್ ಪಡೆ ಇದೆ. ಆದರೆ ಇಂದಿನ ಪಂದ್ಯವನ್ನು ಹೇಗಾದರೂ ಗೆದ್ದು ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಜಿಂಬಾಬ್ವೆ ಹವಣಿಸುತ್ತಿದೆ.

ಇದನ್ನೂ ಓದಿ: Virat Kohli: ಶತಕವಿಲ್ಲದೆ 1000 ದಿನ, ಪಾಕ್ ವಿರುದ್ಧವಾದರೂ ಅಬ್ಬರಿಸುತ್ತಾ ಕೊಹ್ಲಿ ಬ್ಯಾಟ್​?

IND vs ZIM ಪ್ಲೇಯಿಂಗ್​ 11:

ಭಾರತ ತಂಡ: ಕೆಎಲ್ ರಾಹುಲ್(ನಾಯಕ), ಶಿಖರ್ ಧವನ್, ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: Ben Stokes: ದುಬಾರಿ ಕಾರುಗಳ ಒಡೆಯ ಇಂಗ್ಲೆಂಡ್​ನ ಈ ಸ್ಟಾರ್ ಆಲ್ ರೌಂಡರ್, ಬೆನ್ ಸ್ಟೋಕ್ಸ್ ಆದಾಯ ಕೇಳಿದ್ರೆ ಶಾಕ್​ ಆಗ್ತಿರಾ!

ಜಿಂಬಾಬ್ವೆ ತಂಡ: ರೆಗಿಸ್ ಚಕಬ್ವಾ(ನಾಯಕ), ಇನೋಸೆಂಟ್ ಕೈಯಾ, ತಕುದ್ಜ್ವಾನಾಶೆ ಕೈಟಾನೊ, ವೆಸ್ಲಿ ಮಾಧೆವೆರೆ, ಸೀನ್ ವಿಲಿಯಮ್ಸ್, ಸಿಕಂದರ್ ರಾಜಾ,  ರಿಯಾನ್ ಬರ್ಲ್, ಲ್ಯೂಕ್ ಜೊಂಗ್ವೆ, ಬ್ರಾಡ್ ಇವಾನ್ಸ್, ವಿಕ್ಟರ್ ನ್ಯೌಚಿ, ತನಕಾ ಚಿವಾಂಗಾ.
Published by:shrikrishna bhat
First published: