HOME » NEWS » Sports » INDIAN KABADDI ASSOCIATION TEMPORARILY SUSPENDED DAKSHINA KANNADA KABADDI PLAYER SACHIN PRATHAP SCT

ರಾಷ್ಟ್ರೀಯ ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ಸುಳ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ  ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ಭಾರತ ಕಬಡ್ಡಿ ತಂಡದ ಸೀನಿಯರ್‌ ವಿಭಾಗದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆದರೆ, ಅವರಿಗೆ ತರಬೇತಿ ಶಿಬಿರಕ್ಕೆ ಆಹ್ವಾನ ನೀಡಿಲ್ಲ.

news18-kannada
Updated:October 6, 2020, 1:48 PM IST
ರಾಷ್ಟ್ರೀಯ ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ಸುಳ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!
ಕಬಡ್ಡಿ ಆಟಗಾರ ಸಚಿನ್ ಪ್ರತಾಪ್
  • Share this:
ಮಂಗಳೂರು (ಅ. 6): ಈ ಬಾರಿಯ ಭಾರತ ಕಬಡ್ಡಿ ತಂಡದ ಸೀನಿಯರ್‌ ವಿಭಾಗದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಕರ್ನಾಟಕದ ಏಕೈಕ ಕಬಡ್ಡಿ ಪಟುವಿಗೆ ತರಬೇತಿ ಶಿಬಿರಕ್ಕೆ ಪಾಲ್ಗೊಳ್ಳಲು ಆಹ್ವಾನ ನೀಡದೆ ತಡೆ ಒಡ್ಡಿರುವ ವಿಚಾರ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ  ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಸಚಿನ್‌ ಪ್ರತಾಪ್‌ ಮೊದಲ ಹಂತದ ಆನ್‌ಲೈನ್‌ ತರಬೇತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಸಿಗದಿರುವ ಕ್ರೀಡಾಪಟು. ನಿಮ್ಮ ಆಯ್ಕೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎನ್ನುವ ಉತ್ತರ ದೆಹಲಿ ರಾಷ್ಟ್ರೀಯ ಅಮೆಚೂರ್‌ ಅಸೋಸಿಯೇಷನ್‌ನಿಂದ ಬಂದಿದ್ದು ಹಳ್ಳಿಗಾಡಿನ ಪ್ರತಿಭೆಗೆ ಕಬಡ್ಡಿ ಆಡುವ ಅವಕಾಶ ಕೈ ತಪ್ಪುವ ಆತಂಕ ಕಾಡಿದೆ.

ಸೀನಿಯರ್‌ ರಾಷ್ಟ್ರೀಯ ಕಬಡ್ಡಿ ಕೂಟದಲ್ಲಿ ತೋರಿದ ಅಮೋಘ ಪ್ರದರ್ಶನದಿಂದಾಗಿ ಸಚಿನ್‌ ಪ್ರತಾಪ್‌ ಅವರು ಆರು ತಿಂಗಳ ಹಿಂದೆ ಭಾರತ ಕಬಡ್ಡಿ ತಂಡದ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ದೇಶದ ನಾನಾ ರಾಜ್ಯಗಳಿಂದ ಆಯ್ಕೆಗೊಂಡ 28 ಸ್ಪರ್ಧಿಗಳ ಪೈಕಿ ಕರ್ನಾಟಕದಿಂದ ಆಯ್ಕೆಗೊಂಡ ಏಕೈಕ ಆಟಗಾರ ಎಂಬುದು ಇವರ ಹೆಗ್ಗಳಿಕೆಯಾಗಿದೆ. ಈ 28 ಮಂದಿ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿದ್ದರು.

Indian Kabaddi Association Temporarily Suspended Dakshina Kannada Kabaddi Player Sachin Prathap
ಕಬಡ್ಡಿ ಆಟಗಾರ ಸಚಿನ್ ಪ್ರತಾಪ್


ಕೋವಿಡ್ ಕಾರಣದಿಂದ ಮುಂದೂಡಿದ್ದ ತರಬೇತಿ ಶಿಬಿರದ ಪ್ರಥಮ ಅವಧಿ ಆನ್‌ಲೈನ್‌ ಕ್ಲಾಸ್‌ ತರಗತಿಗಳು ಕೆಲ ದಿನಗಳ ಹಿಂದೆ ಮುಗಿದಿದೆ. ತರಬೇತಿಗೆ ಪಾಲ್ಗೊಳ್ಳಲು ದೆಹಲಿಯಲ್ಲಿರುವ ರಾಷ್ಟ್ರೀಯ ಕಬಡ್ಡಿ ಅಸೋಸಿಯೇಷನ್‌ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪ್ರತಾಪ್‌ ಅವರ ಹೆಸರನ್ನು ಕೈ ಬಿಡಲಾಗಿತ್ತು. ಉಳಿದ ಎಲ್ಲ ರಾಜ್ಯಗಳಿಂದ ಆಯ್ಕೆಗೊಂಡ 27 ಆಟಗಾರರ ಹೆಸರು ಇದೆ. ಈ ಬಗ್ಗೆ ಅಸೋಸಿಯೇಷನ್‌ ಬಳಿ ವಿಚಾರಿಸಿದರೆ ಆಯ್ಕೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂಬ ಉತ್ತರ ಬಂದಿದೆ.

ಇದನ್ನೂ ಓದಿ: ಡ್ರಗ್ ಕೇಸ್​ನಲ್ಲಿ ತನಿಖೆಗೆ ಸಹಕರಿಸದ ಮುತ್ತಪ್ಪ ರೈ ಮಗ ರಿಕ್ಕಿ ರೈ ಸಿಸಿಬಿ ವಶಕ್ಕೆ

ರಾಷ್ಟ್ರೀಯ ಸಂಭಾವ್ಯ ತಂಡಕ್ಕೆ ಕರ್ನಾಟಕ ಕಬಡ್ಡಿ ಅಸೋಸಿಯೇಷನ್‌ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ರಾಜ್ಯದಿಂದ ಸೀನಿಯರ್‌ ವಿಭಾಗದಲ್ಲಿ ಪ್ರತಾಪ್‌ ಹಾಗೂ ಜೂನಿಯರ್‌ ವಿಭಾಗದಲ್ಲಿ ದ.ಕ.ಜಿಲ್ಲೆಯ ವಿನೋದ್‌ ಅವರು ಆಯ್ಕೆ ಆಗಿದ್ದರು. ಪ್ರತಾಪ್‌ ಮಾತ್ರವಲ್ಲದೆ ವಿನೋದ್‌ ಈ ಇಬ್ಬರಿಗೂ ತರಬೇತಿ ಶಿಬಿರಕ್ಕೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಸಂಭ್ಯಾವ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರತಾಪ್‌ ಪ್ರಥಮ ಸ್ಥಾನ ಪಡೆದು ರಾಜ್ಯದಿಂದ ಆಯ್ಕೆಗೊಂಡಿದ್ದರು. ಆದರೆ ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನಲ್ಲಿ ಕೆಲವು ಸಮಸ್ಯೆಗಳು ಇರುವ ಕಾರಣದಿಂದ ಈ ಪ್ರತಿಭಾವಂತ ಕ್ರೀಡಾ ಪಟುವಿಗೆ ಅವಕಾಶ ತಪ್ಪಿದಂತಾಗಿದೆ.
Youtube Video
ಈ ಹಿನ್ನೆಲೆಯಲ್ಲಿ ಪ್ರತಾಪ್ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡರಲ್ಲಿ ತನ್ನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದು, ಸಚಿವರು ಈತನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ದೆಹಲಿಗೆ ತೆರಳಿ ಕ್ರಿಡಾ ಸಚಿವಾಲಯದ ಅಧಿಕಾರಿಗಳಲ್ಲಿ ಸಮಾಲೋಚನೆ ನಡೆಸುವ ಭರವಸೆಯನ್ನೂ ನೀಡಿದ್ದಾರೆ. ಪ್ರೋ ಕಬಡ್ಡಿಯಲ್ಲಿ ಉತ್ತಮ ರೈಡರ್ ಆಗಿ ಗುರುತಿಸಿಕೊಂಡಿರುವ ಪ್ರತಾಪ್ ಗೆ ತನ್ನಲ್ಲಿ ಎಲ್ಲಾ ಅರ್ಹತೆಗಳಿದ್ದರೂ, ಕರ್ನಾಟಕ ಕಬಡ್ಡಿ ಅಸೋಸಿಯೇಷನ್ ನ ಸಮಸ್ಯೆಗಳಿಂದಾಗಿ ಅವಕಾಶ ತಪ್ಪುತ್ತಿದೆ. ಈ ನಿಟ್ಟಿನಲ್ಲಿ ಸರಕಾರ ಈ ಬಗ್ಗೆ ಗಮನಹರಿಸಿ ಈ ಪ್ರತಿಭಾವಂತ ಕ್ರೀಡಾಪಟುವಿನ ಕ್ರೀಡಾ ಭವಿಷ್ಯಕ್ಕೆ ಆಸರೆಯಾಗಬೇಕಿದೆ.
Published by: Sushma Chakre
First published: October 6, 2020, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories